Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಧರ್ಮೋಪದೇಶಕಾಂಡ 27:18 - ಪರಿಶುದ್ದ ಬೈಬಲ್‌

18 “ಲೇವಿಯರು, ‘ಕುರುಡರಿಗೆ ತಪ್ಪುದಾರಿ ತೋರಿಸುವವನು ಶಾಪಗ್ರಸ್ತನಾಗಲಿ’ ಎಂದು ಹೇಳಬೇಕು. “ಆಗ ಎಲ್ಲಾ ಜನರು, ‘ಆಮೆನ್’ ಎಂದು ಹೇಳಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

18 “ಅವರು, ಕುರುಡರಿಗೆ ದಾರಿತಪ್ಪಿಸಿದವನು ಶಾಪಗ್ರಸ್ತನು” ಎಂದು ಹೇಳಲು, “ಆಮೆನ್” ಅನ್ನಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

18 “ಅವರು, ‘ಕುರುಡರಿಗೆ ದಾರಿತಪ್ಪಿಸಿದವನು ಶಾಪಗ್ರಸ್ತ,’ ಎನ್ನಲು ಜನರೆಲ್ಲರು, ‘ಆಮೆನ್’, ಎನ್ನಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

18 ಅವರು - ಕುರುಡರಿಗೆ ದಾರಿತಪ್ಪಿಸಿದವನು ಶಾಪಗ್ರಸ್ತ ಎನ್ನಲಾಗಿ ಜನರೆಲ್ಲರೂ - ಹೌದು ಅನ್ನಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

18 ಅವರು, “ಕಣ್ಣು ಕಾಣದವನನ್ನು ದಾರಿತಪ್ಪಿಸಿದವನು ಶಾಪಗ್ರಸ್ತನು,” ಎಂದು ಹೇಳಿದಾಗ, ಎಲ್ಲಾ ಜನರು, “ಆಮೆನ್,” ಎಂದು ಹೇಳಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಧರ್ಮೋಪದೇಶಕಾಂಡ 27:18
8 ತಿಳಿವುಗಳ ಹೋಲಿಕೆ  

“ನೀವು ಕಿವುಡನನ್ನು ಶಪಿಸಬಾರದು. ಕುರುಡನು ಬೀಳುವಂತೆ ನೀವು ಅವನ ಮುಂದೆ ಅಡ್ಡವಾಗಿ ಏನನ್ನೂ ಇಡಬಾರದು. ಆದರೆ ನೀವು ನಿಮ್ಮ ದೇವರನ್ನು ಸನ್ಮಾನಿಸಬೇಕು. ನಾನೇ ನಿಮ್ಮ ದೇವರಾದ ಯೆಹೋವನು.


ಫರಿಸಾಯರಿಂದ ದೂರವಾಗಿರಿ. ಅವರೇ ಕುರುಡರು, ಮತ್ತೊಬ್ಬರಿಗೆ ದಾರಿ ತೋರಿಸಲು ಹೋಗುತ್ತಾರೆ. ಕುರುಡನು ಕುರುಡನಿಗೆ ದಾರಿ ತೋರಿಸಿದರೆ ಅವರಿಬ್ಬರೂ ಹಳ್ಳದಲ್ಲಿ ಬೀಳುವರು” ಎಂದು ಉತ್ತರಕೊಟ್ಟನು.


ಯಥಾರ್ಥವಂತರನ್ನು ದಾರಿತಪ್ಪಿಸಿ ಅಪಾಯದ ಮಾರ್ಗದಲ್ಲಿ ನಡೆಸುವವನು ತಾನು ತೋಡಿದ ಗುಂಡಿಗೆ ತಾನೇ ಬೀಳುವನು.


ಕಾವಲುಗಾರರೆಲ್ಲಾ ಕುರುಡರಾಗಿದ್ದಾರೆ. ತಾವು ಮಾಡುತ್ತಿರುವುದು ಅವರಿಗೆ ತಿಳಿಯದು. ಅವರು ಬೊಗಳದ ನಾಯಿಗಳಂತಿರುವರು. ಅವುಗಳು ನೆಲದ ಮೇಲೆ ಬಿದ್ದುಕೊಂಡು ಮಲಗುವವು. ಅವುಗಳಿಗೆ ಮಲಗುವುದೆಂದರೆ ತುಂಬಾ ಪ್ರೀತಿ.


ನಾನು ಕುರುಡನಿಗೆ ಕಣ್ಣಾಗಿಯೂ ಕುಂಟನಿಗೆ ಕಾಲಾಗಿಯೂ ಇದ್ದೆನು.


“ಆದರೆ ನಿನ್ನ ವಿರುದ್ಧವಾಗಿ ಹೇಳಬೇಕಾದ ಕೆಲವು ಸಂಗತಿಗಳಿವೆ. ನಿನ್ನ ಸಭೆಯಲ್ಲಿ ಬಿಳಾಮನ ದುರ್ಬೋಧನೆಗಳನ್ನು ಅನುಸರಿಸುವ ಜನರಿದ್ದಾರೆ. ಇಸ್ರೇಲಿನ ಜನರನ್ನು ಹೇಗೆ ಪಾಪಕ್ಕೆ ಒಳಗಾಗುವಂತೆ ಮಾಡಬೇಕೆಂಬುದನ್ನು ಬಿಳಾಮನು ಬಾಲಾಕನಿಗೆ ದುರ್ಬೋಧನೆ ಮಾಡಿದನು. ಆದ್ದರಿಂದ ಇಸ್ರೇಲರು ವಿಗ್ರಹಗಳಿಗೆ ಅರ್ಪಿತವಾದ ಆಹಾರವನ್ನು ತಿನ್ನುವುದರ ಮೂಲಕವಾಗಿಯೂ ಲೈಂಗಿಕ ಪಾಪಗಳನ್ನು ಮಾಡುವುದರ ಮೂಲಕವಾಗಿಯೂ ಪಾಪ ಮಾಡಿದರು.


“ಲೇವಿಯರು, ‘ಪರದೇಶಸ್ಥರಿಗೆ, ಅನಾಥರಿಗೆ ಮತ್ತು ವಿಧವೆಯರಿಗೆ ನ್ಯಾಯವಾದ ತೀರ್ಪನ್ನು ಕೊಡದವನು ಶಾಪಗ್ರಸ್ತನಾಗಲಿ’ ಎಂದು ಹೇಳಬೇಕು. “ಆಗ ಎಲ್ಲಾ ಜನರು, ‘ಆಮೆನ್’ ಎಂದು ಹೇಳಬೇಕು.


ನನ್ನ ತಂದೆ ನನ್ನನ್ನು ಮುಟ್ಟಿದರೆ, ನಾನು ಏಸಾವನಲ್ಲವೆಂದು ತಿಳಿದುಕೊಳ್ಳುವನು. ಆಗ ಅವನು ನನ್ನನ್ನು ಆಶೀರ್ವದಿಸುವುದಿಲ್ಲ. ನಾನು ಅವನನ್ನು ಮೋಸಗೊಳಿಸಲು ಪ್ರಯತ್ನಿಸಿದ್ದರಿಂದ ಅವನು ನನ್ನನ್ನು ಶಪಿಸುವನು” ಎಂದು ಹೇಳಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು