ಧರ್ಮೋಪದೇಶಕಾಂಡ 28:31 - ಪರಿಶುದ್ದ ಬೈಬಲ್31 ನಿಮ್ಮ ದನಗಳನ್ನು ನಿಮ್ಮೆದುರಿನಲ್ಲಿ ಜನರು ಕೊಯ್ಯುವರು. ಆದರೆ ನೀವು ಅದರ ಮಾಂಸವನ್ನು ತಿನ್ನುವುದಿಲ್ಲ. ನಿಮ್ಮ ಕತ್ತೆಗಳನ್ನು ಜನರು ನಿಮ್ಮಿಂದ ತೆಗೆದುಕೊಂಡು ಹೋಗುವರು. ಆದರೆ ಅವುಗಳನ್ನು ಹಿಂದಕ್ಕೆ ಕೊಡರು. ನಿಮ್ಮ ಕುರಿಗಳನ್ನು ವೈರಿಗಳು ಕೊಂಡೊಯ್ಯುವರು. ನಿಮ್ಮನ್ನು ರಕ್ಷಿಸಲು ಯಾರೂ ಬರಲಾರರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201931 ನಿಮ್ಮ ದನಗಳನ್ನು ನಿಮ್ಮ ಕಣ್ಣು ಮುಂದೆ ಕೊಯ್ಯುವರು; ಅವುಗಳ ಮಾಂಸವು ನಿಮಗೆ ಸಿಕ್ಕುವುದಿಲ್ಲ. ನಿಮ್ಮ ಕತ್ತೆಯನ್ನು ನಿಮ್ಮ ಮುಂದೆಯೇ ಬಲಾತ್ಕಾರದಿಂದ ಹಿಡಿದುಕೊಂಡುಹೋಗುವರು. ಕೇಳಿದರೆ ನಿಮಗೆ ಹಿಂದಕ್ಕೆ ಕೊಡುವುದಿಲ್ಲ. ನಿಮ್ಮ ಆಡು ಮತ್ತು ಕುರಿಗಳು ಶತ್ರುಗಳ ಪಾಲಾಗುವವು. ನಿಮಗೆ ರಕ್ಷಕರು ಯಾರೂ ಇರುವುದಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)31 ನಿಮ್ಮ ಪಶುಗಳನ್ನು ನಿಮ್ಮ ಕಣ್ಣಮುಂದೆಯೇ ಕೊಯ್ಯುವರು; ಆದರೆ ಅವುಗಳ ಮಾಂಸ ನಿಮಗೆ ಸಿಕ್ಕದು. ನಿಮ್ಮ ಕತ್ತೆಯನ್ನು ನಿಮ್ಮೆದುರಿಗೇ ಬಲಾತ್ಕಾರದಿಂದ ಹಿಡಿದುಕೊಂಡು ಹೋಗುವರು. ಆದರೆ ಅದನ್ನು ನಿಮಗೆ ಹಿಂದಕ್ಕೆ ಕೊಡುವುದಿಲ್ಲ. ನಿಮ್ಮ ಆಡುಕುರಿಗಳು ಶತ್ರುಗಳ ಪಾಲಾಗುವುವು. ನಿಮಗೆ ರಕ್ಷಕರು ಯಾರೂ ಇರುವುದಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)31 ನಿಮ್ಮ ದನಗಳನ್ನು ನಿಮ್ಮ ಕಣ್ಣು ಮುಂದೆ ಕೊಯ್ಯುವರು; ಅವುಗಳ ಮಾಂಸವು ನಿಮಗೆ ಸಿಕ್ಕುವದಿಲ್ಲ. ನಿಮ್ಮ ಕತ್ತೆಯನ್ನು ನಿಮ್ಮೆದುರಾಗಿ ಬಲಾತ್ಕಾರದಿಂದ ಹಿಡಿದುಕೊಂಡುಹೋಗಿ ನಿಮಗೆ ಹಿಂದಕ್ಕೆ ಕೊಡುವದಿಲ್ಲ. ನಿಮ್ಮ ಆಡುಕುರಿಗಳು ಶತ್ರುಗಳ ಪಾಲಾಗುವವು. ನಿಮಗೆ ರಕ್ಷಕರು ಯಾರೂ ಇರುವದಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ31 ನಿಮ್ಮ ದನಗಳನ್ನು ನಿಮ್ಮ ಕಣ್ಣು ಮುಂದೆಯೇ ಕೊಯ್ಯುವರು, ಆದರೆ ನೀವು ಅದರ ಮಾಂಸ ತಿನ್ನುವುದಿಲ್ಲ. ನಿಮ್ಮ ಕತ್ತೆಯನ್ನು ನಿಮ್ಮ ಕಣ್ಣ ಮುಂದೆಯೇ ಬಲಾತ್ಕಾರದಿಂದ ತೆಗೆದುಕೊಂಡು ಹೋಗುವರು. ಅದು ನಿಮಗೆ ಮತ್ತೆ ಸಿಕ್ಕುವುದಿಲ್ಲ. ನಿಮ್ಮ ಕುರಿಗಳು ನಿಮ್ಮ ಶತ್ರುವಿಗೆ ಕೊಡಲಾಗುವುದು. ಅವುಗಳನ್ನು ಬಿಡಿಸುವುದಕ್ಕೆ ಯಾರೂ ಇರುವುದಿಲ್ಲ. ಅಧ್ಯಾಯವನ್ನು ನೋಡಿ |
ಯೆಹೋವನು ವಾಗ್ದಾನವನ್ನು ಮಾಡಿರುತ್ತಾನೆ. ಆತನ ಸ್ವಂತ ಹೆಸರೇ ಅದಕ್ಕೆ ಸಾಕ್ಷಿಯಾಗಿದೆ. ಆತನು ತನ್ನ ಸಾಮರ್ಥ್ಯದಿಂದ ವಾಗ್ದಾನವನ್ನು ನೆರವೇರಿಸುವನು. ಯೆಹೋವನು ಹೇಳಿದ್ದೇನೆಂದರೆ, “ನಿನ್ನ ಆಹಾರವನ್ನು ನಾನು ನಿನ್ನ ವೈರಿಗಳಿಗೆ ಮತ್ತೆ ಕೊಡುವದಿಲ್ಲವೆಂದು ವಾಗ್ದಾನ ಮಾಡುತ್ತೇನೆ. ನೀನು ತಯಾರಿಸುವ ದ್ರಾಕ್ಷಾರಸವನ್ನು ಇನ್ನು ಮುಂದೆ ನಿನ್ನ ವೈರಿಗಳು ಸೇವಿಸುವದಿಲ್ಲವೆಂದು ನಾನು ವಾಗ್ದಾನ ಮಾಡುತ್ತೇನೆ.
ಆ ಸೈನಿಕರು ನೀವು ಬೆಳೆದ ಬೆಳೆಯನ್ನು ತಿಂದುಬಿಡುವರು. ಅವರು ನಿಮ್ಮೆಲ್ಲ ಆಹಾರವನ್ನು ತಿಂದುಬಿಡುವರು. ಅವರು ನಿಮ್ಮ ಗಂಡುಮಕ್ಕಳನ್ನೂ ಹೆಣ್ಣುಮಕ್ಕಳನ್ನೂ ತಿಂದುಬಿಡುವರು (ನಾಶಮಾಡುವರು). ಅವರು ನಿಮ್ಮ ದನಕರುಗಳ ಹಿಂಡುಗಳನ್ನು, ಕುರಿಗಳ ಮಂದೆಗಳನ್ನು ತಿಂದುಬಿಡುವರು. ಅವರು ನಿಮ್ಮ ದ್ರಾಕ್ಷಿಗಳನ್ನೂ ನಿಮ್ಮ ಅಂಜೂರಗಳನ್ನೂ ತಿಂದುಬಿಡುವರು. ಅವರು ತಮ್ಮ ಖಡ್ಗಗಳಿಂದ ನಿಮ್ಮ ಭದ್ರವಾದ ನಗರಗಳನ್ನು ನಾಶಮಾಡುವರು. ನೀವು ನಂಬಿಕೊಂಡಿದ್ದ ನಿಮ್ಮ ಭದ್ರವಾದ ನಗರಗಳನ್ನು ಅವರು ಹಾಳುಮಾಡುತ್ತಾರೆ.”