ಧರ್ಮೋಪದೇಶಕಾಂಡ 28:29 - ಪರಿಶುದ್ದ ಬೈಬಲ್29 ಹಗಲಿನಲ್ಲೂ ಕುರುಡರಂತೆ ನೀವು ತಡವರಿಸುವಿರಿ. ನೀವು ಮಾಡುವ ಕಾರ್ಯವೆಲ್ಲವೂ ನಿಷ್ಫಲವಾಗುವವು. ಜನರು ನಿಮ್ಮನ್ನು ಬಾಧಿಸಿ ನಿಮ್ಮಲ್ಲಿರುವದನ್ನೆಲ್ಲಾ ದೋಚಿಕೊಂಡು ಹೋಗುವರು. ನಿಮ್ಮನ್ನು ರಕ್ಷಿಸಲು ಯಾರೂ ಬರುವುದಿಲ್ಲ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201929 ನೀವು ಕುರುಡರಂತೆ ಮಧ್ಯಾಹ್ನದಲ್ಲಿಯೂ ಕತ್ತಲಾಯಿತೆಂದು ತಡವರಿಸುತ್ತಾ ಇರುವಿರಿ; ನೀವು ಮಾಡುವ ಯಾವ ಕೆಲಸವೂ ಕೈಗೂಡುವುದಿಲ್ಲ. ಅನ್ಯರು ಯಾವಾಗಲೂ ನಿಮ್ಮನ್ನು ಪೀಡಿಸುತ್ತಾ ನಿಮ್ಮ ಸೊತ್ತನ್ನು ಸೂರೆಮಾಡುತ್ತಾ ಇರುವರು; ತಪ್ಪಿಸುವವರು ಯಾರೂ ಇರುವುದಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)29 ಕುರುಡರಂತೆ ನಡುಮಧ್ಯಾಹ್ನದಲ್ಲೂ ಕತ್ತಲಾಯಿತೆಂದು ನೀವು ತಡವರಿಸುವಿರಿ; ನೀವು ಮಾಡುವ ಕೆಲಸ ಯಾವುದೂ ಕೈಗೂಡುವುದಿಲ್ಲ. ಅನ್ಯರು ನಿಮ್ಮನ್ನು ನಿರಂತರವಾಗಿ ಪೀಡಿಸುತ್ತಾ ನಿಮ್ಮ ಸೊತ್ತನ್ನು ಸೂರೆಮಾಡುತ್ತಾ ಇರುವರು. ನಿಮಗೆ ಸಹಾಯ ಮಾಡಲು ಯಾರೂ ಇರುವುದಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)29 ನೀವು ಕುರುಡರಂತೆ ಮಧ್ಯಾಹ್ನದಲ್ಲಿಯೂ ಕತ್ತಲಾಯಿತೆಂದು ತಡವರಿಸುತ್ತಾ ಇರುವಿರಿ; ನೀವು ಮಾಡುವ ಯಾವ ಕೆಲಸವೂ ಕೈಗೂಡುವದಿಲ್ಲ. ಅನ್ಯರು ಯಾವಾಗಲೂ ನಿಮ್ಮನ್ನು ಪೀಡಿಸುತ್ತಾ ನಿಮ್ಮ ಸೊತ್ತನ್ನು ಸೂರೆಮಾಡುತ್ತಾ ಇರುವರು; ತಪ್ಪಿಸುವವರು ಯಾರೂ ಇರುವದಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ29 ಕಣ್ಣು ಕಾಣದವನು ಕತ್ತಲಲ್ಲಿ ತಡವಾಡುವಂತೆ ಮಧ್ಯಾಹ್ನದಲ್ಲಿ ತಡವಾಡುತ್ತಾ ಇರುವಿರಿ, ನಿಮ್ಮ ಮಾರ್ಗಗಳಲ್ಲಿ ಸಫಲವಾಗುವುದಿಲ್ಲ. ನೀವು ಯಾವಾಗಲೂ ರಕ್ಷಿಸುವವನಿಲ್ಲದೆ ಬಲಾತ್ಕಾರವನ್ನೂ, ಸುಲಿಗೆಯನ್ನೂ ಅನುಭವಿಸುವವರಾಗುವಿರಿ. ಅಧ್ಯಾಯವನ್ನು ನೋಡಿ |
ನೀನು ಅವರನ್ನು ನಿನ್ನೊಂದಿಗೆ ಕರೆದುಕೊಂಡು ಹೋಗಿ ಅವರ ಶುದ್ಧಾಚಾರದ ಸಂಪ್ರದಾಯದಲ್ಲಿ ಭಾಗವಹಿಸು. ಅವರ ಖರ್ಚುವೆಚ್ಚನ್ನೆಲ್ಲ ಕೊಡು. ಬಳಿಕ ಅವರು ತಮ್ಮ ತಲೆಬೋಳಿಸಿಕೊಳ್ಳಲಿ. ನೀನು ಹೀಗೆ ಮಾಡಿದರೆ, ನಿನ್ನ ಬಗ್ಗೆ ಅವರು ಕೇಳಿದ ಸಂಗತಿಗಳು ಸತ್ಯವಲ್ಲವೆಂದು ಅವರೆಲ್ಲರಿಗೂ ಮನದಟ್ಟಾಗುವುದು. ಸ್ವತಃ ನೀನೇ ಮೋಶೆಯ ಧರ್ಮಶಾಸ್ತ್ರಕ್ಕೆ ವಿಧೇಯನಾಗುತ್ತಿರುವುದನ್ನು ಅವರೆಲ್ಲರೂ ಕಣ್ಣಾರೆ ಕಾಣುವರು.