ಧರ್ಮೋಪದೇಶಕಾಂಡ 27:24 - ಪರಿಶುದ್ದ ಬೈಬಲ್24 “ಲೇವಿಯರು, ‘ಇನ್ನೊಬ್ಬ ವ್ಯಕ್ತಿಯನ್ನು ಕೊಲೆ ಮಾಡಿದವನು ಹಿಡಿಯಲ್ಪಡದಿದ್ದರೂ ಸಹ ಶಾಪಗ್ರಸ್ತನಾಗಲಿ’ ಎಂದು ಹೇಳಬೇಕು. “ಆಗ ಎಲ್ಲಾ ಜನರು, ‘ಆಮೆನ್’ ಎಂದು ಹೇಳಬೇಕು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201924 “ಅವರು, ರಹಸ್ಯವಾಗಿ ನರಹತ್ಯಮಾಡಿದವನು ಶಾಪಗ್ರಸ್ತನು” ಎಂದು ಹೇಳಲು ಜನರೆಲ್ಲರೂ, “ಆಮೆನ್” ಅನ್ನಬೇಕು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)24 “ಅವರು, ‘ರಹಸ್ಯವಾಗಿ ನರಹತ್ಯ ಮಾಡಿದವನು ಶಾಪಗ್ರಸ್ತ,’ ಎನ್ನಲು ಜನರೆಲ್ಲರು, ‘ಆಮೆನ್’, ಎನ್ನಬೇಕು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)24 ಅವರು - ರಹಸ್ಯವಾಗಿ ನರಹತ್ಯ ಮಾಡಿದವನು ಶಾಪಗ್ರಸ್ತ ಎನ್ನಲಾಗಿ ಜನರೆಲ್ಲರೂ - ಹೌದು ಅನ್ನಬೇಕು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ24 ಅವರು, “ತನ್ನ ನೆರೆಯವನನ್ನು ರಹಸ್ಯವಾಗಿ ಕೊಲೆಮಾಡಿದವನು ಶಾಪಗ್ರಸ್ತನು,” ಎಂದು ಹೇಳಿದಾಗ, ಎಲ್ಲಾ ಜನರು, “ಆಮೆನ್,” ಎಂದು ಹೇಳಬೇಕು. ಅಧ್ಯಾಯವನ್ನು ನೋಡಿ |
ಆಗ ಅಬ್ಷಾಲೋಮನು ತನ್ನ ಸೇವಕರಿಗೆ ಈ ರೀತಿ ಆಜ್ಞೆ ಮಾಡಿದನು: “ಅಮ್ನೋನನನ್ನು ಗಮನಿಸುತ್ತಿರಿ. ಅವನು ಮತ್ತನಾಗಿ ಆನಂದಿಸುತ್ತಿರುವಾಗ ನಾನು ಆಜ್ಞೆಯನ್ನು ಕೊಡುತ್ತೇನೆ. ಆಗ ನೀವು ಅವನ ಮೇಲೆ ಆಕ್ರಮಣಮಾಡಿ ಕೊಲ್ಲಬೇಕು. ನಿಮಗೆ ಶಿಕ್ಷೆಯಾಗುತ್ತದೆ ಎಂಬ ಭಯವಿಲ್ಲದಿರಲಿ, ಯಾಕೆಂದರೆ ನೀವು ನನ್ನ ಆಜ್ಞೆಯನ್ನು ಪಾಲಿಸಿದಿರಷ್ಟೇ, ಆದ್ದರಿಂದ ಶಕ್ತರಾಗಿಯೂ ಧೈರ್ಯವಂತರಾಗಿಯೂ ಇರಿ” ಎಂದನು.
“ಚೆರೂಯಳ ಮಗನಾದ ಯೋವಾಬನು ನನಗೆ ಮಾಡಿದ್ದನ್ನು ಸಹ ನೀನು ಜ್ಞಾಪಿಸಿಕೊ. ಇಸ್ರೇಲಿನ ಇಬ್ಬರು ಸೇನಾಧಿಪತಿಗಳನ್ನು ಅವನು ಕೊಂದುಹಾಕಿದನು. ಅವರು ಯಾರೆಂದರೆ: ನೇರನ ಮಗನಾದ ಅಬ್ನೇರನು ಮತ್ತು ಯೆತೆರನ ಮಗನಾದ ಅಮಾಸನು. ಈ ಜನರ ರಕ್ತವು ಅವನ ಸೊಂಟಪಟ್ಟಿಯ ಕತ್ತಿ ಹಾಗೂ ಯುದ್ಧಕಾಲದಲ್ಲಿ ತೊಡುವ ಪಾದರಕ್ಷೆಗಳ ಮೇಲೆ ಚಿಮ್ಮಿತು. ಶಾಂತಿಯ ಕಾಲದಲ್ಲಿ ಅವನು ಅವರನ್ನು ಕೊಂದುಹಾಕಿದನು. ಆದ್ದರಿಂದ ನಾನು ಅವನನ್ನು ದಂಡಿಸಬೇಕಾಗಿತ್ತು.