Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಧರ್ಮೋಪದೇಶಕಾಂಡ 27:12 - ಪರಿಶುದ್ದ ಬೈಬಲ್‌

12 “ಜೋರ್ಡನ್ ನದಿ ದಾಟಿದ ನಂತರ, ಸಿಮೆಯೋನ್, ಲೇವಿ, ಯೆಹೂದ, ಇಸ್ಸಾಕಾರ್, ಯೋಸೇಫ್ ಮತ್ತು ಬೆನ್ಯಾಮೀನನ ಕುಲದವರು ಗೆರಿಜ್ಜೀಮ್ ಬೆಟ್ಟದ ಮೇಲೆ ನಿಂತು ದೇವರ ಆಶೀರ್ವಾದವನ್ನು ಓದಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

12 “ನೀವು ಯೊರ್ದನ್ ನದಿಯನ್ನು ದಾಟಿದಾಗ ಸಿಮೆಯೋನ್, ಲೇವಿ, ಯೆಹೂದ, ಇಸ್ಸಾಕಾರ್, ಯೋಸೇಫ್ ಮತ್ತು ಬೆನ್ಯಾಮೀನ್ ಎಂಬ ಈ ಕುಲಗಳವರು ಗೆರಿಜ್ಜೀಮ್ ಬೆಟ್ಟದ ಮೇಲೆ ನಿಂತುಕೊಂಡು ಆಶೀರ್ವಾದಗಳನ್ನು ಉಚ್ಚರಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

12 “ನೀವು ಜೋರ್ಡನ್ ನದಿಯನ್ನು ದಾಟಿದ ಮೇಲೆ ಸಿಮೆಯೋನ್, ಲೇವಿ, ಯೆಹೂದ, ಇಸ್ಸಾಕಾರ್, ಜೋಸೆಫ್, ಬೆನ್ಯಾಮೀನ್ ಎಂಬೀ ಕುಲಗಳವರು ಗೆರಿಜ್ಜೀಮ್ ಬೆಟ್ಟದ ಮೇಲೆ ನಿಂತುಕೊಂಡು ಜನರಿಗೆ ಆಶೀರ್ವಚನಗಳನ್ನು ಉಚ್ಚರಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

12 ನೀವು ಯೊರ್ದನ್ ಹೊಳೆಯನ್ನು ದಾಟಿದಾಗ ಸಿಮೆಯೋನ್, ಲೇವಿ, ಯೆಹೂದ, ಇಸ್ಸಾಕಾರ್, ಯೋಸೇಫ್, ಬೆನ್ಯಾಮೀನ್ ಎಂಬೀ ಕುಲಗಳವರು ಗೆರಿಜ್ಜೀಮ್ ಬೆಟ್ಟದ ಮೇಲೆ ನಿಂತುಕೊಂಡು ಆಶೀರ್ವಾದಗಳನ್ನು ಉಚ್ಚರಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

12 “ನೀವು ಯೊರ್ದನನ್ನು ದಾಟಿದ ಮೇಲೆ ಜನರನ್ನು ಆಶೀರ್ವದಿಸುವುದಕ್ಕೆ ಗೆರಿಜೀಮ್ ಬೆಟ್ಟದಲ್ಲಿ ನಿಲ್ಲತಕ್ಕವರು ಸಿಮೆಯೋನ್, ಲೇವಿ, ಯೆಹೂದ, ಇಸ್ಸಾಕಾರ್, ಯೋಸೇಫ, ಬೆನ್ಯಾಮೀನ್ ಮುಂತಾದವರು;

ಅಧ್ಯಾಯವನ್ನು ನೋಡಿ ನಕಲು ಮಾಡಿ




ಧರ್ಮೋಪದೇಶಕಾಂಡ 27:12
10 ತಿಳಿವುಗಳ ಹೋಲಿಕೆ  

ಶೆಕೆಮಿನ ಹಿರಿಯರು ಅಬೀಮೆಲೆಕನನ್ನು ಅರಸನನ್ನಾಗಿ ಮಾಡಿದ ಸಮಾಚಾರವನ್ನು ಯೋತಾಮನು ಕೇಳಿದನು. ಕೂಡಲೇ ಅವನು ಹೋಗಿ ಗೆರಿಜ್ಜೀಮ್ ಬೆಟ್ಟದ ತುದಿಯಲ್ಲಿ ನಿಂತುಕೊಂಡನು. ಯೋತಾಮನು ಜನರಿಗೆ ಈ ಕಥೆಯನ್ನು ಕೂಗಿಕೂಗಿ ಹೇಳಿದನು: “ಶೆಕೆಮಿನ ಹಿರಿಯರೇ, ನನ್ನ ಮಾತನ್ನು ಕೇಳಿರಿ; ಆಗ ಯೆಹೋವನು ನಿಮ್ಮ ಮಾತನ್ನು ಕೇಳುವನು.


ರಾಹೇಲಳು ಮಗನನ್ನು ಹೆರುವಾಗ ಸತ್ತುಹೋದಳು; ಸಾಯುವುದಕ್ಕೆ ಮೊದಲು, ರಾಹೇಲಳು ಆ ಮಗುವಿಗೆ ಬೆನೋನಿ ಎಂದು ಹೆಸರಿಟ್ಟಳು. ಆದರೆ ಯಾಕೋಬನು ಅವನಿಗೆ ಬೆನ್ಯಾಮೀನ್ ಎಂದು ಹೆಸರಿಟ್ಟನು. ಹಾಗೆ ರಾಹೇಳಲು ಮೃತಪಟ್ಟಳು.


ಲೇಯಳು, “ದೇವರು ನನಗೆ ಒಂದು ಬಹುಮಾನವನ್ನು ಕೊಟ್ಟನು; ಯಾಕೆಂದರೆ ನಾನು ನನ್ನ ಸೇವಕಿಯನ್ನು ನನ್ನ ಗಂಡನಿಗೆ ಕೊಟ್ಟೆನು” ಎಂದು ಹೇಳಿ, ಆ ಮಗುವಿಗೆ ಇಸ್ಸಾಕಾರ್ ಎಂದು ಹೆಸರಿಟ್ಟಳು.


ಅದೇ ದಿವಸ ಮೋಶೆಯು ಜನರಿಗೆ ಹೇಳಿದ್ದೇನೆಂದರೆ:


ಅದೇ ಪ್ರಕಾರ ರೂಬೇನ್, ಗಾದ್, ಆಶೇರ್, ಜೆಬುಲೂನ್, ದಾನ್ ಮತ್ತು ನಫ್ತಾಲಿ ಕುಲದವರು ಏಬಾಲ್ ಬೆಟ್ಟದ ಮೇಲೆ ನಿಂತು ದೇವರ ಶಾಪವಚನವನ್ನು ಓದಬೇಕು.


ಇಸ್ರೇಲನು ಸ್ವಲ್ಪಕಾಲದವರೆಗೆ ಅಲ್ಲಿ ಇಳಿದುಕೊಂಡನು. ಅವನು ಅಲ್ಲಿದ್ದಾಗ ರೂಬೇನನು ಇಸ್ರೇಲನ ದಾಸಿಯಾದ ಬಿಲ್ಹಳೊಡನೆ ಮಲಗಿಕೊಂಡನು. ಇಸ್ರೇಲನು ಇದರ ಬಗ್ಗೆ ಕೇಳಿದಾಗ ತುಂಬ ಕೋಪಗೊಂಡನು. ಯಾಕೋಬನಿಗೆ (ಇಸ್ರೇಲ) ಹನ್ನೆರಡು ಗಂಡುಮಕ್ಕಳಿದ್ದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು