ಧರ್ಮೋಪದೇಶಕಾಂಡ 26:2 - ಪರಿಶುದ್ದ ಬೈಬಲ್2 ಯೆಹೋವನು ಕೊಡುವ ಆ ದೇಶದಲ್ಲಿ ನೀವು ಪ್ರಥಮ ಬೆಳೆಯನ್ನು ಕೂಡಿಸುವಿರಿ. ಪುಟ್ಟಿಗಳಲ್ಲಿ ಧಾನ್ಯವನ್ನು ಕೂಡಿಸುವಾಗ ಪ್ರಥಮ ಭಾಗವನ್ನು ಪ್ರತ್ಯೇಕವಾಗಿಟ್ಟು ದೇವರಾದ ಯೆಹೋವನು ತನ್ನ ಆಲಯಕ್ಕಾಗಿ ಆರಿಸುವ ಸ್ಥಳಕ್ಕೆ ಅದನ್ನು ತೆಗೆದುಕೊಂಡು ಹೋಗಿ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20192 ನಿಮ್ಮಲಿರುವ ಪ್ರತಿಯೊಬ್ಬನೂ ಆತನು ದಯಪಾಲಿಸಿದ ಹೊಲದ ಎಲ್ಲಾ ಬೆಳೆಗಳಲ್ಲಿ ಪ್ರಥಮಫಲಗಳನ್ನು ಪುಟ್ಟಿಯಲ್ಲಿಟ್ಟು, ನಿಮ್ಮ ದೇವರಾದ ಯೆಹೋವನು ತನ್ನ ಹೆಸರನ್ನು ಸ್ಥಾಪಿಸುವುದಕ್ಕೆ ಆದುಕೊಳ್ಳುವ ಸ್ಥಳಕ್ಕೆ ತರಬೇಕು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)2 ಅವರು ದಯಪಾಲಿಸಿದ ಹೊಲದ ಎಲ್ಲ ಬೆಳೆಗಳಲ್ಲೂ ಕೆಲವು ಪ್ರಥಮ ಫಲಗಳನ್ನು ಪುಟ್ಟಿಯಲ್ಲಿಟ್ಟು ನಿಮ್ಮ ದೇವರಾದ ಸರ್ವೇಶ್ವರ ತಮ್ಮ ನಾಮಸ್ಥಾಪನೆಗಾಗಿ ಆರಿಸಿಕೊಳ್ಳುವ ಸ್ಥಳಕ್ಕೆ ತೆಗೆದುಕೊಂಡುಹೋಗಿರಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)2 ಆತನು ದಯಪಾಲಿಸಿದ ಹೊಲದ ಎಲ್ಲಾ ಬೆಳೆಗಳಲ್ಲಿಯೂ ನೀವು ಕೆಲವು ಪ್ರಥಮಫಲಗಳನ್ನು ಪುಟ್ಟಿಯಲ್ಲಿಟ್ಟು ನಿಮ್ಮ ದೇವರಾದ ಯೆಹೋವನು ತನ್ನ ಹೆಸರನ್ನು ಸ್ಥಾಪಿಸುವದಕ್ಕೆ ಆದುಕೊಳ್ಳುವ ಸ್ಥಳಕ್ಕೆ ತೆಗೆದುಕೊಂಡು ಹೋಗಿ ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ2 ಆಗ ನಿಮ್ಮ ದೇಶದಿಂದ ನೀವು ತರತಕ್ಕ ಭೂಮಿಯ ಎಲ್ಲಾ ಹುಟ್ಟುವಳಿಯ ಪ್ರಥಮ ಫಲವನ್ನು ಬುಟ್ಟಿಯಲ್ಲಿಟ್ಟು, ನಿಮ್ಮ ದೇವರಾದ ಯೆಹೋವ ದೇವರು ತಮ್ಮ ಹೆಸರನ್ನು ಸ್ಥಾಪಿಸುವದಕ್ಕೆ ಆಯ್ದುಕೊಳ್ಳುವ ಸ್ಥಳಕ್ಕೆ ತೆಗೆದುಕೊಂಡು ಹೋಗಬೇಕು. ಅಧ್ಯಾಯವನ್ನು ನೋಡಿ |
ನನ್ನ ಒಡೆಯನಾದ ಯೆಹೋವನು ಹೇಳುವುದೇನೆಂದರೆ, “ಇಸ್ರೇಲಿನ ಎತ್ತರವಾದ ನನ್ನ ಪವಿತ್ರಪರ್ವತಕ್ಕೆ ಜನರು ಬರಲೇಬೇಕು. ಅಲ್ಲಿ ಅವರು ನನ್ನ ಸೇವೆ ಮಾಡಲೇಬೇಕು. ಇಡೀ ಇಸ್ರೇಲ್ ಜನಾಂಗವು ತಮ್ಮ ದೇಶದಲ್ಲಿರುವುದು. ಅಲ್ಲಿ ನಾನು ಅವರನ್ನು ಸ್ವೀಕರಿಸಿಕೊಳ್ಳುವೆನು. ಅಲ್ಲಿ ನೀವು ನಿಮ್ಮ ಕಾಣಿಕೆಗಳನ್ನು ಪ್ರಥಮ ಫಲಗಳನ್ನು ಮತ್ತು ಎಲ್ಲಾ ಪವಿತ್ರ ಕಾಣಿಕೆಗಳನ್ನು ನನಗೆ ತರಬೇಕೆಂದು ಅಪೇಕ್ಷಿಸುತ್ತೇನೆ.