ಧರ್ಮೋಪದೇಶಕಾಂಡ 27:7 - ಪರಿಶುದ್ದ ಬೈಬಲ್7 ನೀವು ಅಲ್ಲಿ ಯಜ್ಞವನ್ನರ್ಪಿಸಿ ಸಮಾಧಾನಯಜ್ಞದ ಭೋಜನವನ್ನು ಮಾಡಬೇಕು. ಅಲ್ಲಿ ದೇವರ ಸನ್ನಿಧಾನದಲ್ಲಿ ಊಟ ಮಾಡಿ ಸಂತೋಷಪಡಿರಿ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20197 ಅಲ್ಲಿ ಸರ್ವಾಂಗಹೋಮಗಳನ್ನೂ ಮತ್ತು ಸಮಾಧಾನಯಜ್ಞಗಳನ್ನೂ ಸಮರ್ಪಿಸಿ, ಸಹಭೋಜನಮಾಡಿ, ನಿಮ್ಮ ದೇವರಾದ ಯೆಹೋವನ ಸನ್ನಿಧಿಯಲ್ಲಿ ಸಂಭ್ರಮಿಸಬೇಕು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)7 ಅಲ್ಲಿ ದಹನಬಲಿಗಳನ್ನೂ ಶಾಂತಿಸಮಾಧಾನ ಬಲಿಗಳನ್ನೂ ಸಮರ್ಪಿಸಿ ಸಹಭೋಜನ ಮಾಡಿ ನಿಮ್ಮ ದೇವರಾದ ಸರ್ವೇಶ್ವರನ ಸನ್ನಿಧಿಯಲ್ಲಿ ಸಂಭ್ರಮದಿಂದಿರಬೇಕು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)7 ಅಲ್ಲಿ ಸರ್ವಾಂಗಹೋಮಗಳನ್ನೂ ಸಮಾಧಾನಯಜ್ಞಗಳನ್ನೂ ಸಮರ್ಪಿಸಿ ಸಹಭೋಜನಮಾಡಿ ನಿಮ್ಮ ದೇವರಾದ ಯೆಹೋವನ ಸನ್ನಿಧಿಯಲ್ಲಿ ಸಂಭ್ರಮದಿಂದಿರಬೇಕು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ7 ಅಲ್ಲಿ ದಹನಬಲಿಗಳನ್ನೂ ಸಮಾಧಾನ ಬಲಿಗಳನ್ನೂ ಸಮರ್ಪಿಸಿ, ಸಹಭೋಜನ ಮಾಡಿ, ನಿಮ್ಮ ದೇವರಾದ ಯೆಹೋವ ದೇವರ ಸನ್ನಿಧಿಯಲ್ಲಿ ಸಂಭ್ರಮದಿಂದಿರಬೇಕು. ಅಧ್ಯಾಯವನ್ನು ನೋಡಿ |
ಯೆಹೋವನು ನನ್ನನ್ನು ಸಂತೋಷಭರಿತನನ್ನಾಗಿ ಮಾಡುತ್ತಾನೆ. ನನ್ನ ಸಂಪೂರ್ಣ ವ್ಯಕ್ತಿತ್ವವು ನನ್ನ ದೇವರಲ್ಲಿ ಸಂತೋಷಿಸುತ್ತದೆ. ಯೆಹೋವನು ರಕ್ಷಣೆಯೆಂಬ ವಸ್ತ್ರವನ್ನು ನನಗೆ ತೊಡಿಸಿದ್ದಾನೆ. ಮದುವೆಯಲ್ಲಿ ಮದುಮಗನು ಧರಿಸಿಕೊಳ್ಳುವ ಬಟ್ಟೆಯಂತೆ ಅದು ನಯವಾಗಿದೆ. ಯೆಹೋವನು ನನಗೆ ನೀತಿಯೆಂಬ ನಿಲುವಂಗಿಯನ್ನು ತೊಡಿಸಿರುತ್ತಾನೆ. ಅದು ಮದುಮಗಳು ಮದುವೆಯಲ್ಲಿ ಧರಿಸಿಕೊಳ್ಳುವ ಬಟ್ಟೆಯಂತಿದೆ.
ಚೀಯೋನಿನಲ್ಲಿ ದುಃಖಿಸುವ ಜನರ ಬಳಿಗೆ ನನ್ನನ್ನು ಕಳುಹಿಸಿದನು. ನಾನು ಅವರನ್ನು ಉತ್ಸವಕ್ಕಾಗಿ ಸಿದ್ಧಪಡಿಸುವೆನು. ಅವರ ತಲೆಯ ಮೇಲಿರುವ ಬೂದಿಯನ್ನು ತೆಗೆದುಹಾಕಿ ಅದರ ಬದಲಾಗಿ ಕಿರೀಟವನ್ನು ತೊಡಿಸುವೆನು. ಅವರ ದುಃಖವನ್ನು ತೆಗೆದುಹಾಕಿ ಅವರಿಗೆ ತೈಲವೆಂಬ ಸಂತೋಷವನ್ನು ಅನುಗ್ರಹಿಸುವೆನು. ಅವರ ದುಃಖವನ್ನೆಲ್ಲಾ ನಿವಾರಿಸಿ ಉತ್ಸವಕ್ಕಾಗಿ ಅವರಿಗೆ ಬಟ್ಟೆಯನ್ನು ತೊಡಿಸುವೆನು. ಅವರನ್ನು ಒಳ್ಳೆಯ ಮರಗಳೆಂತಲೂ ದೇವರ ಆಶ್ಚರ್ಯಕರವಾದ ಸಸಿಯೆಂತಲೂ ಕರೆಯುವದಕ್ಕಾಗಿ ದೇವರೇ ನನ್ನನ್ನು ಕಳುಹಿಸಿದನು.”