ಧರ್ಮೋಪದೇಶಕಾಂಡ 28:1 - ಪರಿಶುದ್ದ ಬೈಬಲ್1 “ನಾನು ಹೇಳಿದಂಥ ಎಲ್ಲಾ ಧರ್ಮಶಾಸ್ತ್ರವನ್ನು ಅನುಸರಿಸಿ ಅದಕ್ಕೆ ವಿಧೇಯರಾದರೆ ನಿಮ್ಮ ದೇವರಾದ ಯೆಹೋವನು ಪ್ರಪಂಚದ ಎಲ್ಲಾ ದೇಶಗಳಿಗಿಂತ ನಿಮ್ಮ ದೇಶವನ್ನು ಅತೀ ಉನ್ನತಸ್ಥಾನದಲ್ಲಿರುವ ದೇಶವನ್ನಾಗಿ ಮಾಡುವನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20191 ನೀವು ನಿಮ್ಮ ದೇವರಾದ ಯೆಹೋವನ ಮಾತನ್ನು ಶ್ರದ್ಧೆಯಿಂದ ಕೇಳಿ, ನಾನು ಈಗ ನಿಮಗೆ ಬೋಧಿಸುವ ಆತನ ಆಜ್ಞೆಗಳನ್ನೆಲ್ಲಾ ಅನುಸರಿಸಿ ನಡೆದರೆ, ಆತನು ಭೂಮಿಯ ಮೇಲಿರುವ ಎಲ್ಲಾ ಜನಾಂಗಗಳಿಗಿಂತಲೂ ನಿಮ್ಮನ್ನು ಉನ್ನತಸ್ಥಿತಿಗೆ ತರುವನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)1 “ನೀವು ನಿಮ್ಮ ದೇವರಾದ ಸರ್ವೇಶ್ವರನ ಮಾತನ್ನು ಶ್ರದ್ಧೆಯಿಂದ ಕೇಳಿ, ನಾನು ಈಗ ನಿಮಗೆ ಬೋಧಿಸುವ ಅವರ ಆಜ್ಞೆಗಳನ್ನೆಲ್ಲಾ ಅನುಸರಿಸಿ ನಡೆದರೆ, ಅವರು ಜಗದ ಎಲ್ಲ ಜನಾಂಗಗಳಿಗಿಂತ ನಿಮ್ಮನ್ನು ಉನ್ನತಸ್ಥಿತಿಗೆ ತರುವರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)1 ನೀವು ನಿಮ್ಮ ದೇವರಾದ ಯೆಹೋವನ ಮಾತನ್ನು ಶ್ರದ್ಧೆಯಿಂದ ಕೇಳಿ ನಾನು ಈಗ ನಿಮಗೆ ಬೋಧಿಸುವ ಆತನ ಆಜ್ಞೆಗಳನ್ನೆಲ್ಲಾ ಅನುಸರಿಸಿ ನಡೆದರೆ ಆತನು ಭೂವಿುಯ ಮೇಲಿರುವ ಎಲ್ಲಾ ಜನಾಂಗಗಳಿಗಿಂತಲೂ ನಿಮ್ಮನ್ನು ಉನ್ನತಸ್ಥಿತಿಗೆ ತರುವನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ1 ನೀವು ನಿಮ್ಮ ದೇವರಾದ ಯೆಹೋವ ದೇವರ ಮಾತನ್ನು ಶ್ರದ್ಧೆಯಿಂದ ಕೇಳಿ, ನಾನು ಈ ಹೊತ್ತು ನಿಮಗೆ ಆಜ್ಞಾಪಿಸುವ ಅವರ ಎಲ್ಲಾ ಆಜ್ಞೆಗಳನ್ನು ಅನುಸರಿಸಿ ನಡೆದರೆ, ನಿಮ್ಮ ದೇವರಾದ ಯೆಹೋವ ದೇವರು ನಿಮ್ಮನ್ನು ಭೂಲೋಕದ ಎಲ್ಲಾ ಜನಾಂಗಗಳಿಗಿಂತ ಉನ್ನತ ಸ್ಥಿತಿಯಲ್ಲಿರಿಸುವರು. ಅಧ್ಯಾಯವನ್ನು ನೋಡಿ |
ನಾನು ನಿಮ್ಮ ಪೂರ್ವಿಕರ ಸಂಗಡ ಮಾಡಿಕೊಂಡ ಒಡಂಬಡಿಕೆಯ ಬಗ್ಗೆ ಮಾತನಾಡುತ್ತಿದ್ದೇನೆ. ನಾನು ಈಜಿಪ್ಟಿನಿಂದ ಅವರನ್ನು ಹೊರತಂದಾಗ ನಾನು ಅವರೊಂದಿಗೆ ಈ ಒಡಂಬಡಿಕೆಯನ್ನು ಮಾಡಿಕೊಂಡೆ. ಈಜಿಪ್ಟು ಅನೇಕ ಕಷ್ಟಗಳ ನಾಡಾಗಿತ್ತು. ಅದು ಕಬ್ಬಿಣವನ್ನು ಕರಗಿಸುವ ಉರಿಯುವ ಕುಲುಮೆಯಂತಿತ್ತು. ನಾನು ಅವರಿಗೆ, ‘ನನ್ನ ಆಜ್ಞಾಪಾಲನೆಯನ್ನು ಮಾಡಿರಿ ಮತ್ತು ನಾನು ಹೇಳಿದಂತೆ ಎಲ್ಲವನ್ನು ಮಾಡಿರಿ. ಆಗ ನೀವು ನನ್ನ ಭಕ್ತರಾಗುವಿರಿ. ನಾನು ನಿಮ್ಮ ದೇವರಾಗುವೆನು’ ಎಂದೆ.
ಆ ಜನರು ತಮ್ಮ ಪಾಠಗಳನ್ನು ಸರಿಯಾಗಿ ಕಲಿತುಕೊಳ್ಳಬೇಕೆಂಬುದು ನನ್ನ ಅಪೇಕ್ಷೆ. ಮೊದಲು, ಆ ಜನರು ಬಾಳನ ಹೆಸರೆತ್ತಿ ಪ್ರಮಾಣ ಮಾಡುವುದನ್ನು ನನ್ನ ಜನರಿಗೆ ಕಲಿಸಿಕೊಟ್ಟರು. ಈಗ ಆ ಜನರು ಅದೇ ರೀತಿಯಲ್ಲಿ ತಮ್ಮ ಪಾಠವನ್ನು ಕಲಿತುಕೊಳ್ಳಬೇಕೆಂಬುದು ನನ್ನ ಇಚ್ಛೆ. ಅವರು, ‘ಯೆಹೋವನ ಜೀವದಾಣೆ’ ಎಂದು ಹೇಳಿದರೆ ಅವರನ್ನು ಅಭಿವೃದ್ಧಿಪಡಿಸಿ ಅವರನ್ನು ನಮ್ಮ ಜನರ ಮಧ್ಯದಲ್ಲಿ ನೆಲೆಗೊಳಿಸುವೆನು.