Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಧರ್ಮೋಪದೇಶಕಾಂಡ 28:20 - ಪರಿಶುದ್ದ ಬೈಬಲ್‌

20 “ನೀವು ಕೆಟ್ಟಕಾರ್ಯಗಳನ್ನು ಮಾಡಿ ಯೆಹೋವನಿಂದ ದೂರವಾಗಿ ಹೋದರೆ ನಿಮಗೆ ಕೆಟ್ಟಸಂಗತಿಗಳು ಉಂಟಾಗುವವು. ನಿಮಗೆ ಉಪದ್ರವಗಳೂ ಮನಸ್ಸಿಗೆ ಅಸಮಾಧಾನವೂ ಉಂಟಾಗುವವು. ನೀವು ಸಂಪೂರ್ಣವಾಗಿ ನಾಶವಾಗುವ ತನಕ ಈ ಸಂಗತಿಗಳು ನಿಮ್ಮನ್ನು ಬಾಧಿಸುವವು. ನೀವು ಆತನನ್ನು ತೊರೆದದ್ದರಿಂದ ನಿಮಗೆ ಹಾಗೆ ಮಾಡುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

20 ನೀವು ದುರ್ನಡತೆಯುಳ್ಳವರಾಗಿ ಯೆಹೋವನನ್ನು ಬಿಟ್ಟಿದ್ದರಿಂದ ಆತನು ನಿಮ್ಮ ಎಲ್ಲಾ ಪ್ರಯತ್ನಗಳಲ್ಲಿಯೂ ವಿಪತ್ತು, ಕಳವಳ, ಶಾಪ ಇವುಗಳನ್ನು ಉಂಟುಮಾಡುತ್ತಾ ನಿಮ್ಮನ್ನು ಬೇಗನೆ ನಾಶಮಾಡುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

20 “ನೀವು ದುರ್ನಡತೆಯುಳ್ಳವರಾಗಿ ಸರ್ವೇಶ್ವರನನ್ನು ಬಿಟ್ಟದ್ದರಿಂದ ಅವರು ನಿಮ್ಮ ಎಲ್ಲ ಪ್ರಯತ್ನಗಳಲ್ಲೂ ವಿಪತ್ತು, ಕಳವಳ, ಶಾಪ, ಇವುಗಳನ್ನುಂಟುಮಾಡುತ್ತಾ ನಿಮ್ಮನ್ನು ಬೇಗನೆ ನಾಶಮಾಡುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

20 ನೀವು ದುರ್ನಡತೆಯುಳ್ಳವರಾಗಿ ಯೆಹೋವನನ್ನು ಬಿಟ್ಟದ್ದರಿಂದ ಆತನು ನಿಮ್ಮ ಎಲ್ಲಾ ಪ್ರಯತ್ನಗಳಲ್ಲಿಯೂ ವಿಪತ್ತು, ಕಳವಳ, ಶಾಪ ಇವುಗಳನ್ನುಂಟುಮಾಡುತ್ತಾ ನಿಮ್ಮನ್ನು ಬೇಗನೆ ನಾಶಮಾಡುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

20 ನೀವು ನಿಮ್ಮ ಯೆಹೋವ ದೇವರನ್ನು ಬಿಟ್ಟ ದುಷ್ಟಕ್ರಿಯೆಯ ನಿಮಿತ್ತ, ಯೆಹೋವ ದೇವರು ನೀವು ಬೇಗ ನಾಶವಾಗುವವರೆಗೂ ನಿಮ್ಮ ಎಲ್ಲಾ ಕೆಲಸಗಳಲ್ಲಿಯೂ ನಿಮಗೆ ಶಾಪ, ಗಲಿಬಿಲಿ ಹಾಗು ಗದರಿಕೆ ಮುಂತಾದವುಗಳನ್ನು ಉಂಟುಮಾಡುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಧರ್ಮೋಪದೇಶಕಾಂಡ 28:20
20 ತಿಳಿವುಗಳ ಹೋಲಿಕೆ  

ನನ್ನ ನಾಮವನ್ನು ಘನಪಡಿಸದೆ ಹೋದರೆ ಕೆಟ್ಟ ವಿಷಯಗಳು ನಿಮಗೆ ಪ್ರಾಪ್ತಿಯಾಗುವವು. ನೀವು ಆಶೀರ್ವದಿಸುವಿರಿ. ಆದರೆ ಅದು ಶಾಪವಾಗುವದು. ಕೆಟ್ಟ ವಿಷಯಗಳು ನೆರವೇರುವಂತೆ ನಾನು ಮಾಡುವೆನು. ಯಾಕೆಂದರೆ ನೀವು ನನ್ನ ಹೆಸರನ್ನು ಘನಪಡಿಸುವದಿಲ್ಲ.” ಇದನ್ನು ಸರ್ವಶಕ್ತನಾದ ಯೆಹೋವನು ನುಡಿದಿದ್ದಾನೆ.


ಇಗೋ, ಯೆಹೋವನು ಬೆಂಕಿಯೊಂದಿಗೆ ಬರುತ್ತಿದ್ದಾನೆ. ಯೆಹೋವನ ಸೈನ್ಯಗಳು ಧೂಳಿನ ಮೋಡಗಳೊಂದಿಗೆ ಬರುತ್ತಿವೆ. ಯೆಹೋವನು ತನ್ನ ಕೋಪದಿಂದ ಆ ಜನರನ್ನು ಶಿಕ್ಷಿಸುವನು. ಯೆಹೋವನು ಕೋಪದಲ್ಲಿರುವಾಗ ಬೆಂಕಿಯ ನಾಲಿಗೆಗಳಿಂದ ಅವರನ್ನು ಶಿಕ್ಷಿಸುತ್ತಾನೆ.


ನಿನ್ನ ಜನರು ಬಲಹೀನರಾದರು. ಅವರು ನೆಲದ ಮೇಲೆ ಬಿದ್ದು ಅಲ್ಲಿಯೇ ಮಲಗಿದರು. ಆ ಜನರು ರಸ್ತೆಯ ಮೂಲೆಮೂಲೆಗಳಲ್ಲಿ ಬಿದ್ದುಕೊಂಡಿರುತ್ತಾರೆ. ಅವರು ಬಲೆಯೊಳಗೆ ಸಿಕ್ಕಿಬಿದ್ದ ಜಿಂಕೆಯಂತಿರುವರು. ಯೆಹೋವನ ಕೋಪದಿಂದ ಇನ್ನೂ ಹೆಚ್ಚಿನ ಶಿಕ್ಷೆಯನ್ನು, ತಾಳಲಾರದಷ್ಟು ಶಿಕ್ಷೆಯನ್ನು ಅನುಭವಿಸಿದರು. ದೇವರು ಇನ್ನೂ ಹೆಚ್ಚಾಗಿ ಶಿಕ್ಷೆಕೊಡುವುದಾಗಿ ಹೇಳಿದಾಗ ಅವರು ಕಂಗಾಲಾದರು.


ಆದ್ದರಿಂದ ನಾನು ನಿಮಗೆ ಎಚ್ಚರಿಕೆ ಕೊಡುತ್ತಿದ್ದೇನೆ. ಆಕಾಶವೂ ಭೂಮಿಯೂ ಇದಕ್ಕೆ ಸಾಕ್ಷಿ. ಆ ಕೆಟ್ಟ ಕೆಲಸವನ್ನು ನೀವು ಮಾಡಿದರೆ ನೀವು ಹಾಳಾಗಿ ಹೋಗುವಿರಿ. ನೀವೀಗ ಜೋರ್ಡನ್ ನದಿಯನ್ನು ದಾಟಿ ಆ ದೇಶವನ್ನು ಸ್ವಾಧೀನ ಮಾಡಿಕೊಳ್ಳಲು ಹೋಗುತ್ತೀರಿ. ಆದರೆ ನೀವು ಮೂರ್ತಿಗಳನ್ನು ಮಾಡಿಕೊಂಡರೆ ಅಲ್ಲಿ ಹೆಚ್ಚುಕಾಲ ಬಾಳುವುದಿಲ್ಲ. ನೀವು ಸಂಪೂರ್ಣವಾಗಿ ನಾಶವಾಗುವಿರಿ.


ಮಗನಲ್ಲಿ ನಂಬಿಕೆ ಇಡುವವನು ನಿತ್ಯಜೀವವನ್ನು ಹೊಂದಿದ್ದಾನೆ. ಆದರೆ ಮಗನಿಗೆ ವಿಧೇಯನಾಗದವನು ಆ ಜೀವವನ್ನು ಎಂದಿಗೂ ಹೊಂದಿಕೊಳ್ಳುವುದಿಲ್ಲ. ದೇವರ ಕೋಪವು ಅವನ ಮೇಲೆ ನೆಲೆಗೊಂಡಿರುವುದು” ಎಂದು ಉತ್ತರಕೊಟ್ಟನು.


ಶತ್ರುವಿನಲ್ಲಿ ಒಬ್ಬನು ಬೆದರಿಸಿದರೆ ನಿಮ್ಮಲ್ಲಿರುವ ಸಾವಿರ ಮಂದಿ ಓಡುವರು. ಐದು ಮಂದಿ ವೈರಿಗಳು ಬೆದರಿಕೆ ಹಾಕಿದರೆ ನೀವೆಲ್ಲರೂ ಅವರ ಮುಂದಿನಿಂದ ಓಡಿಹೋಗುವಿರಿ. ಕೊನೆಗೆ ನಿಮ್ಮ ಸೈನ್ಯದಲ್ಲಿ ಉಳಿಯುವ ವಸ್ತು ಯಾವದೆಂದರೆ ಬೆಟ್ಟದ ಮೇಲೆ ನೆಟ್ಟಿರುವ ನಿಮ್ಮ ಧ್ವಜಸ್ತಂಭವೊಂದೇ.


ಆತನು ಬಂದು ನಿಮ್ಮನ್ನು ತೆಗೆದುಕೊಂಡು ಹೋಗುವನು. ನಿಮಗೆ ದೊರಕುವ ಶಿಕ್ಷೆ ಬಹು ಭಯಂಕರವಾದದ್ದು. ಅದರ ಬಗ್ಗೆ ನೀವು ಕೇಳಿದ ಕೂಡಲೇ ಚಿಂತಿಸಲಾರಂಭಿಸುವಿರಿ. ಅದು ಮುಂಜಾನೆ ಬಂದು ರಾತ್ರಿ ಬಹು ಹೊತ್ತಿನ ತನಕ ಇರುವದು. “ಆಗ ನೀವು ಈ ಕಥೆಯನ್ನು ಅರ್ಥಮಾಡಿಕೊಳ್ಳುವಿರಿ:


ನಿಮ್ಮ ದೇವರಾದ ಯೆಹೋವನೊಂದಿಗೆ ಮಾಡಿಕೊಂಡ ಒಡಂಬಡಿಕೆಯನ್ನು ಪಾಲಿಸದೆ ಬೇರೆ ದೇವರುಗಳ ಸೇವೆಮಾಡಿದರೆ ಈ ದೇಶವನ್ನು ಕಳೆದುಕೊಳ್ಳುವಿರಿ. ನೀವು ಅನ್ಯದೇವರುಗಳನ್ನು ಪೂಜಿಸಬಾರದು. ಇಲ್ಲವಾದರೆ, ಯೆಹೋವನು ನಿಮ್ಮ ಮೇಲೆ ಬಹು ಕೋಪಗೊಂಡು ಆತನು ನಿಮಗೆ ಕೊಟ್ಟ ಈ ಒಳ್ಳೆಯ ದೇಶದಿಂದ ಬಲವಂತವಾಗಿ ಹೊರಡಿಸುವನು,” ಅಂದನು.


ನೀವು ಬೇರೆ ಜನಾಂಗಗಳಲ್ಲಿ ಬೆರೆತು ಇಲ್ಲದಂತಾಗುವಿರಿ. ನಿಮ್ಮ ವೈರಿಗಳ ದೇಶದಲ್ಲಿ ನೀವು ಮಾಯವಾಗಿ ಹೋಗುವಿರಿ.


ಹೌದು, ಯೆಹೂದ್ಯರಲ್ಲದವರಿಗೆ ರಕ್ಷಣೆ ನೀಡುವ ಸುವಾರ್ತೆಯನ್ನು ನಾವು ಉಪದೇಶಿಸದಂತೆ ನಮ್ಮನ್ನು ತಡೆಯಲು ಅವರು ಪ್ರಯತ್ನಿಸುತ್ತಿದ್ದಾರೆ. ಹೀಗೆ ಅವರು ತಮ್ಮ ಪಾಪಗಳಿಗೆ ಮತ್ತಷ್ಟು ಪಾಪಗಳನ್ನು ಕೂಡಿಸುತ್ತಿದ್ದಾರೆ. ಕೊನೆಗೆ, ದೇವರ ಕೋಪವು ಅವರ ಮೇಲೆ ಬರುತ್ತದೆ.


ದೇವರು ನೀತಿವಂತನಾದ ನ್ಯಾಯಾಧೀಶನಾಗಿದ್ದಾನೆ. ಆತನು ದುಷ್ಟರ ವಿಷಯದಲ್ಲಿ ಯಾವಾಗಲೂ ಕೋಪವುಳ್ಳವನು.


ಸೌಲನು ಸೈನಿಕರನ್ನೆಲ್ಲ ಒಟ್ಟುಗೂಡಿಸಿಕೊಂಡು ಯುದ್ಧಕ್ಕೆ ಹೋದನು. ಫಿಲಿಷ್ಟಿಯ ಸೈನಿಕರಲ್ಲಿ ನಿಜವಾಗಿಯೂ ಗಲಿಬಿಲಿಯುಂಟಾಗಿತ್ತು. ಅವರು ತಮ್ಮತಮ್ಮಲ್ಲಿಯೇ ಕತ್ತಿಗಳಿಂದ ಹೋರಾಡುತ್ತಿದ್ದರು.


“ಯೆಹೋವನು ನಿಮ್ಮನ್ನು ಆಶೀರ್ವದಿಸಿ ನಿಮ್ಮ ಕಣಜಗಳನ್ನು ಆಶೀರ್ವದಿಸುವನು. ನೀವು ಮಾಡುವ ಕಾರ್ಯಗಳನ್ನೆಲ್ಲಾ ಆಶೀರ್ವದಿಸುವನು. ನಿಮಗೆ ಕೊಡುವ ದೇಶದಲ್ಲಿ ನೀವು ವಾಸಿಸುವಾಗ ನಿಮ್ಮನ್ನು ಆಶೀರ್ವದಿಸುವನು.


ನಾನು ನನ್ನ ಜನರ ವಿರುದ್ಧ ನನ್ನ ನ್ಯಾಯನಿರ್ಣಯವನ್ನು ಘೋಷಿಸುವೆನು. ಅವರು ಕೆಟ್ಟ ಜನರು, ಅವರು ನನ್ನ ವಿರೋಧಿಗಳಾಗಿದ್ದಾರೆ. ನನ್ನ ಜನರು ನನ್ನನ್ನು ತ್ಯಜಿಸಿದ್ದಾರೆ. ಅವರು ನನ್ನನ್ನು ಹೇಗೆ ತ್ಯಜಿಸಿದರು? ಅವರು ಅನ್ಯದೇವರುಗಳಿಗೆ ಹೋಮ ಮಾಡಿದರು. ಅವರು ತಮ್ಮ ಕೈಗಳಿಂದಲೇ ಮಾಡಿದ ವಿಗ್ರಹಗಳನ್ನು ಪೂಜಿಸಿದರು.


ಯೆಹೂದದ ಜನರು ನನ್ನ ಅನುಸರಣೆಯನ್ನು ಬಿಟ್ಟಿದ್ದರಿಂದ ನಾನು ಹೀಗೆ ಮಾಡುವೆನು. ಇದನ್ನು ಅವರು ಅನ್ಯದೇವರುಗಳ ಸ್ಥಳವನ್ನಾಗಿ ಮಾಡಿದ್ದಾರೆ. ಯೆಹೂದದ ಜನರು ಈ ಸ್ಥಳದಲ್ಲಿ ಅನ್ಯದೇವರುಗಳಿಗಾಗಿ ಧೂಪವನ್ನು ಹಾಕಿದ್ದಾರೆ. ಬಹಳ ಹಿಂದೆ ಈ ಜನರು ಆ ದೇವರುಗಳನ್ನು ಪೂಜಿಸುತ್ತಿರಲಿಲ್ಲ. ಅವರ ಹಿರಿಯರೂ ಆ ದೇವರುಗಳನ್ನು ಪೂಜಿಸುತ್ತಿರಲಿಲ್ಲ. ಇವುಗಳು ಅನ್ಯದೇಶದ ಹೊಸ ದೇವರುಗಳು. ಯೆಹೂದದ ರಾಜರು ಈ ಸ್ಥಳವನ್ನು ಮುಗ್ಧಮಕ್ಕಳ ರಕ್ತದಿಂದ ತುಂಬಿದರು.


ಇಸ್ರೇಲರು ಯುದ್ಧಕ್ಕೆ ಹೋದಾಗಲೆಲ್ಲಾ ಸೋಲನ್ನನುಭವಿಸಿದರು; ಏಕೆಂದರೆ ಯೆಹೋವನು ಅವರ ಸಂಗಡವಿರಲಿಲ್ಲ. ಸುತ್ತಮುತ್ತಲಿನ ಜನರ ದೇವತೆಗಳನ್ನು ಪೂಜಿಸಿದರೆ ಸೋಲಾಗುವುದೆಂದು ಈಗಾಗಲೇ ಯೆಹೋವನು ಇಸ್ರೇಲರಿಗೆ ಮುನ್ನೆಚ್ಚರಿಕೆಯನ್ನು ಕೊಟ್ಟಿದ್ದನು. ಇಸ್ರೇಲರು ಹೆಚ್ಚಿನ ಕಷ್ಟನಷ್ಟಗಳನ್ನು ಅನುಭವಿಸಿದರು.


“ನೀವು ಹೇಳುವುದೇನೆಂದರೆ, ‘ಪ್ರವಾಹವು ವಸ್ತುಗಳನ್ನು ಕೊಚ್ಚಿಕೊಂಡು ಹೋಗುವಂತೆ ನಾಶನವು ದುಷ್ಟರನ್ನು ಕೊಚ್ಚಿಕೊಂಡು ಹೋಗುವುದು. ಅವರ ಜಮೀನು ಶಾಪಗ್ರಸ್ತವಾಗಿದೆ. ಆದ್ದರಿಂದ ಅವರು ದ್ರಾಕ್ಷಿಹಣ್ಣುಗಳನ್ನು ತಮ್ಮ ತೋಟಗಳಿಂದ ಸಂಗ್ರಹಿಸಲಾರರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು