ಧರ್ಮೋಪದೇಶಕಾಂಡ 27:8 - ಪರಿಶುದ್ದ ಬೈಬಲ್8 ನೀವು ಆ ಕಲ್ಲುಗಳ ಮೇಲೆ ಈ ಉಪದೇಶಗಳನ್ನೆಲ್ಲ ಸ್ಪಷ್ಟವಾಗಿ ಓದಲು ಸುಲಭವಾದ ರೀತಿಯಲ್ಲಿ ಬರೆಯಬೇಕು.” ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20198 ನೀವು ಆ ಕಲ್ಲುಗಳ ಮೇಲೆ ಈ ಧರ್ಮಶಾಸ್ತ್ರದ ವಾಕ್ಯಗಳನ್ನೆಲ್ಲಾ ಸ್ಪಷ್ಟವಾಗಿ ಬರೆಯಬೇಕು” ಎಂದು ಆಜ್ಞಾಪಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)8 ನೀವು ಆ ಕಲ್ಲುಗಳ ಮೇಲೆ ಈ ಧರ್ಮಶಾಸ್ತ್ರದ ವಾಕ್ಯಗಳನ್ನೆಲ್ಲಾ ವಿರಳವಾಗಿ ಹಾಗು ಸ್ಪಷ್ಟವಾಗಿ ಬರೆಸಬೇಕು,” ಎಂದು ಆಜ್ಞಾಪಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)8 ನೀವು ಆ ಕಲ್ಲುಗಳ ಮೇಲೆ ಈ ಧರ್ಮಶಾಸ್ತ್ರದ ವಾಕ್ಯಗಳನ್ನೆಲ್ಲಾ ವಿರಲವಾಗಿಯೂ ಸ್ಪಷ್ಟವಾಗಿಯೂ ಬರಿಸಬೇಕೆಂದು ಆಜ್ಞಾಪಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ8 ನೀವು ಆ ಕಲ್ಲುಗಳ ಮೇಲೆ ಈ ನಿಯಮದ ವಾಕ್ಯಗಳನ್ನೆಲ್ಲಾ ಬಹುಸ್ಪಷ್ಟವಾಗಿ ಬರೆಸಬೇಕು,” ಎಂದು ಆಜ್ಞಾಪಿಸಿದರು. ಅಧ್ಯಾಯವನ್ನು ನೋಡಿ |
ಯಜ್ಞವೇದಿಕೆಯನ್ನು ಹೇಗೆ ಕಟ್ಟಬೇಕೆಂಬುದನ್ನು ಯೆಹೋವನ ಸೇವಕನಾದ ಮೋಶೆಯು ಇಸ್ರೇಲರಿಗೆ ಹೇಳಿ ಕೊಟ್ಟಿದ್ದನು. ಆದ್ದರಿಂದ ಮೋಶೆಯ ಧರ್ಮಶಾಸ್ತ್ರದ ಗ್ರಂಥದಲ್ಲಿ ವಿವರಿಸಿದಂತೆ ಯೆಹೋಶುವನು ಯಜ್ಞವೇದಿಕೆಯನ್ನು ಕಟ್ಟಿಸಿದನು. ಯಜ್ಞವೇದಿಕೆಯನ್ನು ಕಡಿಯದ ಕಲ್ಲುಗಳಿಂದ ಮಾಡಲಾಯಿತು. ಆ ಕಲ್ಲುಗಳ ಮೇಲೆ ಯಾವ ಉಪಕರಣವನ್ನೂ ಉಪಯೋಗಿಸಿರಲಿಲ್ಲ. ಯೆಹೋವನಿಗೆ ಆ ಯಜ್ಞವೇದಿಕೆಯ ಮೇಲೆ ಸರ್ವಾಂಗಹೋಮಗಳನ್ನೂ ಸಮಾಧಾನಯಜ್ಞಗಳನ್ನೂ ಅರ್ಪಿಸಿದರು.