ಬೇರೊಂದು ಜನಾಂಗದೊಳಗಿಂದ ಜನರನ್ನು ತನಗೋಸ್ಕರ ತೆಗೆದುಕೊಳ್ಳಲು ಬೇರೆ ಯಾವ ದೇವರಾದರೂ ಎಂದಾದರೂ ಪ್ರಯತ್ನಿಸಿದ್ದುಂಟೇ? ಇಲ್ಲ! ಆದರೆ ದೇವರಾದ ಯೆಹೋವನು ಇಂಥ ಮಹಾಕಾರ್ಯಗಳನ್ನು ಮಾಡುವುದನ್ನು ನೀವು ನೋಡಿದ್ದೀರಿ! ಆತನು ನಿಮಗೆ ತನ್ನ ಶಕ್ತಿಯನ್ನು, ಬಲವನ್ನು, ಅದ್ಭುತಕಾರ್ಯಗಳನ್ನು ಮತ್ತು ಆಶ್ಚರ್ಯಕರವಾದ ಕಾರ್ಯಗಳನ್ನು ತೋರಿಸಿದ್ದಾನೆ. ಆತನು ಈಜಿಪ್ಟಿನ ಮೇಲೆ ಬರಮಾಡಿದ ವಿಪತ್ತುಗಳನ್ನು ಮತ್ತು ಭಯಂಕರವಾದ ಘಟನೆಗಳನ್ನು ನೀವು ನೋಡಿದ್ದೀರಿ!
ನೀವು ಈಜಿಪ್ಟ್ ದೇಶದಲ್ಲಿ ಗುಲಾಮರಾಗಿದ್ದಿರೆಂಬುದನ್ನು ಮರೆಯಬೇಡಿ. ನಿಮ್ಮ ದೇವರಾದ ಯೆಹೋವನು ತನ್ನ ಮಹಾಶಕ್ತಿಯಿಂದ ನಿಮ್ಮನ್ನು ಈಜಿಪ್ಟಿನಿಂದ ಬಿಡಿಸಿ ನಿಮ್ಮನ್ನು ಸ್ವತಂತ್ರರನ್ನಾಗಿ ಮಾಡಿದನು. ಆದ್ದರಿಂದಲೇ ನಿಮ್ಮ ದೇವರು ಸಬ್ಬತ್ ದಿನವನ್ನು ಆಚರಿಸಬೇಕೆಂದು ಆಜ್ಞೆ ಮಾಡಿದ್ದು.
ಮೋಶೆಯು ಜನರಿಗೆ, “ನೀವು ಈಜಿಪ್ಟಿನ ಗುಲಾಮತನದಿಂದ ಬಿಡುಗಡೆಯಾದ ಈ ದಿನವನ್ನು ಜ್ಞಾಪಕಮಾಡಿಕೊಳ್ಳಿರಿ. ಆದರೆ ಈ ದಿನದಲ್ಲಿ ಯೆಹೋವನು ತನ್ನ ಮಹಾಶಕ್ತಿಯಿಂದ ನಿಮ್ಮನ್ನು ಸ್ವತಂತ್ರರನ್ನಾಗಿ ಮಾಡಿದನು. ನೀವು ಹುಳಿಯಿರುವ ರೊಟ್ಟಿಯನ್ನು ತಿನ್ನಬಾರದು.
ಯೆಹೋವನು ಮೋಶೆಯನ್ನು ತನ್ನ ಬಲವಾದ ಹಸ್ತದಿಂದ ನಡೆಸಿದನು. ತನ್ನ ಅದ್ಭುತ ಶಕ್ತಿಯಿಂದ ಮೋಶೆಯನ್ನು ನಡೆಸಿದನು. ತನ್ನ ಜನರು ಸಮುದ್ರದೊಳಗಿಂದ ನಡೆದುಹೋಗಲೆಂದು ಯೆಹೋವನು ಸಮುದ್ರವನ್ನು ಇಬ್ಭಾಗ ಮಾಡಿದನು. ಅಂಥಾ ಅದ್ಭುತಕಾರ್ಯಗಳ ನಿಮಿತ್ತ ತನ್ನ ಹೆಸರನ್ನು ಪ್ರಸಿದ್ಧಿಪಡಿಸಿದನು.
ಆದ್ದರಿಂದ ನನ್ನ ಈ ಮಾತುಗಳನ್ನು ಇಸ್ರೇಲರಿಗೆ ತಿಳಿಸು: ‘ನಾನೇ ಯೆಹೋವನು. ಈಜಿಪ್ಟಿನವರು ನಿಮ್ಮಿಂದ ಮಾಡಿಸುವ ಬಿಟ್ಟೀಕೆಲಸದಿಂದ ತಪ್ಪಿಸಿ ಈಜಿಪ್ಟಿನವರ ಗುಲಾಮಗಿರಿಯಿಂದ ಬಿಡಿಸುವೆನು. ನನ್ನ ಮಹಾಶಕ್ತಿಯಿಂದ ಈಜಿಪ್ಟಿನವರನ್ನು ಭಯಂಕರವಾಗಿ ದಂಡಿಸುವೆನು; ಬಳಿಕ ನಿಮ್ಮನ್ನು ರಕ್ಷಿಸುವೆನು.