Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಧರ್ಮೋಪದೇಶಕಾಂಡ 26:19 - ಪರಿಶುದ್ದ ಬೈಬಲ್‌

19 ಎಲ್ಲಾ ಜನಾಂಗಗಳಿಗಿಂತ ನಿಮ್ಮನ್ನು ಬಲಿಷ್ಠರಾದ ಜನಾಂಗವನ್ನಾಗಿ ಮಾಡುವನು. ದೇವರು ನಿಮಗೆ ಜನರಿಂದ ಹೊಗಳಿಕೆಯನ್ನು, ಪ್ರಖ್ಯಾತಿಯನ್ನು ಮತ್ತು ಗೌರವವನ್ನು ಬರಮಾಡುವನು; ಆತನು ವಾಗ್ದಾನ ಮಾಡಿದಂತೆಯೇ ನೀವು ಪವಿತ್ರ ಜನರಾಗುವಿರಿ.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

19 ಸ್ವಕೀಯಜನರಾಗಿ ಇರುವರೆಂದೂ, ನಾನು ನಿರ್ಮಿಸಿದ ಬೇರೆ ಎಲ್ಲಾ ಜನಾಂಗಗಳಿಗಿಂತಲೂ ಇವರಿಗೆ ಹೆಚ್ಚಾದ ಕೀರ್ತಿ ಮತ್ತು ಘನಮಾನಗಳನ್ನು ಉಂಟುಮಾಡುವೆನೆಂದೂ ಇವರು ನನ್ನ ಮಾತಿನ ಮೇರೆಗೆ ತಮ್ಮ ದೇವರಾದ ಯೆಹೋವನಿಗೋಸ್ಕರ ಮೀಸಲಾದ ಜನರಾಗುವರು” ಎಂದು ಒಪ್ಪಿಕೊಂಡಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

19 ನಾನು ನಿರ್ಮಿಸಿದ ಬೇರೆ ಎಲ್ಲಾ ಜನಾಂಗಗಳಿಗಿಂತ ಇವರಿಗೆ ಹೆಚ್ಚಾದ ಕೀರ್ತಿಘನಮಾನಗಳನ್ನುಂಟು ಮಾಡುವೆನು ಹಾಗು ಇವರು ನನ್ನ ಮಾತಿನ ಮೇರೆಗೆ ತಮ್ಮ ದೇವರಾದ ಸರ್ವೇಶ್ವರನಿಗೆ ಮೀಸಲಾದ ಜನರಾಗಲು ಒಡಂಬಟ್ಟಿದ್ದಾರೆ,’ ಎನ್ನುವರು,” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

19 ನಾನು ನಿರ್ಮಿಸಿದ ಬೇರೆ ಎಲ್ಲಾ ಜನಾಂಗಗಳಿಗಿಂತಲೂ ಇವರಿಗೆ ಹೆಚ್ಚಾದ ಕೀರ್ತಿಘನಮಾನಗಳನ್ನುಂಟುಮಾಡುವೆನೆಂದೂ ಇವರು ನನ್ನ ಮಾತಿನ ಮೇರೆಗೆ ತಮ್ಮ ದೇವರಾದ ಯೆಹೋವನಿಗೋಸ್ಕರ ಮೀಸಲಾದ ಜನರಾಗುವರೆಂದೂ ಒಡಂಬಟ್ಟಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

19 ದೇವರು ನಿರ್ಮಿಸಿದ ಎಲ್ಲಾ ದೇಶಗಳಿಗಿಂತ ಹೆಚ್ಚಾಗಿ ನಿಮ್ಮನ್ನು ಕೀರ್ತಿಯಲ್ಲಿಯೂ, ಪ್ರಸಿದ್ಧತೆಯಲ್ಲಿಯೂ, ಘನತೆಯಲ್ಲಿಯೂ, ಸ್ಥಾಪಿಸುವುದಾಗಿ ನಿಮ್ಮ ದೇವರಾದ ಯೆಹೋವ ದೇವರು ವಾಗ್ದಾನ ಮಾಡಿದಂತೆ ನೀವು ಅವರಿಗೆ ಪರಿಶುದ್ಧ ಜನರಾಗಬೇಕೆಂದೂ ಘೋಷಿಸಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಧರ್ಮೋಪದೇಶಕಾಂಡ 26:19
21 ತಿಳಿವುಗಳ ಹೋಲಿಕೆ  

ನೀವಾದರೋ ದೇವರಾದುಕೊಂಡ ಜನಾಂಗವೂ ರಾಜವಂಶಸ್ಥರಾದ ಯಾಜಕರೂ ಮೀಸಲಾದ ಜನರೂ ದೇವರ ಸ್ವಕೀಯ ಪ್ರಜೆಯೂ ಆಗಿದ್ದೀರಿ. ದೇವರು ತಾನು ಮಾಡಿದ ಅತ್ಯಾಶ್ಚರ್ಯ ಸಂಗತಿಗಳನ್ನು ತಿಳಿಸಲು ನಿಮ್ಮನ್ನು ಅಂಧಕಾರದಿಂದ (ಪಾಪಗಳಿಂದ) ತನ್ನ ಅದ್ಭುತವಾದ ಬೆಳಕಿಗೆ ಕರೆತಂದನು.


“ನಾನು ಹೇಳಿದಂಥ ಎಲ್ಲಾ ಧರ್ಮಶಾಸ್ತ್ರವನ್ನು ಅನುಸರಿಸಿ ಅದಕ್ಕೆ ವಿಧೇಯರಾದರೆ ನಿಮ್ಮ ದೇವರಾದ ಯೆಹೋವನು ಪ್ರಪಂಚದ ಎಲ್ಲಾ ದೇಶಗಳಿಗಿಂತ ನಿಮ್ಮ ದೇಶವನ್ನು ಅತೀ ಉನ್ನತಸ್ಥಾನದಲ್ಲಿರುವ ದೇಶವನ್ನಾಗಿ ಮಾಡುವನು.


ಯಾಕೆಂದರೆ ನೀವು ಯೆಹೋವನ ಪ್ರಜೆಗಳಾಗಿದ್ದೀರಿ. ಭೂಲೋಕದಲ್ಲಿರುವ ಎಲ್ಲಾ ಜನಾಂಗಗಳಿಂದ ಆತನು ನಿಮ್ಮನ್ನು ಆರಿಸಿಕೊಂಡಿದ್ದಾನೆ. ನೀವು ಆತನ ಸ್ವಕೀಯ ಪ್ರಜೆಯಾಗಿದ್ದೀರಿ.


ಆತನ ಜನರು “ಪವಿತ್ರಜನ”ರೆಂದೂ, “ಯೆಹೋವನಿಂದ ರಕ್ಷಿಸಲ್ಪಟ್ಟವ”ರೆಂದೂ ಕರೆಯಲ್ಪಡುವರು. ಜೆರುಸಲೇಮ್, “ದೇವರಿಗೆ ಬೇಕಾದ ಪಟ್ಟಣ”ವೆಂದೂ, “ದೇವರಿರುವ ಪಟ್ಟಣ”ವೆಂದೂ ಕರೆಯಲ್ಪಡುವದು.


ನೀವು ಯಾಜಕರ ರಾಜ್ಯ’ ಎಂಬ ವಿಶೇಷವಾದ ಜನಾಂಗವಾಗುವಿರಿ. ಮೋಶೆಯೇ, ನಾನು ನಿನಗೆ ಹೇಳಿದ ಸಂಗತಿಗಳನ್ನು ನೀನು ಇಸ್ರೇಲರಿಗೆ ಹೇಳಲೇಬೇಕು” ಎಂದನು.


ನೀವೂ ಸಹ ಜೀವವುಳ್ಳ ಕಲ್ಲುಗಳಾಗಿದ್ದೀರಿ. ಆತ್ಮಸಂಬಂಧವಾದ ದೇವಾಲಯವಾಗುವದಕ್ಕಾಗಿ ನೀವೇ ಕಟ್ಟಲ್ಪಡುತ್ತಿದ್ದೀರಿ; ದೇವರಿಂದ ಸ್ವೀಕೃತವಾಗುವಂಥ ಆತ್ಮಿಕ ಯಜ್ಞಗಳನ್ನು ಯೇಸು ಕ್ರಿಸ್ತನ ಮೂಲಕ ದೇವರಿಗೆ ಅರ್ಪಿಸುವ ಪವಿತ್ರ ಯಾಜಕರಾಗಿದ್ದೀರಿ.


ಆ ಸಮಯದಲ್ಲಿ, ನಿನಗೆ ಕೇಡುಮಾಡುವವರನ್ನು ಶಿಕ್ಷಿಸುವೆನು. ಗಾಯಗೊಂಡಿರುವ ನಿನ್ನ ಜನರನ್ನು ರಕ್ಷಿಸುವೆನು. ತಮ್ಮ ದೇಶದಿಂದ ದೂರಕ್ಕೆ ಚದರಿಸಲ್ಪಟ್ಟ ಜನರನ್ನು ನಾನು ಹಿಂದಕ್ಕೆ ಕರೆದುಕೊಂಡು ಬರುವೆನು. ನಾನು ಅವರನ್ನು ಪ್ರಸಿದ್ಧಿಪಡಿಸುವೆನು. ಎಲ್ಲಾ ಜನರು ಅವರನ್ನು ಹೊಗಳುವರು.


ಆಗ ಜೆರುಸಲೇಮ್ ಒಂದು ಅದ್ಭುತವಾದ ಸ್ಥಳವಾಗುವುದು; ಜನರು ಸಂತೋಷದಿಂದಿರುವರು. ಅಲ್ಲಿ ನಡೆದ ಒಳ್ಳೆಯ ಸಂಗತಿಗಳ ಬಗ್ಗೆ ಕೇಳಿದಾಗ ಬೇರೆ ಜನಾಂಗಗಳ ಜನರು ಅದನ್ನು ಹೊಗಳುವರು; ವಿಸ್ಮಯಪಡುವರು. ನಾನು ಜೆರುಸಲೇಮಿಗೆ ಮಾಡುತ್ತಿರುವ ಒಳಿತಿನ ವಿಷಯವು ಅವರ ಕಿವಿಗೆ ಬೀಳುವುದು.’


ಪುರುಷನೊಬ್ಬನು ನಡುಪಟ್ಟಿಯನ್ನು ಬಿಗಿಯಾಗಿ ಸೊಂಟಕ್ಕೆ ಸುತ್ತಿಕೊಳ್ಳುವಂತೆ ನಾನು ಇಸ್ರೇಲಿನ ಎಲ್ಲಾ ವಂಶಗಳನ್ನು ಮತ್ತು ಯೆಹೂದದ ಎಲ್ಲಾ ವಂಶಗಳನ್ನು ನನ್ನ ಸುತ್ತಲೂ ಬಿಗಿದುಕೊಂಡೆನು.” ಇದು ಯೆಹೋವನಿಂದ ಬಂದ ಮಾತು. “ಅವರು ನನ್ನ ಜನರಾಗುವರು ಎಂದುಕೊಂಡು ನಾನು ಹಾಗೆ ಮಾಡಿದೆ. ನನ್ನ ಜನರು ನನಗೆ ಕೀರ್ತಿ, ಸ್ತುತಿ, ಗೌರವ ತರುವರೆಂದು ತಿಳಿದಿದ್ದೆ. ಆದರೆ ನನ್ನ ಜನರು ನನ್ನ ಮಾತನ್ನು ಕೇಳದೆಹೋದರು.”


ಆತನು ತನ್ನ ಜನರನ್ನು ಬಲಿಷ್ಠರನ್ನಾಗಿ ಮಾಡುತ್ತಾನೆ. ಆತನ ಭಕ್ತರನ್ನು ಜನರು ಹೊಗಳುವರು. ಜನರು ಇಸ್ರೇಲರನ್ನು ಹೊಗಳುವರು. ಆತನು ಹೋರಾಡುತ್ತಿರುವುದು ಅವರಿಗಾಗಿಯೇ. ಯೆಹೋವನಿಗೆ ಸ್ತೋತ್ರವಾಗಲಿ!


ಯೆಹೋವನು ನಿಮ್ಮನ್ನು ತಲೆಯನ್ನಾಗಿ ಮಾಡಲು ಬಯಸುತ್ತಾನೆಯೇ ಹೊರತು ಬಾಲವನ್ನಾಗಿಯಲ್ಲ. ನೀವು ಮೇಲಿನ ಅಂತಸ್ತಿನಲ್ಲಿರುವಿರಿ, ಕೆಳಗಿನದರಲ್ಲಿ ಅಲ್ಲ. ನೀವು ಯೆಹೋವನ ಆಜ್ಞೆಯನ್ನು ಪಾಲಿಸಿದಾಗ ನಿಮಗೆ ಹೀಗೆ ಆಗುವುದು.


ನೀವು ಯೆಹೋವನ ಆಜ್ಞೆಗಳಿಗೆ ವಿಧೇಯರಾದರೆ ನಿಮ್ಮ ದೇವರಾದ ಯೆಹೋವನು ನಿಮ್ಮನ್ನು ತನ್ನ ವಾಗ್ದಾನಕ್ಕನುಸಾರವಾಗಿ ವಿಶೇಷವಾದ ಸ್ವಕೀಯ ಪ್ರಜೆಗಳನ್ನಾಗಿ ಮಾಡುವನು.


ಮೋಶೆ ಮತ್ತು ಸಮೂಹದ ಹಿರಿಯರು ಜನರೊಂದಿಗೆ ಮಾತನಾಡಿದರು. ಮೋಶೆಯು ಹೇಳಿದ್ದೇನೆಂದರೆ: “ನಾನು ಆಜ್ಞಾಪಿಸಿದ ಎಲ್ಲಾ ವಿಧಿಗಳನ್ನು ಅನುಸರಿಸಿರಿ.


ಇಸ್ರೇಲಿನ ಜನರು ಯೆಹೋವನಿಗೆ ಒಂದು ಪವಿತ್ರವಾದ ಕಾಣಿಕೆಯಾಗಿದ್ದರು. ಅವರು ಯೆಹೋವನ ಬೆಳೆಯ ಪ್ರಥಮ ಫಲವಾಗಿದ್ದರು. ಇಸ್ರೇಲಿನ ಜನರನ್ನು ಪೀಡಿಸಲು ಪ್ರಯತ್ನಿಸಿದವರನ್ನು ಯಾರಾದರೂ ಆಗಿರಲಿ, ದೋಷಿಗಳೆಂದು ನಿರ್ಣಯಿಸಲಾಗುತ್ತಿತ್ತು. ಆ ಕೆಟ್ಟ ಜನರಿಗೆ ಕೇಡಾಗುತ್ತಿತ್ತು.’” ಇದು ಯೆಹೋವನ ಸಂದೇಶ.


ಆಗ ನಿಮ್ಮೆಲ್ಲರನ್ನು ನಾನು ಹಿಂದಕ್ಕೆ ಕರೆತರುವೆನು. ನಿನ್ನನ್ನು ಪ್ರಸಿದ್ಧಿಪಡಿಸುವೆನು. ಎಲ್ಲಾ ಜನರು ನಿನ್ನನ್ನು ಹೊಗಳುವರು. ನಿನ್ನ ಕಣ್ಣೆದುರಿಗೆ ಸೆರೆಹಿಡಿದವರನ್ನು ಕರೆತರುವಾಗ ಹಾಗೆ ಆಗುವದು” ಇದು ಯೆಹೋವನ ನುಡಿ.


ಆದ್ದರಿಂದ ನನ್ನ ಆಜ್ಞೆಗಳಿಗೆ ವಿಧೇಯರಾಗಬೇಕೆಂದು ನಾನು ನಿಮಗೆ ಹೇಳುತ್ತೇನೆ. ನನ್ನ ಒಡಂಬಡಿಕೆಯನ್ನು ಕೈಕೊಂಡು ನಡೆಯಿರಿ. ಆಗ ನೀವು ನನಗೆ ವಿಶೇಷವಾದ ಜನರಾಗುವಿರಿ. ಈ ಲೋಕವೆಲ್ಲಾ ನನ್ನದೇ. ಆದರೆ ನಾನು ನಿಮ್ಮನ್ನು ನನ್ನ ಸ್ವಂತ ಜನಾಂಗವನ್ನಾಗಿ ಆರಿಸಿಕೊಳ್ಳುತ್ತಿದ್ದೇನೆ.


ಜನರು ಇಸ್ರೇಲ್ ಮತ್ತು ಯೆಹೂದದ ಹೆಸರುಗಳನ್ನು ಶಾಪ ಇಡುವದಕ್ಕಾಗಿ ಉಪಯೋಗಿಸುವರು. ಆದರೆ ನಾನು ಇಸ್ರೇಲ್ ಮತ್ತು ಯೆಹೂದವನ್ನು ಸಂರಕ್ಷಿಸುವೆನು. ಆ ಹೆಸರುಗಳು ಆಶೀರ್ವದಿಸುವದಕ್ಕಾಗಿ ಉಪಯೋಗಿಸಲ್ಪಡುವದು. ಆದ್ದರಿಂದ ಭಯಪಡಬೇಡಿ, ಬಲಶಾಲಿಗಳಾಗಿರಿ.”


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು