ಧರ್ಮೋಪದೇಶಕಾಂಡ 27:20 - ಪರಿಶುದ್ದ ಬೈಬಲ್20 “ಲೇವಿಯರು, ‘ತಂದೆಯ ಹೆಂಡತಿಯೊಂದಿಗೆ ಲೈಂಗಿಕ ಸಂಬಂಧವಿಟ್ಟುಕೊಂಡವನು ಶಾಪಗ್ರಸ್ತನಾಗಲಿ. ಅವನು ತನ್ನ ತಂದೆಗೆ ಅವಮಾನ ಮಾಡಿದನು’ ಎಂದು ಹೇಳಬೇಕು. “ಆಗ ಎಲ್ಲಾ ಜನರು, ‘ಆಮೆನ್’ ಎಂದು ಹೇಳಬೇಕು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201920 “ಅವರು, ಮಲತಾಯಿಯನ್ನು ಸಂಗಮಿಸಿ ತಂದೆಗೆ ಅವಮಾನಪಡಿಸಿದವನು ಶಾಪಗ್ರಸ್ತನು” ಎಂದು ಹೇಳಲು ಜನರೆಲ್ಲರೂ, “ಆಮೆನ್” ಅನ್ನಬೇಕು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)20 ‘ಅವರು, ‘ಮಲತಾಯಿಯನ್ನು ಸಂಗಮಿಸಿ ತಂದೆಗೆ ಅವಮಾನಪಡಿಸಿದವನು ಶಾಪಗ್ರಸ್ತ,’ ಎನ್ನಲು ಜನರೆಲ್ಲರು, ‘ಆಮೆನ್’, ಎನ್ನಬೇಕು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)20 ಅವರು - ಮಲತಾಯಿಯನ್ನು ಸಂಗವಿುಸಿ ತಂದೆಗೆ ಅವಮಾನಪಡಿಸಿದವನು ಶಾಪಗ್ರಸ್ತ ಎನ್ನಲಾಗಿ ಜನರೆಲ್ಲರೂ - ಹೌದು ಅನ್ನಬೇಕು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ20 ಅವರು, “ಮಲತಾಯಿಯ ಸಂಗಡ ಅನೈತಿಕವಾಗಿ ನಡೆದು ತನ್ನ ತಂದೆಯ ಹಾಸಿಗೆಯನ್ನು ಅವಮಾನಪಡಿಸಿದವನು ಶಾಪಗ್ರಸ್ತನು,” ಎಂದು ಹೇಳಿದಾಗ, ಎಲ್ಲಾ ಜನರು, “ಆಮೆನ್,” ಎಂದು ಹೇಳಬೇಕು. ಅಧ್ಯಾಯವನ್ನು ನೋಡಿ |
ರೂಬೇನನು ಇಸ್ರೇಲನ ಚೊಚ್ಚಲಮಗ. ಅವನು ಚೊಚ್ಚಲಮಗನಿಗೆ ಸಿಗಬೇಕಾಗಿದ್ದ ಹಕ್ಕುಗಳನ್ನು ಪಡೆದುಕೊಳ್ಳಬೇಕಾಗಿತ್ತು. ಆದರೆ ಅವನು ತನ್ನ ತಂದೆಯ ಉಪಪತ್ನಿಯೊಡನೆ ಸಂಭೋಗಿಸಿದ್ದರಿಂದ ಅವನ ಹಕ್ಕುಗಳು ಯೋಸೇಫನ ಮಕ್ಕಳಿಗೆ ದೊರೆತವು. ಆದ್ದರಿಂದ ವಂಶಾವಳಿಯಲ್ಲಿ ಚೊಚ್ಚಲ ಮಗನ ಸ್ಥಾನ ಅವನಿಗೆ ದೊರೆಯಲಿಲ್ಲ. ಯೆಹೂದನು ತನ್ನ ಎಲ್ಲಾ ಸಹೋದರರಿಗಿಂತ ಬಲಾಢ್ಯನಾದನು. ಆದ್ದರಿಂದ ಅವನ ಕುಲದಿಂದಲೇ ನಾಯಕರುಗಳು ಬಂದರು. ಆದರೆ ಚೊಚ್ಚಲ ಮಗನಿಗೆ ಸಿಗಬೇಕಾಗಿದ್ದ ಇತರ ಹಕ್ಕುಗಳು ಯೋಸೇಫನ ಮಕ್ಕಳಿಗೆ ದೊರೆತವು. ರೂಬೇನನ ಮಕ್ಕಳು ಯಾರೆಂದರೆ: ಹನೋಕ್, ಫಲ್ಲೂ, ಹೆಚ್ರೋನ್ ಮತ್ತು ಕರ್ಮೀ.