Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಧರ್ಮೋಪದೇಶಕಾಂಡ 27:19 - ಪರಿಶುದ್ದ ಬೈಬಲ್‌

19 “ಲೇವಿಯರು, ‘ಪರದೇಶಸ್ಥರಿಗೆ, ಅನಾಥರಿಗೆ ಮತ್ತು ವಿಧವೆಯರಿಗೆ ನ್ಯಾಯವಾದ ತೀರ್ಪನ್ನು ಕೊಡದವನು ಶಾಪಗ್ರಸ್ತನಾಗಲಿ’ ಎಂದು ಹೇಳಬೇಕು. “ಆಗ ಎಲ್ಲಾ ಜನರು, ‘ಆಮೆನ್’ ಎಂದು ಹೇಳಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

19 “ಅವರು, ಪರದೇಶಿ, ಅನಾಥ, ಇವರ ವ್ಯಾಜ್ಯದಲ್ಲಿ ನ್ಯಾಯ ಬಿಟ್ಟು ತೀರ್ಪುಹೇಳಿದವನು ಶಾಪಗ್ರಸ್ತನು” ಎಂದು ಹೇಳಲು ಜನರೆಲ್ಲರೂ, “ಆಮೆನ್” ಅನ್ನಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

19 “ಅವರು, ‘ಪರದೇಶಿ, ತಾಯಿತಂದೆ ಇಲ್ಲದ ವ್ಯಕ್ತಿ, ಇವರ ವ್ಯಾಜ್ಯದಲ್ಲಿ ನ್ಯಾಯಬಿಟ್ಟು ತೀರ್ಪು ಹೇಳಿದವನು ಶಾಪಗ್ರಸ್ತ,’ ಎನ್ನಲು ಜನರೆಲ್ಲರು, ‘ಆಮೆನ್’, ಎನ್ನಬೇಕು

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

19 ಅವರು - ಪರದೇಶಿ, ತಾಯಿತಂದೆಯಿಲ್ಲದವ, ಇವರ ವ್ಯಾಜ್ಯದಲ್ಲಿ ನ್ಯಾಯ ಬಿಟ್ಟು ತೀರ್ಪುಹೇಳಿದವನು ಶಾಪಗ್ರಸ್ತ ಎನ್ನಲಾಗಿ ಜನರೆಲ್ಲರೂ - ಹೌದು ಅನ್ನಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

19 ಅವರು, “ಪರವಾಸಿಗೂ, ದಿಕ್ಕಿಲ್ಲದವನಿಗೂ, ವಿಧವೆಗೂ ನ್ಯಾಯಬಿಟ್ಟು ತೀರ್ಪು ಹೇಳಿದವನು ಶಾಪಗ್ರಸ್ತನು,” ಎಂದು ಹೇಳಿದಾಗ, ಎಲ್ಲಾ ಜನರು, “ಆಮೆನ್,” ಎಂದು ಹೇಳಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಧರ್ಮೋಪದೇಶಕಾಂಡ 27:19
11 ತಿಳಿವುಗಳ ಹೋಲಿಕೆ  

ಅನಾಥಮಕ್ಕಳಿಗೂ ವಿಧವೆಯರಿಗೂ ಆತನು ಸಹಾಯಕನಾಗಿದ್ದಾನೆ. ನಮ್ಮ ದೇಶದಲ್ಲಿರುವ ಪರದೇಶಿಯರನ್ನೂ ಆತನು ಪ್ರೀತಿಸುತ್ತಾನೆ; ಅವರಿಗೆ ಊಟಬಟ್ಟೆಗಳನ್ನು ಒದಗಿಸುತ್ತಾನೆ.


“ಪರದೇಶಸ್ಥರನ್ನು ಮತ್ತು ಅನಾಥರನ್ನು ಯೋಗ್ಯವಾದ ರೀತಿಯಲ್ಲಿ ನೋಡಿಕೊಳ್ಳಬೇಕು. ವಿಧವೆಯರ ಬಟ್ಟೆಗಳನ್ನು ಒತ್ತೆಯಿಟ್ಟುಕೊಳ್ಳಕೂಡದು.


ಆಗ ನಾನು ನಿಮ್ಮ ಬಳಿಗೆ ಬಂದು ಯೋಗ್ಯವಾದ ಕಾರ್ಯವನ್ನು ಮಾಡುವೆನು. ದುಷ್ಟ ಕ್ರಿಯೆಗಳನ್ನು ಮಾಡಿದ ಜನರ ಬಗ್ಗೆ ನ್ಯಾಯಾಧೀಶರೊಡನೆ ದೂರು ಹೇಳುವ ಮನುಷ್ಯನಂತಿರುವೆನು. ಕೆಲವರು ಮಾಟಮಂತ್ರ ಮಾಡುವರು; ಕೆಲವರು ವ್ಯಭಿಚಾರ ಮಾಡುವರು; ಕೆಲವರು ಸುಳ್ಳು ವಾಗ್ದಾನಗಳನ್ನು ಮಾಡುವರು; ಕೆಲವರು ಕೂಲಿಯಾಳುಗಳಿಗೆ ಹೇಳಿದ ಕೂಲಿಯನ್ನು ಕೊಡದೆ ಅವರಿಗೆ ಮೋಸಮಾಡುವರು. ಜನರು ವಿಧವೆಯರಿಗೂ ಅನಾಥರಿಗೂ ಸಹಾಯ ಮಾಡುವದಿಲ್ಲ. ಪರದೇಶಿಗಳಿಗೆ ಸಹಾಯ ಮಾಡುವದಿಲ್ಲ. ನನಗೆ ಗೌರವ ಸಲ್ಲಿಸುವದಿಲ್ಲ.” ಇದು ಸರ್ವಶಕ್ತನಾದ ಯೆಹೋವನ ನುಡಿ.


ದುಷ್ಟನು ನ್ಯಾಯ ದೊರೆಯದಂತೆ ಮಾಡಲು ಗುಟ್ಟಾಗಿ ಲಂಚ ತೆಗೆದುಕೊಳ್ಳುವನು.


ಯಾಕೋಬಿನ ನಾಯಕರೇ, ಇಸ್ರೇಲಿನ ಪ್ರಧಾನರೇ, ನನಗೆ ಕಿವಿಗೊಡಿರಿ! ಸರಿಯಾದ ಜೀವಿತವನ್ನು ನೀವು ದ್ವೇಷಿಸುತ್ತೀರಿ. ನೆಟ್ಟಗಿರುವದನ್ನು ಡೊಂಕಾಗಿ ನೀವು ಮಾಡುವಿರಿ.


ಅವರು ಅತಿಯಾಗಿ ಕುಡಿದು ಕಟ್ಟಳೆಗಳನ್ನು ಮರೆತು ಬಡವರ ಹಕ್ಕುಗಳನ್ನೆಲ್ಲ ರದ್ದುಮಾಡುವರು.


“ದುಷ್ಕೃತ್ಯವನ್ನು ಮಾಡುವವರು ಬಹಳ ಮಂದಿಯೆಂದು ಅವರ ಜೊತೆಯಲ್ಲಿ ಸೇರಿಕೊಳ್ಳಬೇಡಿ. ಬಹಳ ಮಂದಿಯ ಮಾತಿಗೆ ಒಪ್ಪಿ ನ್ಯಾಯವನ್ನು ಕೆಡಿಸುವ ಸಾಕ್ಷಿಯನ್ನು ಹೇಳದಿರಿ.


“ನಿಮ್ಮ ದೇಶದಲ್ಲಿ ವಾಸಿಸುವ ಪರದೇಶಸ್ಥರಿಗೆ ಕೆಟ್ಟದ್ದನ್ನು ಮಾಡಬೇಡಿರಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು