ಧರ್ಮೋಪದೇಶಕಾಂಡ 27:15 - ಪರಿಶುದ್ದ ಬೈಬಲ್15 “‘ಸುಳ್ಳುದೇವರನ್ನು ಮಾಡಿ ಗುಪ್ತ ಸ್ಥಳದಲ್ಲಿಡುವವನು ಶಾಪಗ್ರಸ್ತನಾಗಲಿ; ಆ ದೇವರುಗಳು ಮನುಷ್ಯನ ಕೈಕೆಲಸವೇ; ಕಲ್ಲು, ಮರ, ಹಿತ್ತಾಳೆಗಳಿಂದ ಮಾಡಿದವುಗಳೇ. ಯೆಹೋವನು ಅವುಗಳನ್ನು ದ್ವೇಷಿಸುತ್ತಾನೆ.’ “ಆಗ ಎಲ್ಲಾ ಜನರು, ‘ಆಮೆನ್’ ಎಂದು ಹೇಳಬೇಕು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201915 ‘ಶಿಲ್ಪಿಯ ಕೆಲಸವಾಗಿರುವ ಮರದ ವಿಗ್ರಹ ಮತ್ತು ಲೋಹವಿಗ್ರಹ ಯೆಹೋವನಿಗೆ ಅಸಹ್ಯವಾದುದರಿಂದ ಅವುಗಳನ್ನು ಮಾಡಿಸಿ ಗುಪ್ತವಾಗಿ ನಿಲ್ಲಿಸಿಕೊಂಡವನು ಶಾಪಗ್ರಸ್ತನು’ ಎಂದು ಹೇಳಲು ಜನರೆಲ್ಲರೂ, ‘ಆಮೆನ್’” ಅನ್ನಬೇಕು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)15 ‘ಶಿಲ್ಪಿಯ ಕೆಲಸವಾಗಿ ಇರುವ ಮರದ ವಿಗ್ರಹ ಹಾಗು ಲೋಹವಿಗ್ರಹ ಸರ್ವೇಶ್ವರನಿಗೆ ಹೇಯವಾದದ್ದು. ಆದುದರಿಂದ ಅವನ್ನು ಮಾಡಿಸಿ ಗೋಪ್ಯವಾಗಿ ನಿಲ್ಲಿಸಿಕೊಂಡವನು ಶಾಪಗ್ರಸ್ತನು,’ ಎನ್ನಲು ಜನರೆಲ್ಲರು, ‘ಆಮೆನ್’ ಎನ್ನಬೇಕು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)15 ಶಿಲ್ಪಿಯ ಕೆಲಸವಾಗಿರುವ ಮರದ ವಿಗ್ರಹವೂ ಲೋಹ ವಿಗ್ರಹವೂ ಯೆಹೋವನಿಗೆ ಹೇಯವಾದದ್ದರಿಂದ ಅವನ್ನು ಮಾಡಿಸಿ ಗೋಪ್ಯವಾಗಿ ನಿಲ್ಲಿಸಿಕೊಂಡವನಾದರೂ ಶಾಪಗ್ರಸ್ತ ಅನ್ನಲಾಗಿ ಜನರೆಲ್ಲರೂ - ಹೌದು ಅನ್ನಬೇಕು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ15 “ಯೆಹೋವ ದೇವರಿಗೆ ಅಸಹ್ಯವಾಗಿರುವ ವಿಗ್ರಹವನ್ನಾಗಲಿ, ಎರಕ ಹೊಯ್ದದ್ದನ್ನಾಗಲಿ ಮಾಡಿಕೊಂಡು, ಶಿಲ್ಪಿಯ ಕೈಯಿಂದ ಮಾಡಿಸಿ, ಗುಪ್ತವಾಗಿ ನಿಲ್ಲಿಸಿಕೊಂಡವನು ಶಾಪಗ್ರಸ್ತನು,” ಎಂದು ಹೇಳಿದಾಗ, ಎಲ್ಲಾ ಜನರು, “ಆಮೆನ್,” ಎಂದು ಹೇಳಬೇಕು. ಅಧ್ಯಾಯವನ್ನು ನೋಡಿ |
ಪೂರ್ವಕಾಲದಲ್ಲಿ, ರಾಜನಾದ ಸೊಲೊಮೋನನು ಜೆರುಸಲೇಮಿನ ಬಳಿಯಲ್ಲಿದ್ದ ವಿಘ್ನಪರ್ವತದ ಮೇಲೆ ಕೆಲವು ಉನ್ನತಸ್ಥಳಗಳನ್ನು ನಿರ್ಮಿಸಿದ್ದನು. ಆ ಉನ್ನತಸ್ಥಳಗಳು ಪರ್ವತದ ದಕ್ಷಿಣದಿಕ್ಕಿನ ಮೇಲಿದ್ದವು. ರಾಜನಾದ ಸೊಲೊಮೋನನು ಚೀದೋನ್ಯರ ಅಷ್ಟೋರೆತ್, ಮೋವಾಬ್ಯರ ಕೆಮೋಷ್, ಅಮ್ಮೋನಿಯರ ಮಿಲ್ಕೋಮ್ ಎಂಬ ಅಸಹ್ಯ ವಿಗ್ರಹಗಳಿಗಾಗಿ ಆ ಉನ್ನತಸ್ಥಳಗಳನ್ನು ನಿರ್ಮಿಸಿದ್ದನು. ಆದರೆ ರಾಜನಾದ ಯೋಷೀಯನು ಆ ಪೂಜಾಸ್ಥಳಗಳನ್ನೆಲ್ಲಾ ನಾಶಪಡಿಸಿದನು.
ನನ್ನ ಒಡೆಯನೇ, ನನ್ನ ರಾಜನೇ, ನನ್ನ ಮಾತುಗಳನ್ನು ಆಲಿಸು! ನೀನು ನನ್ನ ಮೇಲೆ ಕೋಪಗೊಳ್ಳುವಂತೆ ಯೆಹೋವನು ಮಾಡಿರುವುದಾದರೆ ಆತನಿಗೆ ನೈವೇದ್ಯವನ್ನು ಅರ್ಪಿಸೋಣ. ಆದರೆ ನೀನು ನನ್ನ ಮೇಲೆ ಕೋಪಗೊಳ್ಳುವಂತೆ ಜನರು ಮಾಡಿದ್ದರೆ, ಅವರಿಗೆ ಯೆಹೋವನು ಕೇಡಾಗುವಂತೆ ಮಾಡಲಿ. ನನಗೆ ಯೆಹೋವನು ನೀಡಿದ ಭೂಮಿಯನ್ನು ನಾನು ಬಿಡುವಂತೆ ಜನರು ಬಲವಂತಪಡಿಸಿದರು. ‘ಹೋಗು, ಹೊರದೇಶೀಯರೊಂದಿಗೆ ನೆಲೆಸು. ಹೋಗು, ಇತರ ದೇವರುಗಳನ್ನು ಆರಾಧಿಸು’ ಎಂದು ಜನರು ನನಗೆ ಹೇಳಿದರು.
ಯೆರೆಮೀಯನು ಹನನ್ಯನಿಗೆ, “ಹಾಗೆಯೇ ಆಗಲಿ, ನೀನು ಹೇಳಿದಂತೆ ಯೆಹೋವನು ಮಾಡಲಿ. ನೀನು ಪ್ರವಾದಿಸಿದ ಸಂದೇಶವನ್ನು ಯೆಹೋವನು ನಿಜವಾಗುವಂತೆ ಮಾಡುವನೆಂದು ನಾನು ಆಶಿಸುತ್ತೇನೆ. ಯೆಹೋವನು ಬಾಬಿಲೋನಿನಿಂದ ತನ್ನ ಆಲಯದ ವಸ್ತುಗಳನ್ನು ಇಲ್ಲಿಗೆ ತರುವನೆಂದು ನಾನು ಆಶಿಸುವೆ. ತಮ್ಮ ಮನೆಗಳನ್ನು ಬಿಟ್ಟುಹೋಗಲು ಒತ್ತಾಯಿಸಲ್ಪಟ್ಟ ಜನರನ್ನು ಮತ್ತೆ ಯೆಹೋವನು ಇಲ್ಲಿಗೆ ಕರೆತರುವನೆಂದು ನಾನು ಆಶಿಸುವೆ.
ಆದರೆ ನಾನು ಅವರಿಗೆ ಉತ್ತರಕೊಡುವೆನು. ಅವರಿಗೆ ನೀನು ಹೀಗೆ ಹೇಳಬೇಕು: ‘ನನ್ನ ಒಡೆಯನಾದ ಯೆಹೋವನು ಹೇಳುವುದೇನೆಂದರೆ: ಇಸ್ರೇಲರಲ್ಲಿ ಯಾರಾದರೂ ಪ್ರವಾದಿಯ ಬಳಿಗೆ ಬಂದು ನನ್ನ ಸಲಹೆಯನ್ನು ಕೇಳಿದರೆ, ನಾನೇ ಆ ಮನುಷ್ಯನಿಗೆ ಉತ್ತರ ಕೊಡುವೆನು. ಅವನ ಬಳಿಯಲ್ಲಿ ಹೊಲಸು ವಿಗ್ರಹಗಳಿದ್ದರೂ, ಅವನನ್ನು ಪಾಪದಲ್ಲಿ ಬೀಳುವಂತೆ ಮಾಡಿದ ವಸ್ತುಗಳನ್ನು ಅವನು ಇಟ್ಟುಕೊಂಡಿದ್ದರೂ, ಅವನು ಆ ವಿಗ್ರಹಗಳನ್ನು ಇನ್ನೂ ಪೂಜೆ ಮಾಡುತ್ತಿದ್ದರೂ ನಾನು ಅವನೊಂದಿಗೆ ಮಾತನಾಡುವೆನು. ಅವನ ವಿಗ್ರಹಾರಾಧನೆಗೆ ತಕ್ಕ ಉತ್ತರವನ್ನೇ ಕೊಡುವೆನು.
ಇಸ್ರೇಲಿನ ಜನರಲ್ಲಿ ಒಬ್ಬರೂ ಸಹ ನಿನ್ನ ಉಪದೇಶವನ್ನು ಪಾಲಿಸಲಿಲ್ಲ. ಅವರೆಲ್ಲರೂ ಅದರಿಂದ ದೂರಾದರು. ಅವರು ನಿನ್ನ ಆಜ್ಞೆಯನ್ನು ಪಾಲಿಸಲಿಲ್ಲ. ಮೋಶೆಯ ಧರ್ಮಶಾಸ್ತ್ರದಲ್ಲಿ ಶಾಪಗಳ ಮತ್ತು ವಾಗ್ದಾನಗಳ ಬಗ್ಗೆ ಹೇಳಲಾಗಿದೆ. (ಮೋಶೆಯು ದೇವರ ಸೇವಕನಾಗಿದ್ದನು) ಆ ಶಾಪಗಳು ಧರ್ಮಶಾಸ್ತ್ರವನ್ನು ಪಾಲಿಸದಿದ್ದವರಿಗೆ ಆಗುವ ಶಿಕ್ಷೆಯಾಗಿದೆ. ಆ ಎಲ್ಲಾ ಶಿಕ್ಷೆಗಳು ನಮಗೆ ಆಗಿವೆ. ನಾವು ಯೆಹೋವನಾದ ನಿನ್ನ ವಿರುದ್ಧ ಪಾಪ ಮಾಡಿದ್ದರಿಂದ ನಮಗೆ ಹೀಗಾಯಿತು.