Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಧರ್ಮೋಪದೇಶಕಾಂಡ 28:12 - ಪರಿಶುದ್ದ ಬೈಬಲ್‌

12 ಯೆಹೋವನು ತನ್ನ ಆಶೀರ್ವಾದಗಳೆಂಬ ಭಂಡಾರವನ್ನೇ ನಿಮಗೆ ತೆರೆಯುವನು. ಕಾಲಕ್ಕೆ ತಕ್ಕಹಾಗೆ ಮಳೆ ಸುರಿಯುವಂತೆ ಮಾಡುವನು; ನಿಮ್ಮ ಕಾರ್ಯವನ್ನೆಲ್ಲಾ ಸಫಲ ಮಾಡುವನು. ಇತರ ದೇಶಗಳಿಗೆ ಸಾಲ ಕೊಡಲು ನಿಮ್ಮಲ್ಲಿ ಹಣವಿರುವುದು; ಬೇರೆಯವರಿಂದ ಸಾಲ ತೆಗೆದುಕೊಳ್ಳುವ ಅವಶ್ಯಕತೆ ನಿಮಗೆ ಬಾರದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

12 ಯೆಹೋವನು ಆಕಾಶದಲ್ಲಿರುವ ತನ್ನ ಜಲನಿಧಿಯನ್ನು ತೆರೆದು ನಿಮ್ಮ ದೇಶದ ಮೇಲೆ ಬೆಳೆಗೆ ಬೇಕಾದ ಹಾಗೆ ಮಳೆಯನ್ನು ಸುರಿಸಿ, ನಿಮ್ಮ ಎಲ್ಲಾ ವ್ಯವಸಾಯವು ಫಲಭರಿತವಾಗುವಂತೆ ಸಾಫಲ್ಯತೆ ಉಂಟುಮಾಡುವನು. ನೀವು ಅನೇಕ ಜನಗಳಿಗೆ ಸಾಲಕೊಡುವಿರೇ ಹೊರತು ಸಾಲತೆಗೆದುಕೊಳ್ಳುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

12 ಸರ್ವೇಶ್ವರ ಆಕಾಶದಲ್ಲಿರುವ ತಮ್ಮ ಜಲನಿಧಿಯನ್ನು ತೆರೆದು ನಿಮ್ಮ ನಾಡಿನ ಮೇಲೆ, ಬೆಳೆಗೆ ಬೇಕಾದ ಹಾಗೆ ಮಳೆಯನ್ನು ಸುರಿಸಿ, ನಿಮ್ಮ ಎಲ್ಲ ವ್ಯವಸಾಯವನ್ನೂ ಫಲಭರಿತವಾಗಿ ಮಾಡುವರು. “ನೀವು ಅನೇಕ ಜನಗಳಿಗೆ ಸಾಲಕೊಡುವಿರೇ ಹೊರತು ಸಾಲತೆಗೆದುಕೊಳ್ಳುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

12 ಯೆಹೋವನು ಆಕಾಶದಲ್ಲಿರುವ ತನ್ನ ಜಲನಿಧಿಯನ್ನು ತೆರೆದು ನಿಮ್ಮ ದೇಶದ ಮೇಲೆ ಬೆಳೆಗೆ ಬೇಕಾದ ಹಾಗೆ ಮಳೆಯನ್ನು ಸುರಿಸಿ ನಿಮ್ಮ ಎಲ್ಲಾ ವ್ಯವಸಾಯವನ್ನೂ ಸಫಲಮಾಡುವನು. ನೀವು ಅನೇಕ ಜನಗಳಿಗೆ ಸಾಲಕೊಡುವಿರೇ ಹೊರತು ಸಾಲತೆಗೆದುಕೊಳ್ಳುವದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

12 ಯೆಹೋವ ದೇವರು ಆಕಾಶವೆಂಬ ತಮ್ಮ ಒಳ್ಳೆಯ ಉಗ್ರಾಣವನ್ನು ನಿಮಗೆ ತೆರೆದು, ನಿಮ್ಮ ಭೂಮಿಗೆ ತಕ್ಕ ಕಾಲದಲ್ಲಿ ಮಳೆಯನ್ನು ಕೊಟ್ಟು, ನಿಮ್ಮ ಕೈಕೆಲಸವನ್ನೆಲ್ಲಾ ಆಶೀರ್ವದಿಸುವರು. ನೀವು ಅನೇಕ ಜನಾಂಗಗಳಿಗೆ ಸಾಲಕೊಡುವಿರೇ ಹೊರತು ಸಾಲ ತೆಗೆದುಕೊಳ್ಳುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಧರ್ಮೋಪದೇಶಕಾಂಡ 28:12
15 ತಿಳಿವುಗಳ ಹೋಲಿಕೆ  

ಆತನು ಮಾಡಿದ ವಾಗ್ದಾನದ ಪ್ರಕಾರ ಆಶೀರ್ವದಿಸುವನು. ಆಗ ನಿಮ್ಮಲ್ಲಿ ಬೇರೆ ಜನಾಂಗಗಳಿಗೆ ಸಾಲ ಕೊಡಲು ಯಥೇಚ್ಛವಾಗಿ ಹಣವಿರುವುದು. ನಿಮಗೆ ಬೇರೆಯವರಿಂದ ಹಣ ಸಾಲ ತೆಗೆದುಕೊಳ್ಳುವ ಅವಶ್ಯಕತೆ ಇರುವುದಿಲ್ಲ. ನೀವು ಎಷ್ಟೋ ದೇಶಗಳನ್ನು ಆಳುವಿರಿ. ಆದರೆ ಆ ದೇಶಗಳು ನಿಮ್ಮನ್ನು ಆಳವು.


“ಆ ಬಡ ಮನುಷ್ಯನಿಗೆ ನಿಮ್ಮಿಂದ ಎಷ್ಟು ಸಹಾಯ ಮಾಡಲು ಸಾಧ್ಯವಿದೆಯೋ ಅಷ್ಟು ಸಹಾಯಮಾಡಿ; ಕೊಡುವುದಕ್ಕೆ ಬೇಸರಪಡಬೇಡಿ. ಯಾಕೆಂದರೆ ನಿಮ್ಮ ದೇವರಾದ ಯೆಹೋವನು ನಿಮ್ಮ ಒಳ್ಳೆಯ ಕಾರ್ಯಗಳಿಗಾಗಿ ನಿಮ್ಮನ್ನು ಆಶೀರ್ವದಿಸುವನು; ನಿಮ್ಮ ಕೆಲಸವನ್ನೆಲ್ಲಾ ಸಫಲಪಡಿಸುವನು.


ಕಾಲಕಾಲಕ್ಕೆ ಸರಿಯಾಗಿ ನಿಮ್ಮ ದೇಶಕ್ಕೆ ನಾನು ಮಳೆಯನ್ನು ಕಳುಹಿಸುತ್ತೇನೆ. ಹಿಂಗಾರು, ಮುಂಗಾರು ಮಳೆ ತಕ್ಕ ಸಮಯದಲ್ಲಿ ಬೀಳುವುದು. ಆಗ ನೀವು ನಿಮ್ಮ ಧಾನ್ಯಗಳನ್ನು, ಹೊಸ ದ್ರಾಕ್ಷಾರಸ ಮತ್ತು ಎಣ್ಣೆಗಳನ್ನು ಶೇಖರಿಸುವಿರಿ.


ನೀವು ಅವುಗಳನ್ನು ಅನುಸರಿಸಿದರೆ, ನಾನು ಸರಿಯಾದ ಸಮಯದಲ್ಲಿ ಮಳೆಯನ್ನು ಅನುಗ್ರಹಿಸುವೆನು. ಭೂಮಿಯು ಒಳ್ಳೆಯ ಬೆಳೆಯನ್ನು ಕೊಡುವುದು ಮತ್ತು ತೋಟದ ಮರಗಳು ತಮ್ಮ ಫಲಗಳನ್ನು ಕೊಡುವವು.


ಬಡವನು ಐಶ್ವರ್ಯವಂತನಿಗೆ ಗುಲಾಮನಾಗಿದ್ದಾನೆ. ಸಾಲ ತೆಗೆದುಕೊಳ್ಳುವವನು ಸಾಲಕೊಡುವವನಿಗೆ ಸೇವಕನಾಗಿದ್ದಾನೆ.


ಇದು ಲೇವಿಯರಿಗಾಗಿ. ಯಾಕೆಂದರೆ ಅವರಿಗೆ ಸ್ವಂತ ಭೂಮಿ ಇಲ್ಲವಲ್ಲಾ. ಅಲ್ಲದೆ ಈ ಧಾನ್ಯವನ್ನು ನಿಮ್ಮ ಊರಲ್ಲಿರುವ ಬಡಜನರಿಗೋಸ್ಕರವಾಗಿಯೂ ಪರದೇಶಿಗಳಿಗಾಗಿಯೂ ವಿಧವೆಯರಿಗಾಗಿಯೂ ಅನಾಥ ಮಕ್ಕಳಿಗಾಗಿಯೂ ಉಪಯೋಗಿಸಬೇಕು. ಅವರು ಬಂದು ಊಟಮಾಡಿ ತೃಪ್ತರಾಗಲಿ. ನೀವು ಹೀಗೆ ಮಾಡಿದರೆ ನಿಮ್ಮ ದೇವರಾದ ಯೆಹೋವನು ನಿಮ್ಮ ಕಾರ್ಯಗಳನ್ನೆಲ್ಲಾ ಸಫಲಪಡಿಸಿ ಆಶೀರ್ವದಿಸುವನು.


ಆತನು ಭೂಮಿಯ ಮೇಲೆಲ್ಲಾ ಮೋಡಗಳನ್ನು ಏಳಮಾಡುವನು; ಮಿಂಚನ್ನೂ ಮಳೆಯನ್ನೂ ಬರಮಾಡುವನು; ಗಾಳಿಯನ್ನು ಬೀಸಮಾಡುವನು.


ನಿಮಗೆ ಸಾಲ ಕೊಡಲು ವಿದೇಶಿಯರಿಗೆ ಹಣವಿರುವುದು. ಆದರೆ ಅವರಿಗೆ ಸಾಲ ಕೊಡಲು ನಿಮ್ಮಲ್ಲಿ ಹಣವಿರುವುದಿಲ್ಲ. ತಲೆಯು ದೇಹವನ್ನು ಹೇಗೆ ಹಿಡಿತದಲ್ಲಿಟ್ಟುಕೊಂಡಿರುತ್ತದೋ ಹಾಗೆಯೇ ಅವರು ನಿಮ್ಮನ್ನು ತಮ್ಮ ಹಿಡಿತದಲ್ಲಿಟ್ಟುಕೊಳ್ಳುವರು. ನೀವು ಅವರಿಗೆ ಬಾಲದಂತಿರುವಿರಿ.


“ಯೋಬನೇ, ನಾನು ಹಿಮವನ್ನೂ ಆಲಿಕಲ್ಲನ್ನೂ ಇಟ್ಟಿರುವ ಉಗ್ರಾಣಗಳೊಳಗೆ ನೀನು ಎಂದಾದರೂ ಹೋಗಿರುವಿಯಾ?


ಪರದೇಶಸ್ಥರಿಗೆ ನೀವು ಬಡ್ಡಿಗೆ ಸಾಲ ಕೊಡಬಹುದು. ಆದರೆ ಸ್ವದೇಶದವನಾದ ಇಸ್ರೇಲಿನವನಿಗೆ ಬಡ್ಡಿಗೆ ಸಾಲ ಕೊಡಬಾರದು. ನೀವು ಹೀಗೆ ಮಾಡಿದ್ದಲ್ಲಿ, ನೀವು ಹೋಗಿ ನೆಲೆಸುವ ದೇಶದಲ್ಲಿ ನೀವು ಮಾಡುವ ಪ್ರತಿಯೊಂದರಲ್ಲೂ ನಿಮ್ಮ ದೇವರಾದ ಯೆಹೋವನು ನಿಮ್ಮನ್ನು ಆಶೀರ್ವದಿಸುವನು.


ಯೆಹೋವನು ನಿಮಗೆ ಮಳೆಯನ್ನು ಬೀಳಮಾಡುವುದಿಲ್ಲ; ಕೇವಲ ಧೂಳು ಮತ್ತು ಮರಳು ಆಕಾಶದಿಂದ ಬೀಳುವುದು. ನೀವು ನಾಶವಾಗುವವರೆಗೆ ಅದು ಮೇಲಿನಿಂದ ಬೀಳುತ್ತಿರುವುದು.


ಬರಗಾಲದ ಮೂರನೆ ವರ್ಷದಲ್ಲಿ ಯೆಹೋವನು ಎಲೀಯನಿಗೆ, “ಹೋಗಿ, ರಾಜನಾದ ಅಹಾಬನನ್ನು ಭೇಟಿಮಾಡು. ನಾನು ಬೇಗ ಮಳೆಯನ್ನು ಸುರಿಸುತ್ತೇನೆ” ಎಂದು ಹೇಳಿದನು.


ನಾನು ನನ್ನ ಕುರಿಗಳನ್ನೂ ನನ್ನ ಬೆಟ್ಟದ ಸುತ್ತಲೂ ಇರುವ ಸ್ಥಳಗಳನ್ನೂ ಆಶೀರ್ವದಿಸುವೆನು. ಸರಿಯಾದ ಸಮಯಕ್ಕೆ ಮಳೆ ಬೀಳುವಂತೆ ಮಾಡುವೆನು. ಮತ್ತು ಅದನ್ನು ಆಶೀರ್ವಾದದ ಸುರಿಮಳೆಯಂತೆ ಸುರಿಸುವೆನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು