ಧರ್ಮೋಪದೇಶಕಾಂಡ 28:21 - ಪರಿಶುದ್ದ ಬೈಬಲ್21 ನೀವು ಸ್ವಾಸ್ತ್ಯವಾಗಿ ಹೊಂದಲಿರುವ ದೇಶದಿಂದ ನೀವು ನಾಶವಾಗುವವರೆಗೆ, ನಿಮ್ಮ ದೇವರಾದ ಯೆಹೋವನು ನಿಮಗೆ ಭಯಂಕರವಾದ ರೋಗಗಳನ್ನು ಬರಮಾಡುವನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201921 ವ್ಯಾಧಿಯು ನಿಮಗೆ ಹತ್ತಿಕೊಂಡೇ ಇರುವಂತೆ ಯೆಹೋವನು ಮಾಡಿ, ನೀವು ಸ್ವಾಧೀನ ಮಾಡಿಕೊಳ್ಳುವುದಕ್ಕೆ ಹೋಗುವ ದೇಶದಲ್ಲಿ ನಿಮ್ಮಲ್ಲಿ ಒಬ್ಬರೂ ಉಳಿಯದಂತೆ ಮಾಡುವನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)21 ವ್ಯಾಧಿ ನಿಮಗೆ ಹತ್ತಿಕೊಂಡೇ ಇರುವಂತೆ ಮಾಡಿ ನೀವು ಸ್ವಾಧೀನ ಮಾಡಿಕೊಳ್ಳಲು ಹೋಗುವ ನಾಡಿನಲ್ಲಿ ನಿಮ್ಮಲ್ಲಿ ಒಬ್ಬರೂ ಉಳಿಯದಂತೆ ಸರ್ವೇಶ್ವರ ಮಾಡುವರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)21 ವ್ಯಾಧಿಯು ನಿಮಗೆ ಹತ್ತಿಕೊಂಡೇ ಇರುವಂತೆ ಯೆಹೋವನು ಮಾಡಿ ನೀವು ಸ್ವಾಧೀನಮಾಡಿಕೊಳ್ಳುವದಕ್ಕೆ ಹೋಗುವ ದೇಶದಲ್ಲಿ ನಿಮ್ಮಲ್ಲಿ ಒಬ್ಬರೂ ಉಳಿಯದಂತೆ ಮಾಡುವನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ21 ನೀವು ಸ್ವಾಧೀನಮಾಡಿಕೊಳ್ಳುವುದಕ್ಕೆ ಹೋಗುವ ದೇಶದಲ್ಲಿಂದ ಹಾಳಾಗಿ ಹೋಗುವವರೆಗೆ ಯೆಹೋವ ದೇವರು ನಿಮಗೆ ವ್ಯಾಧಿಯು ಅಂಟಿಕೊಳ್ಳುವಂತೆ ಮಾಡುವರು. ಅಧ್ಯಾಯವನ್ನು ನೋಡಿ |
‘ನಾವು ಎಲ್ಲಿಗೆ ಹೋಗಬೇಕು’ ಎಂದು ಅವರು ಕೇಳಬಹುದು. ಯೆಹೋವನು ಹೀಗೆ ಹೇಳಿದ್ದಾನೆ ಎಂದು ನೀನು ಅವರಿಗೆ ಹೇಳು. “‘ಕೆಲವು ಜನರು ಮರಣಹೊಂದಬೇಕೆಂದು ನಾನು ಗೊತ್ತುಮಾಡಿದ್ದೇನೆ. ಅವರು ಮರಣಹೊಂದುತ್ತಾರೆ. ಕೆಲವು ಜನರು ಖಡ್ಗಗಳಿಂದ ಕೊಲ್ಲಲ್ಪಡಬೇಕೆಂದು ನಾನು ಗೊತ್ತುಮಾಡಿದ್ದೇನೆ. ಅವರು ಖಡ್ಗಗಳಿಗೆ ಬಲಿಯಾಗುತ್ತಾರೆ. ಕೆಲವು ಜನರು ಹೊಟ್ಟೆಗೆ ಅನ್ನವಿಲ್ಲದೆ ಸಾಯಬೇಕು ಎಂದು ನಾನು ಗೊತ್ತುಮಾಡಿದ್ದೇನೆ. ಅವರು ಹಸಿವಿನಿಂದ ಸಾಯುತ್ತಾರೆ. ಕೆಲವು ಜನರನ್ನು ಶತ್ರುಗಳು ಸೆರೆಹಿಡಿದು ಪರದೇಶಕ್ಕೆ ತೆಗೆದುಕೊಂಡು ಹೋಗಲಿ ಎಂದು ಗೊತ್ತುಮಾಡಿದ್ದೇನೆ. ಅವರು ಪರದೇಶದಲ್ಲಿ ಸೆರೆಯಾಳುಗಳಾಗಿ ಇರುವರು.