Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಧರ್ಮೋಪದೇಶಕಾಂಡ 27:3 - ಪರಿಶುದ್ದ ಬೈಬಲ್‌

3 ಅದರ ಮೇಲೆ ನಾನು ಆಜ್ಞಾಪಿಸಿದ್ದನ್ನೆಲ್ಲಾ ಬರೆಯಿರಿ. ನೀವು ನದಿಯನ್ನು ದಾಟಿದಾಗ ಈ ಕಾರ್ಯವನ್ನು ಮಾಡಬೇಕು. ಅನಂತರ, ಆತನು ನಿಮ್ಮ ಪೂರ್ವಿಕರಿಗೆ ವಾಗ್ದಾನ ಮಾಡಿದ ಸಮೃದ್ಧಿಯಾದ ದೇಶದೊಳಕ್ಕೆ ಹೋಗಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ನಿಮ್ಮ ಪೂರ್ವಿಕರ ದೇವರಾದ ಯೆಹೋವನು ತಾನು ವಾಗ್ದಾನಮಾಡಿದಂತೆ ನಿಮಗೆ ಕೊಡುವ ಹಾಲೂ ಮತ್ತು ಜೇನೂ ಹರಿಯುವ ದೇಶವನ್ನು ಪ್ರವೇಶಿಸುವುದಕ್ಕೆ ನೀವು ಯೊರ್ದನ್ ನದಿಯನ್ನು ದಾಟುವಾಗ ಈ ಧರ್ಮಶಾಸ್ತ್ರದ ವಾಕ್ಯಗಳನ್ನೆಲ್ಲಾ ಆ ದೊಡ್ಡ ಕಲ್ಲುಗಳ ಮೇಲೆ ಬರೆಯಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

3 ನಿಮ್ಮ ಪಿತೃಗಳ ದೇವರಾದ ಯೆಹೋವ ದೇವರು ನಿಮಗೆ ವಾಗ್ದಾನ ಮಾಡಿದ ಪ್ರಕಾರ ಅಂದರೆ, ನಿಮ್ಮ ದೇವರಾದ ಯೆಹೋವ ದೇವರು ನಿಮಗೆ ಕೊಡುವ ಹಾಲೂ ಜೇನೂ ಹರಿಯುವಂಥ ದೇಶವನ್ನು ನೀವು ಪ್ರವೇಶಿಸುವಂತೆ ಯೊರ್ದನ್ ನದಿಯನ್ನು ದಾಟುವಾಗ, ಅವುಗಳ ಮೇಲೆ ಈ ನಿಯಮದ ವಾಕ್ಯಗಳನ್ನೆಲ್ಲಾ ಆ ಕಲ್ಲಿನ ಮೇಲೆ ಬರೆಯಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಧರ್ಮೋಪದೇಶಕಾಂಡ 27:3
14 ತಿಳಿವುಗಳ ಹೋಲಿಕೆ  

ಆ ಸ್ಥಳದಲ್ಲಿ ಯೆಹೋಶುವನು ಮೋಶೆಯ ಧರ್ಮಶಾಸ್ತ್ರವನ್ನು ಕಲ್ಲಿನ ಹಲಗೆಗಳ ಮೇಲೆ ಬರೆಸಿದನು. ಇಸ್ರೇಲರೆಲ್ಲರೂ ಅದನ್ನು ನೋಡಬೇಕೆಂಬುದೇ ಅದರ ಉದ್ದೇಶವಾಗಿತ್ತು.


ಅಲ್ಲಿಂದ ನಮ್ಮನ್ನು ಕರೆದುತಂದು ನಮಗೆ ಈ ಒಳ್ಳೆಯ ದೇಶವನ್ನು ಕೊಟ್ಟನು.


“ಮುಂದಿನ ಕಾಲದಲ್ಲಿ ನಾನು ನನ್ನ ಜನರೊಂದಿಗೆ ಮಾಡಿಕೊಳ್ಳುವ ಒಡಂಬಡಿಕೆಯು ಹೀಗಿದೆ ಎಂದು ಪ್ರಭುವು ಹೇಳುತ್ತಾನೆ: ನಾನು ನನ್ನ ಆಜ್ಞೆಗಳನ್ನು ಅವರ ಹೃದಯದಲ್ಲಿ ಇಡುವೆನು; ಅವರ ಮನಸ್ಸಿನ ಮೇಲೆ ಬರೆಯುವೆನು.”


ಅದು ಹಾಲೂ ಜೇನೂ ಹರಿಯುವ ದೇಶ. ಯೆಹೋವನು ನಮ್ಮನ್ನು ಮೆಚ್ಚಿಕೊಂಡರೆ ಆ ದೇಶದೊಳಗೆ ನಮ್ಮನ್ನು ಕರೆದೊಯ್ದು ಅದನ್ನು ನಮ್ಮ ಸ್ವಾಧೀನಕ್ಕೆ ಕೊಡುವನು.


ಜನರು ಮೋಶೆಗೆ, “ನೀನು ಕಳುಹಿಸಿದ ದೇಶಕ್ಕೆ ನಾವು ಹೋಗಿ ಸಂಚರಿಸಿ ನೋಡಿದೆವು. ಅದು ಹಾಲೂ ಜೇನೂ ಹರಿಯುವ ದೇಶವಾಗಿದೆ. ಇಗೋ, ಹಣ್ಣುಗಳಲ್ಲಿ ಕೆಲವು ಇಲ್ಲಿವೆ.


“ಯೆಹೋವನೇ, ನೀನು ಈ ಭೂಮಿಯನ್ನು ಇಸ್ರೇಲರಿಗೆ ಕೊಟ್ಟೆ. ನೀನು ಬಹಳ ಕಾಲದ ಹಿಂದೆಯೇ ಈ ಭೂಮಿಯನ್ನು ಅವರ ಪೂರ್ವಿಕರಿಗೆ ಕೊಡುವದಾಗಿ ಮಾತು ಕೊಟ್ಟಿದ್ದೆ. ಇದು ಬಹಳ ಒಳ್ಳೆಯ ಭೂಮಿ. ಇದು ಅನೇಕ ಒಳ್ಳೆ ವಸ್ತುಗಳನ್ನು ಹೊಂದಿರುವ ಒಳ್ಳೆಯ ಭೂಮಿ.


“ನಾನು ನಿಮ್ಮ ಪೂರ್ವಿಕರಿಗೆ ಮಾಡಿದ ವಾಗ್ದಾನವನ್ನು ನೆರವೇರಿಸಲು ನಾನು ಇದೆಲ್ಲವನ್ನು ಮಾಡಿದೆ. ನಾನು ಅವರಿಗೆ ಫಲವತ್ತಾದ ಭೂಮಿಯನ್ನೂ ಹಾಲು ಮತ್ತು ಜೇನು ಹರಿಯುವ ಪ್ರದೇಶವನ್ನೂ ಕೊಡುವ ವಾಗ್ದಾನ ಮಾಡಿದ್ದೆ. ನೀವು ಈಗ ಈ ಪ್ರದೇಶದಲ್ಲಿ ವಾಸಮಾಡುತ್ತಿದ್ದೀರಿ.” ನಾನು, “ಯೆಹೋವನೇ ನಿನ್ನ ಅಪ್ಪಣೆಯಂತಾಗಲಿ” ಎಂದು ಉತ್ತರಿಸಿದೆನು.


ಈ ಆಜ್ಞೆಗಳನ್ನು ಬರೆದು ನಿಮ್ಮ ಕೈಗಳಿಗೆ ಕಟ್ಟಿರಿ, ನಿಮ್ಮ ಹಣೆಗಳ ಮೇಲೆ ಕಟ್ಟಿರಿ. ಇವು ನನ್ನ ಬೋಧನೆಯ ವಿಚಾರವಾಗಿ ನಿಮಗೆ ಜ್ಞಾಪಕ ಹುಟ್ಟಿಸಲು ಸಹಾಯವಾಗುವುದು.


ನೀವು ಅವರ ದೇಶವನ್ನು ಪಡೆಯುವಿರಿ ಎಂದು ನಾನು ನಿಮಗೆ ಹೇಳಿದ್ದೇನೆ. ನಾನು ಅವರ ದೇಶವನ್ನು ನಿಮಗೆ ಕೊಡುವೆ. ಅದು ನಿಮ್ಮ ದೇಶವಾಗಿರುವದು. ಅದು ಅನೇಕ ಒಳ್ಳೆ ಸಂಗತಿಗಳಿಂದ ತುಂಬಿದ ದೇಶವಾಗಿದೆ. ನಾನು ನಿಮ್ಮ ದೇವರಾಗಿರುವ ಯೆಹೋವನು! “ನಾನು ನಿಮ್ಮನ್ನು ನನ್ನ ವಿಶೇಷ ಜನರನ್ನಾಗಿ ಮಾಡಿಕೊಂಡಿದ್ದೇನೆ. ನಾನು ನಿಮ್ಮನ್ನು ಇತರ ಜನರಿಂದ ಆರಿಸಿಕೊಂಡಿದ್ದೇನೆ.


ಇಸ್ರೇಲಿನ ಜನರೇ, ಕಿವಿಗೊಟ್ಟು ಕೇಳಿರಿ. ದೇವರ ಆಜ್ಞೆಗಳಿಗೆ ವಿಧೇಯರಾಗಿರಿ. ಆಗ ನಿಮಗೆ ಎಲ್ಲಾದರಲ್ಲಿ ಶುಭವಾಗುವುದು. ನಿಮಗೆ ಹೆಚ್ಚು ಮಕ್ಕಳಾಗುವವು. ನೀವು ನೆಲೆಸುವ ದೇಶವು ನಿಮ್ಮ ಪೂರ್ವಿಕರಿಗೆ ದೇವರು ವಾಗ್ದಾನ ಮಾಡಿದ ಪ್ರಕಾರ ಫಲಭರಿತವಾಗುವುದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು