ಧರ್ಮೋಪದೇಶಕಾಂಡ 28:13 - ಪರಿಶುದ್ದ ಬೈಬಲ್13 ಯೆಹೋವನು ನಿಮ್ಮನ್ನು ತಲೆಯನ್ನಾಗಿ ಮಾಡಲು ಬಯಸುತ್ತಾನೆಯೇ ಹೊರತು ಬಾಲವನ್ನಾಗಿಯಲ್ಲ. ನೀವು ಮೇಲಿನ ಅಂತಸ್ತಿನಲ್ಲಿರುವಿರಿ, ಕೆಳಗಿನದರಲ್ಲಿ ಅಲ್ಲ. ನೀವು ಯೆಹೋವನ ಆಜ್ಞೆಯನ್ನು ಪಾಲಿಸಿದಾಗ ನಿಮಗೆ ಹೀಗೆ ಆಗುವುದು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201913 ನಿಮ್ಮ ದೇವರಾದ ಯೆಹೋವನ ಆಜ್ಞೆಗಳನ್ನೇ ಲಕ್ಷ್ಯವಿಟ್ಟು ಕೇಳಿದರೆ, ನೀವು ಎಲ್ಲರಿಗಿಂತಲೂ ಮೇಲಿನವರಾಗಿರುವಿರೇ ಹೊರತು ಇತರರಿಗೆ ಅಧೀನರಾಗುವುದಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)13-14 ನಾನು ಈಗ ನಿಮಗೆ ಬೋಧಿಸುವ ಮಾತುಗಳನ್ನು ನೀವು ಬಿಟ್ಟು ಎಡಬಲಕ್ಕೆ ಹೋಗದೆ, ಬೇರೆ ದೇವರುಗಳನ್ನು ಅವಲಂಬಿಸದೆ, ನಿಮ್ಮ ದೇವರಾದ ಸರ್ವೇಶ್ವರನ ಆಜ್ಞೆಗಳಲ್ಲೇ ಲಕ್ಷ್ಯವಿಟ್ಟು ಅವುಗಳನ್ನೇ ಅನುಸರಿಸಿ ನಡೆದರೆ ಅವರು ಇತರರಿಗೆ ನಿಮ್ಮನ್ನು ಅಧೀನಮಾಡದೆ, ಎಲ್ಲರಿಗೂ ಶಿರಸ್ಸನ್ನಾಗಿಯೇ ಮಾಡುವರು; ನೀವು ಎಲ್ಲರಿಗಿಂತಲೂ ಮೇಲಿನವರಾಗುವಿರೇ ಹೊರತು ಕೆಳಗಿನವರಾಗಿ ಇರುವುದಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)13-14 ನಾನು ಈಗ ನಿಮಗೆ ಬೋಧಿಸುವ ಮಾತುಗಳನ್ನು ನೀವು ಬಿಟ್ಟು ಎಡಬಲಕ್ಕೆ ತೊಲಗದೆ ಬೇರೆ ದೇವರುಗಳನ್ನು ಅವಲಂಬಿಸದೆ ನಿಮ್ಮ ದೇವರಾದ ಯೆಹೋವನ ಆಜ್ಞೆಗಳಲ್ಲೇ ಲಕ್ಷ್ಯವಿಟ್ಟು ಅವುಗಳನ್ನೇ ಅನುಸರಿಸಿ ನಡೆದರೆ ಆತನು ಇತರರಿಗೆ ನಿಮ್ಮನ್ನು ಅಧೀನಮಾಡದೆ ಎಲ್ಲರಿಗೂ ಶಿರಸ್ಸನ್ನಾಗಿಯೇ ಮಾಡುವನು; ನೀವು ಎಲ್ಲರಿಗಿಂತಲೂ ಮೇಲಣವರಾಗಿರುವಿರೇ ಹೊರತು ಕೆಳಗಣವರಾಗಿರುವದಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ13 ನಾನು ಈ ಹೊತ್ತು ನಿಮಗೆ ಆಜ್ಞಾಪಿಸುವ ನಿಮ್ಮ ದೇವರಾದ ಯೆಹೋವ ದೇವರ ಆಜ್ಞೆಗಳನ್ನು ನೀವು ಕೇಳಿ ಕಾಪಾಡಿ ಕೈಗೊಂಡರೆ, ಅವರು ಇತರರಿಗೆ ನಿಮ್ಮನ್ನು ಅಧೀನಮಾಡದೆ, ಎಲ್ಲರಿಗೂ ಶಿರಸ್ಸನ್ನಾಗಿಯೇ ಮಾಡುವರು. ನೀವು ಎಲ್ಲರಿಗಿಂತಲೂ ಮೇಲಿನವರಾಗುವಿರೇ ಹೊರತು ಕೆಳಗಿನವರಾಗಿ ಇರುವುದಿಲ್ಲ. ಅಧ್ಯಾಯವನ್ನು ನೋಡಿ |