ಧರ್ಮೋಪದೇಶಕಾಂಡ 27:9 - ಪರಿಶುದ್ದ ಬೈಬಲ್9 ಮೋಶೆಯೂ ಯಾಜಕರೂ ಇಸ್ರೇಲ್ ಸಮೂಹದವರೊಂದಿಗೆ ಮಾತನಾಡಿದರು. ಆಗ ಮೋಶೆಯು, “ಇಸ್ರೇಲರೇ, ಮೌನವಾಗಿ ನನ್ನ ಮಾತುಗಳನ್ನು ಕೇಳಿರಿ. ಈ ದಿನ ನೀವು ದೇವರಾದ ಯೆಹೋವನ ಸ್ವಕೀಯ ಪ್ರಜೆಯಾಗಿರುತ್ತೀರಿ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20199 ಮೋಶೆ, ಯಾಜಕರು ಮತ್ತು ಲೇವಿಯರೊಡನೆ ಇಸ್ರಾಯೇಲರೆಲ್ಲರಿಗೆ, “ಇಸ್ರಾಯೇಲರೇ, ನಿಶ್ಯಬ್ದವಾಗಿದ್ದು ಕೇಳಿರಿ, ನೀವು ಈಗ ನಿಮ್ಮ ದೇವರಾದ ಯೆಹೋವನ ಜನರಾಗಿದ್ದೀರಷ್ಟೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)9 ಯಾಜಕರಾದ ಲೇವಿಯರೊಡನೆ ಮೋಶೆ ಇಸ್ರಯೇಲರೆಲ್ಲರಿಗೆ, “ಇಸ್ರಯೇಲರೇ, ನಿಶ್ಯಬ್ದವಾಗಿದ್ದು ಕೇಳಿರಿ: ನೀವು ಈಗ ನಿಮ್ಮ ದೇವರಾದ ಸರ್ವೇಶ್ವರನ ಜನರಾದಿರಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)9 ಯಾಜಕರಾದ ಲೇವಿಯರೊಡನೆ ಮೋಶೆಯು ಇಸ್ರಾಯೇಲ್ಯರೆಲ್ಲರಿಗೆ - ಇಸ್ರಾಯೇಲ್ಯರೇ, ನಿಶಬ್ದವಾಗಿದ್ದು ಕೇಳಿರಿ. ನೀವು ಈಗ ನಿಮ್ಮ ದೇವರಾದ ಯೆಹೋವನ ಜನರಾದಿರಷ್ಟೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ9 ಆಗ ಮೋಶೆಯೂ ಯಾಜಕರಾದ ಲೇವಿಯರೂ ಸಮಸ್ತ ಇಸ್ರಾಯೇಲಿನ ಸಂಗಡ ಮಾತನಾಡಿ, “ಇಸ್ರಾಯೇಲರೇ, ಶಾಂತರಾಗಿದ್ದು ಕೇಳಿರಿ. ನೀವು ಈ ಹೊತ್ತು ನಿಮ್ಮ ದೇವರಾದ ಯೆಹೋವ ದೇವರ ಜನಾಂಗವಾಗಿದ್ದೀರಿ. ಅಧ್ಯಾಯವನ್ನು ನೋಡಿ |