ಧರ್ಮೋಪದೇಶಕಾಂಡ 28:24 - ಪರಿಶುದ್ದ ಬೈಬಲ್24 ಯೆಹೋವನು ನಿಮಗೆ ಮಳೆಯನ್ನು ಬೀಳಮಾಡುವುದಿಲ್ಲ; ಕೇವಲ ಧೂಳು ಮತ್ತು ಮರಳು ಆಕಾಶದಿಂದ ಬೀಳುವುದು. ನೀವು ನಾಶವಾಗುವವರೆಗೆ ಅದು ಮೇಲಿನಿಂದ ಬೀಳುತ್ತಿರುವುದು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201924 ನಿಮ್ಮ ದೇಶದಲ್ಲಿ ಯೆಹೋವನು ಆಕಾಶದಿಂದ ಮಳೆಗೆ ಬದಲಾಗಿ ಧೂಳನ್ನೂ ಮತ್ತು ಉಸುಬನ್ನೂ ನಿಮ್ಮ ಮೇಲೆ ಸುರಿಸುವನು; ಅದುದರಿಂದ ನೀವು ನಾಶವಾಗಿ ಹೋಗುವಿರಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)24 ನಿಮ್ಮ ನಾಡಿನ ಮೇಲೆ ಆಕಾಶದಿಂದ ಮಳೆಗೆ ಬದಲಾಗಿ ಧೂಳಿಯನ್ನೂ ಉಸುಬನ್ನೂ ಸರ್ವೇಶ್ವರ ಸುರಿಸುವರು; ಇದರಿಂದ ನೀವು ನಾಶವಾಗಿ ಹೋಗುವಿರಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)24 ನಿಮ್ಮ ದೇಶದಲ್ಲಿ ಯೆಹೋವನು ಆಕಾಶದಿಂದ ಮಳೆಗೆ ಬದಲಾಗಿ ಧೂಳಿಯನ್ನೂ ಉಸುಬನ್ನೂ ನಿಮ್ಮ ಮೇಲೆ ಸುರಿಸುವನು; ಅದರಿಂದ ನೀವು ನಾಶವಾಗಿ ಹೋಗುವಿರಿ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ24 ಯೆಹೋವ ದೇವರು ನಿಮ್ಮ ದೇಶದಲ್ಲಿ ಮಳೆಗೆ ಬದಲಾಗಿ ಹುಡಿಯೂ ಧೂಳೂ ಆಗುವಂತೆ ಮಾಡುವರು. ನೀವು ನಾಶವಾಗುವವರೆಗೆ ಅದು ಆಕಾಶದಿಂದ ನಿಮ್ಮ ಮೇಲೆ ಸುರಿಯುವುದು. ಅಧ್ಯಾಯವನ್ನು ನೋಡಿ |
ಆದ್ದರಿಂದ ಅವರಿಗೆ ಕೇಡುಗಳಾಗುವವು. ಅವರ ಸಂತತಿಯವರು ತರಗೆಲೆಯೂ ಹುಲ್ಲೂ ಬೆಂಕಿಯಲ್ಲಿ ಸುಟ್ಟುಹೋಗುವಂತೆ ನಾಶವಾಗುವರು. ಅವರ ಸಂತತಿಯವರು ಸತ್ತು ಧೂಳಾಗುವ ಬೇರಿನಂತೆ ನಾಶವಾಗುವರು. ಬೆಂಕಿಯಲ್ಲಿ ಸುಟ್ಟುಹೋದ ಹೂವಿನ ಬೂದಿಯು ಗಾಳಿಯಲ್ಲಿ ಹಾರಿಹೋಗುವಂತೆ ಅವರ ಸಂತತಿಯವರು ನಾಶವಾಗುವರು. ಅವರು ಸರ್ವಶಕ್ತನಾದ ಯೆಹೋವನ ಬೋಧನೆಗಳನ್ನು ಅನುಸರಿಸಲು ನಿರಾಕರಿಸಿದ್ದಾರೆ. ಇಸ್ರೇಲಿನ ಪರಿಶುದ್ಧನ ವಾಕ್ಯವನ್ನು ಅವರು ದ್ವೇಷಿಸುತ್ತಾರೆ.