Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಧರ್ಮೋಪದೇಶಕಾಂಡ 27:10 - ಪರಿಶುದ್ದ ಬೈಬಲ್‌

10 ಆದ್ದರಿಂದ ಆತನು ಹೇಳಿದ್ದೆಲ್ಲವನ್ನೂ ಮಾಡಿರಿ. ನಾನು ಈ ಹೊತ್ತು ನಿಮಗೆ ಹೇಳುವಂಥ ಆತನ ಅಪ್ಪಣೆಗಳಿಗೂ ವಿಧಿನಿಯಮಗಳಿಗೂ ವಿಧೇಯರಾಗಿರಿ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

10 ಆದುದರಿಂದ ಈಗ ನಾನು ನಿಮಗೆ ಹೇಳುವ ನಿಮ್ಮ ದೇವರಾದ ಯೆಹೋವನ ಮಾತುಗಳಿಗೆ ಕಿವಿಗೊಟ್ಟು ಆತನ ಆಜ್ಞಾವಿಧಿಗಳನ್ನು ಅನುಸರಿಸಬೇಕು” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

10 ಆದುದರಿಂದ ಈಗ ನಾನು ನಿಮಗೆ ಹೇಳುವ ಆತನ ಮಾತುಗಳಿಗೆ ಕಿವಿಗೊಟ್ಟು ಆತನ ಆಜ್ಞಾವಿಧಿಗಳನ್ನು ನೀವು ಅನುಸರಿಸಬೇಕು,” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

10 ಆದದರಿಂದ ನೀವು ಈಗ ನಾನು ನಿಮಗೆ ಹೇಳುವ ಆತನ ಮಾತುಗಳಿಗೆ ಕಿವಿಗೊಟ್ಟು ಆತನ ಆಜ್ಞಾವಿಧಿಗಳನ್ನು ಅನುಸರಿಸಬೇಕು ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

10 ಹೀಗಿರುವುದರಿಂದ ನಿಮ್ಮ ದೇವರಾದ ಯೆಹೋವ ದೇವರ ಮಾತಿಗೆ ವಿಧೇಯರಾಗಿ, ನಾನು ಈ ಹೊತ್ತು ನಿಮಗೆ ಆಜ್ಞಾಪಿಸುವ ಅವರ ಆಜ್ಞೆಗಳನ್ನೂ ತೀರ್ಪುಗಳನ್ನೂ ಅನುಸರಿಸಬೇಕು,” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಧರ್ಮೋಪದೇಶಕಾಂಡ 27:10
14 ತಿಳಿವುಗಳ ಹೋಲಿಕೆ  

ಆದ್ದರಿಂದ ಪರಲೋಕದಲ್ಲಿರುವ ನಿಮ್ಮ ತಂದೆಯು ಪರಿಪೂರ್ಣನಾಗಿರುವಂತೆಯೇ ನೀವೂ ಪರಿಪೂರ್ಣರಾಗಿರಬೇಕು.


ಮನುಷ್ಯನೇ, ಒಳ್ಳೆಯದು ಏನೆಂದು ಯೆಹೋವನು ನಿನಗೆ ತಿಳಿಸಿದ್ದಾನೆ. ಯೆಹೋವನು ನಿನ್ನಿಂದ ಅಪೇಕ್ಷಿಸುವದೇನೆಂದರೆ, ಇತರರಿಗೆ ನೀನು ಅನ್ಯಾಯ ಮಾಡದಿರು. ದಯೆ ಮತ್ತು ನಂಬಿಗಸ್ತಿಕೆಗಳನ್ನು ಪ್ರೀತಿಸು. ದೀನತೆಯಿಂದ ನಿನ್ನ ದೇವರಿಗೆ ವಿಧೇಯನಾಗಿರು.


“ನಿಮ್ಮ ದೇವರಾದ ಯೆಹೋವನನ್ನು ಪ್ರೀತಿಸಿರಿ. ಆತನು ಹೇಳಿದವುಗಳನ್ನೆಲ್ಲ ಮಾಡಿರಿ. ನೀವು ಕಟ್ಟಳೆಗಳಿಗೆ, ನಿಯಮಗಳಿಗೆ ಮತ್ತು ಆಜ್ಞೆಗಳಿಗೆ ಯಾವಾಗಲೂ ವಿಧೇಯರಾಗಿರಬೇಕು.


ಬೇರೆ ದೇಶಗಳವರು ತಮ್ಮ ದೇವರುಗಳ ಹೆಸರಿನಲ್ಲಿ ನಡೆಯುತ್ತಾರೆ. ನಾವಾದರೋ ನಮ್ಮ ದೇವರಾದ ಯೆಹೋವನ ಹೆಸರನ್ನು ನಿತ್ಯಕಾಲಕ್ಕೂ ಸ್ಮರಿಸುವೆವು.


“ಇಸ್ರೇಲರಿಗೆ ಹೀಗೆ ಹೇಳು: ನಾನೇ ನಿಮ್ಮ ದೇವರಾದ ಯೆಹೋವನು ನಾನು ಪರಿಶುದ್ಧನಾಗಿರುವಂತೆಯೇ ನೀವೂ ಪರಿಶುದ್ಧರಾಗಿರಬೇಕು!


ಮೋಶೆಯೂ ಯಾಜಕರೂ ಇಸ್ರೇಲ್ ಸಮೂಹದವರೊಂದಿಗೆ ಮಾತನಾಡಿದರು. ಆಗ ಮೋಶೆಯು, “ಇಸ್ರೇಲರೇ, ಮೌನವಾಗಿ ನನ್ನ ಮಾತುಗಳನ್ನು ಕೇಳಿರಿ. ಈ ದಿನ ನೀವು ದೇವರಾದ ಯೆಹೋವನ ಸ್ವಕೀಯ ಪ್ರಜೆಯಾಗಿರುತ್ತೀರಿ.


ಅದೇ ದಿವಸ ಮೋಶೆಯು ಜನರಿಗೆ ಹೇಳಿದ್ದೇನೆಂದರೆ:


ಯೆಹೋವನು ನಿಮ್ಮ ದೇವರೆಂದು ನೀವು ಈ ದಿನ ಪ್ರತಿಜ್ಞೆ ಮಾಡಿದ್ದೀರಿ. ಆತನು ಹೇಳಿದ ಎಲ್ಲಾ ಕಟ್ಟಳೆ, ವಿಧಿ, ನಿಯಮಗಳನ್ನು ಅನುಸರಿಸುವಿರೆಂದು ಪ್ರತಿಜ್ಞೆ ಮಾಡಿರುತ್ತೀರಿ. ಆತನು ಹೇಳಿದ್ದನ್ನೆಲ್ಲಾ ಮಾಡುವುದಾಗಿ ಹೇಳಿರುವಿರಿ.


ಈ ಹೊತ್ತು ಯೆಹೋವನು ನಿಮ್ಮನ್ನು ತನ್ನ ಸ್ವಂತ ಜನಾಂಗವೆಂದು ಸ್ವೀಕರಿಸಿದ್ದಾನೆ ಎಂದು ವಾಗ್ದಾನ ಮಾಡುತ್ತಾನೆ. ನೀವು ಆತನ ಎಲ್ಲಾ ಆಜ್ಞೆಗಳಿಗೆ ವಿಧೇಯರಾಗಬೇಕು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು