Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಧರ್ಮೋಪದೇಶಕಾಂಡ 27:14 - ಪರಿಶುದ್ದ ಬೈಬಲ್‌

14 “ಲೇವಿಯರು ಗಟ್ಟಿಯಾದ ಸ್ವರದಲ್ಲಿ ಇಸ್ರೇಲರೆಲ್ಲರಿಗೆ ಹೀಗೆ ಹೇಳಬೇಕು:

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

14 “ಲೇವಿಯರು ಗಟ್ಟಿಯಾದ ಸ್ವರದಿಂದ ಇಸ್ರಾಯೇಲರೆಲ್ಲರಿಗೂ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

14 “ಲೇವಿಯರು ಗಟ್ಟಿಯಾದ ಸ್ವರದಿಂದ ಇಸ್ರಯೇಲರೆಲ್ಲರಿಗೆ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

14 ಲೇವಿಯರು ಗಟ್ಟಿಯಾದ ಸ್ವರದಿಂದ ಇಸ್ರಾಯೇಲ್ಯರೆಲ್ಲರಿಗೂ -

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

14 ಲೇವಿಯರು ಇಸ್ರಾಯೇಲ್ ಜನರೆಲ್ಲರಿಗೆ ಗಟ್ಟಿಯಾದ ಧ್ವನಿಯಿಂದ,

ಅಧ್ಯಾಯವನ್ನು ನೋಡಿ ನಕಲು ಮಾಡಿ




ಧರ್ಮೋಪದೇಶಕಾಂಡ 27:14
8 ತಿಳಿವುಗಳ ಹೋಲಿಕೆ  

ಇಸ್ರೇಲಿನ ಜನರಲ್ಲಿ ಒಬ್ಬರೂ ಸಹ ನಿನ್ನ ಉಪದೇಶವನ್ನು ಪಾಲಿಸಲಿಲ್ಲ. ಅವರೆಲ್ಲರೂ ಅದರಿಂದ ದೂರಾದರು. ಅವರು ನಿನ್ನ ಆಜ್ಞೆಯನ್ನು ಪಾಲಿಸಲಿಲ್ಲ. ಮೋಶೆಯ ಧರ್ಮಶಾಸ್ತ್ರದಲ್ಲಿ ಶಾಪಗಳ ಮತ್ತು ವಾಗ್ದಾನಗಳ ಬಗ್ಗೆ ಹೇಳಲಾಗಿದೆ. (ಮೋಶೆಯು ದೇವರ ಸೇವಕನಾಗಿದ್ದನು) ಆ ಶಾಪಗಳು ಧರ್ಮಶಾಸ್ತ್ರವನ್ನು ಪಾಲಿಸದಿದ್ದವರಿಗೆ ಆಗುವ ಶಿಕ್ಷೆಯಾಗಿದೆ. ಆ ಎಲ್ಲಾ ಶಿಕ್ಷೆಗಳು ನಮಗೆ ಆಗಿವೆ. ನಾವು ಯೆಹೋವನಾದ ನಿನ್ನ ವಿರುದ್ಧ ಪಾಪ ಮಾಡಿದ್ದರಿಂದ ನಮಗೆ ಹೀಗಾಯಿತು.


ಹಿರಿಯರು, ಅಧಿಕಾರಿಗಳು, ನ್ಯಾಯಾಧೀಶರು ಮತ್ತು ಇಸ್ರೇಲರೆಲ್ಲರು ಪವಿತ್ರ ಪೆಟ್ಟಿಗೆಯ ಸುತ್ತಲೂ ನಿಂತುಕೊಂಡಿದ್ದರು. ಯೆಹೋವನ ಒಡಂಬಡಿಕೆಯ ಪವಿತ್ರ ಪೆಟ್ಟಿಗೆಯನ್ನು ಹೊತ್ತುತಂದ ಲೇವಿಯರ ಎದುರುಗಡೆ ಅವರು ನಿಂತುಕೊಂಡಿದ್ದರು. ಅರ್ಧಜನರು ಏಬಾಲ್ ಬೆಟ್ಟದ ಎದುರಿಗೂ ಮತ್ತು ಇನ್ನುಳಿದ ಅರ್ಧಜನರು ಗೆರಿಜ್ಜೀಮ್ ಬೆಟ್ಟದ ಎದುರಿಗೂ ನಿಂತುಕೊಂಡಿದ್ದರು. ಆಶೀರ್ವಾದವನ್ನು ಹೊಂದಿಕೊಳ್ಳಲು ಹೀಗೆ ಮಾಡಬೇಕೆಂದು ಯೆಹೋವನ ಸೇವಕನಾದ ಮೋಶೆಯು ಜನರಿಗೆ ಹೇಳಿದ್ದನು.


ಅದೇ ಪ್ರಕಾರ ರೂಬೇನ್, ಗಾದ್, ಆಶೇರ್, ಜೆಬುಲೂನ್, ದಾನ್ ಮತ್ತು ನಫ್ತಾಲಿ ಕುಲದವರು ಏಬಾಲ್ ಬೆಟ್ಟದ ಮೇಲೆ ನಿಂತು ದೇವರ ಶಾಪವಚನವನ್ನು ಓದಬೇಕು.


“‘ಸುಳ್ಳುದೇವರನ್ನು ಮಾಡಿ ಗುಪ್ತ ಸ್ಥಳದಲ್ಲಿಡುವವನು ಶಾಪಗ್ರಸ್ತನಾಗಲಿ; ಆ ದೇವರುಗಳು ಮನುಷ್ಯನ ಕೈಕೆಲಸವೇ; ಕಲ್ಲು, ಮರ, ಹಿತ್ತಾಳೆಗಳಿಂದ ಮಾಡಿದವುಗಳೇ. ಯೆಹೋವನು ಅವುಗಳನ್ನು ದ್ವೇಷಿಸುತ್ತಾನೆ.’ “ಆಗ ಎಲ್ಲಾ ಜನರು, ‘ಆಮೆನ್’ ಎಂದು ಹೇಳಬೇಕು.


ಆಗ ಯೆಹೋಶುವನು ಧರ್ಮಶಾಸ್ತ್ರದ ಎಲ್ಲಾ ಆಶೀರ್ವಾದಗಳನ್ನು ಮತ್ತು ಶಾಪದ ವಾಕ್ಯಗಳನ್ನು ಧರ್ಮಶಾಸ್ತ್ರದಲ್ಲಿ ಬರೆದಿರುವಂತೆಯೇ ಓದಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು