ಧರ್ಮೋಪದೇಶಕಾಂಡ 28:32 - ಪರಿಶುದ್ದ ಬೈಬಲ್32 “ನಿಮ್ಮ ಗಂಡುಹೆಣ್ಣು ಮಕ್ಕಳನ್ನು ಬೇರೆಯವರು ಎತ್ತಿಕೊಂಡು ಹೋಗುವರು. ನೀವು ಹಗಲುರಾತ್ರಿ ನಿಮ್ಮ ಮಕ್ಕಳಿಗಾಗಿ ಹುಡುಕಾಡುವಿರಿ. ಹುಡುಕಾಡುತ್ತಾ ನಿಮ್ಮ ಕಣ್ಣುಗಳು ಕಂಗೆಡುವವು; ಆದರೆ ಅವರು ನಿಮಗೆ ದೊರಕುವುದಿಲ್ಲ. ಯೆಹೋವನು ನಿಮಗೆ ಸಹಾಯ ಮಾಡುವುದಿಲ್ಲ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201932 ನಿಮ್ಮ ಗಂಡು ಮತ್ತು ಹೆಣ್ಣು ಮಕ್ಕಳನ್ನು ನಿಮ್ಮ ಮುಂದೆಯೇ ಹಿಡಿದು ಅನ್ಯರಿಗೆ ವಶಪಡಿಸುವರು; ನೀವು ಹಗಲೆಲ್ಲಾ ಅವರನ್ನು ಕಾಣಬೇಕೆಂದು ಹಂಬಲಿಸುತ್ತಾ ಕಂಗೆಡುವಿರಿ; ಆದರೆ ನಿಮ್ಮ ಪ್ರಯತ್ನವೇನೂ ಸಾಗುವುದಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)32 ನಿಮ್ಮ ಗಂಡು ಹೆಣ್ಣು ಮಕ್ಕಳನ್ನು ನಿಮ್ಮ ಮುಂದೆಯೇ ಹಿಡಿದು ಅನ್ಯರಿಗೆ ವಶಪಡಿಸುವರು; ನೀವು ಹಗಲೆಲ್ಲಾ ಅವರನ್ನು ಕಾಣಬೇಕೆಂದು ಹಂಬಲಿಸುತ್ತಾ ಕಂಗೆಡುವಿರಿ; ಆದರೆ ನಿಮ್ಮ ಯತ್ನವೇನೂ ಸಾಗುವುದಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)32 ನಿಮ್ಮ ಗಂಡು ಹೆಣ್ಣು ಮಕ್ಕಳನ್ನು ನಿಮ್ಮ ಮುಂದೆಯೇ ಹಿಡಿದು ಅನ್ಯರಿಗೆ ವಶಪಡಿಸುವರು; ನೀವು ಹಗಲೆಲ್ಲಾ ಅವರನ್ನು ಕಾಣಬೇಕೆಂದು ಹಂಬಲಿಸುತ್ತಾ ಕಂಗೆಡುವಿರಿ; ಆದರೆ ನಿಮ್ಮ ಯತ್ನವೇನೂ ಸಾಗುವದಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ32 ನಿಮ್ಮ ಪುತ್ರಪುತ್ರಿಯರು ಬೇರೆ ಜನರಿಗೆ ವಶಪಡಿಸಿರಲು, ನೀವು ಅವರನ್ನು ಕಾಣಬೇಕೆಂದು ಹಂಬಲಿಸುತ್ತಾ ಇರುವಿರಿ. ಆದರೆ ಅವರನ್ನು ಕಾಪಾಡಲು ನಿಮ್ಮ ಕೈಯಿಂದ ಸಾಧ್ಯವಾಗದೆ ಇರುವುದು. ಅಧ್ಯಾಯವನ್ನು ನೋಡಿ |
ಆತನು ಹೇಳಿದ್ದೇನೆಂದರೆ: “ನರಪುತ್ರನೇ, ನಾನು ಬಲಿಷ್ಠವಾದ ಆಲಯವನ್ನು ಜನರಿಂದ ತೆಗೆದುಬಿಡುವೆನು. ಆ ಸುಂದರ ಸ್ಥಳವು ಅವರಿಗೆ ಆನಂದವನ್ನು ಕೊಡುತ್ತಿದೆ. ಆ ಸ್ಥಳವನ್ನು ನೋಡಲು ಅವರು ಆತುರಪಡುವರು. ಆದರೆ ನಾನು ಆಲಯವನ್ನೂ ಮತ್ತು ಅವರ ಮಕ್ಕಳನ್ನೂ ಆ ಜನರಿಂದ ತೆಗೆದುಬಿಡುವೆನು. ಆ ದಿನದಂದು, ಪಾರಾದವನು ನಿನ್ನ ಬಳಿಗೆ ಬಂದು ನಾಶನದ ಕುರಿತಾದ ಕೆಟ್ಟ ಸುದ್ದಿಯನ್ನು ನಿನಗೆ ತಿಳಿಸುವನು.