11 “ನಿಮ್ಮ ದೇವರಾದ ಯೆಹೋವನು ನಿಮಗೆ ಒಳ್ಳೆಯ ವಸ್ತುಗಳನ್ನು ಕೊಡುವನು; ನಿಮಗೆ ಹೆಚ್ಚು ಮಕ್ಕಳನ್ನು ಅನುಗ್ರಹಿಸುವನು. ನಿಮ್ಮ ಪಶುಗಳು ಹೆಚ್ಚು ಮರಿಗಳನ್ನು ಈಯುವಂತೆ ಮಾಡುವನು. ಯೆಹೋವನು ನಿಮಗೆ ಕೊಡುವುದಾಗಿ ವಾಗ್ದಾನ ಮಾಡಿದ ದೇಶದಲ್ಲಿ ನಿಮ್ಮ ಹೊಲವು ಒಳ್ಳೆಯ ಬೆಳೆಗಳನ್ನು ಫಲಿಸುತ್ತದೆ.
ನಿಮ್ಮ ಎಲ್ಲಾ ಕಾರ್ಯಗಳಲ್ಲಿ ಯಶಸ್ವಿಯಾಗುವಂತೆ ದೇವರು ಮಾಡುವನು. ನಿಮಗೆ ಅನೇಕ ಮಕ್ಕಳನ್ನು ಅನುಗ್ರಹಿಸುವನು. ನಿಮ್ಮ ದನಗಳನ್ನು ಆಶೀರ್ವದಿಸುವನು. ಅವುಗಳಿಗೆ ಅನೇಕ ಕರುಗಳಿರುವವು. ನಿಮ್ಮ ಹೊಲಗಳು ಅಧಿಕವಾದ ಬೆಳೆಯನ್ನು ಕೊಡುವಂತೆ ಆಶೀರ್ವದಿಸುವನು. ಯೆಹೋವನು ನಿಮಗೆ ಶುಭವನ್ನು ಉಂಟುಮಾಡುವುದರಲ್ಲಿ ಸಂತೋಷಿಸುವನು. ನಿಮ್ಮ ಪೂರ್ವಿಕರಿಗೆ ಮೇಲನ್ನು ಉಂಟುಮಾಡಲು ಆತನು ಬಯಸಿದ್ದನು.
ಯೆಹೋವನು ನಿಮ್ಮನ್ನು ಆಶೀರ್ವದಿಸಿ ನಿಮಗೆ ಅನೇಕ ಮಕ್ಕಳನ್ನು ಅನುಗ್ರಹಿಸುವನು. ನಿಮ್ಮ ಹೊಲಗಳನ್ನು ಆಶೀರ್ವದಿಸಿ ಒಳ್ಳೆಯ ಬೆಳೆಯನ್ನು ಅನುಗ್ರಹಿಸುವನು. ನಿಮ್ಮ ಪಶುಪ್ರಾಣಿಗಳನ್ನು ಆಶೀರ್ವದಿಸಿ ಅವು ಹೆಚ್ಚು ಮರಿಗಳನ್ನು ಈಯುವಂತೆ ಮಾಡುವನು. ಆತನು ನಿಮ್ಮ ಎಲ್ಲಾ ದನಕರು, ಕುರಿಮರಿಗಳನ್ನು ಆಶೀರ್ವದಿಸುವನು.
ನಾನು ನಿಮಗೆ ಆ ಪ್ರಾಂತ್ಯವನ್ನೆಲ್ಲಾ ಕೊಡುವೆನು. ಅಲ್ಲಿಗೆ ಹೋಗಿ ಅದನ್ನು ತೆಗೆದುಕೊಳ್ಳಿರಿ. ನಿಮ್ಮ ಪೂರ್ವಿಕರಾದ ಅಬ್ರಹಾಮನಿಗೆ, ಇಸಾಕನಿಗೆ, ಯಾಕೋಬನಿಗೆ ಮತ್ತು ಅವರ ಸಂತತಿಯವರಿಗೆ ಆ ಪ್ರದೇಶವನ್ನು ಕೊಡುವೆನು ಎಂದು ನಾನು ವಾಗ್ದಾನ ಮಾಡಿದ್ದೇನೆ.’”
ಮತ್ತು ಆತನು ಆಶೀರ್ವದಿಸುವನು. ನಿಮ್ಮ ಜನಾಂಗವು ವೃದ್ಧಿಯಾಗುವಂತೆ ಮಾಡುವನು. ನಿಮ್ಮನ್ನೂ ನಿಮ್ಮ ಮಕ್ಕಳನ್ನೂ ಆಶೀರ್ವದಿಸುವನು. ನಿಮ್ಮ ಹೊಲಗಳಲ್ಲಿ ಸಮೃದ್ಧಿಯಾದ ಬೆಳೆಯು ಉಂಟಾಗುವಂತೆ ಆಶೀರ್ವದಿಸುವನು. ಆತನು ನಿಮಗೆ ಧಾನ್ಯ, ಹೊಸ ದ್ರಾಕ್ಷಾರಸ ಮತ್ತು ಎಣ್ಣೆಗಳನ್ನು ಕೊಡುವನು. ನಿಮ್ಮ ದನಕುರಿಗಳು ಮರಿಗಳನ್ನು ಈಯುವಂತೆ ಆಶೀರ್ವದಿಸುವನು. ನಿಮ್ಮ ಪೂರ್ವಿಕರಿಗೆ ವಾಗ್ದಾನ ಮಾಡಿದ ದೇಶದಲ್ಲಿ ನೀವು ನೆಲೆಸಿರುವಾಗ ನಿಮಗೆ ಈ ಆಶೀರ್ವಾದಗಳೆಲ್ಲಾ ಪ್ರಾಪ್ತವಾಗುವವು.