ಧರ್ಮೋಪದೇಶಕಾಂಡ 28:35 - ಪರಿಶುದ್ದ ಬೈಬಲ್35 ಯೆಹೋವನು ನಿಮ್ಮನ್ನು ಉರಿಯುವ ಹುಣ್ಣುಗಳಿಂದ ಬಾಧಿಸುವನು; ಅವುಗಳು ಗುಣವಾಗುವುದಿಲ್ಲ. ಈ ಹುಣ್ಣುಗಳು ನಿಮ್ಮ ದೇಹದ ಎಲ್ಲಾ ಭಾಗಗಳಲ್ಲಿ ಅಂದರೆ ನಿಮ್ಮ ಪಾದದಿಂದ ಹಿಡಿದು ನಡುನೆತ್ತಿಯ ತನಕ ಇರುವವು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201935 ಯೆಹೋವನು ನಿಮ್ಮ ಮೊಣಕಾಲುಗಳಲ್ಲಿಯೂ, ತೊಡೆಗಳಲ್ಲಿಯೂ ಮತ್ತು ಅಂಗಾಲು ಮೊದಲುಗೊಂಡು ನಡುನೆತ್ತಿಯ ವರೆಗೂ ವಾಸಿಯಾಗದ ಕೆಟ್ಟ ಹುಣ್ಣುಗಳನ್ನು ಹುಟ್ಟಿಸಿ ಬಾಧಿಸುವನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)35 “ನಿಮ್ಮ ಮೊಣಕಾಲುಗಳಲ್ಲೂ ತೊಡೆಗಳಲ್ಲೂ ಮತ್ತು ಅಂಗಾಲು ಮೊದಲ್ಗೊಂಡು ನಡುನೆತ್ತಿಯವರೆಗೂ ವಾಸಿಯಾಗದ ಕೆಟ್ಟಕೆಟ್ಟ ಹುಣ್ಣುಗಳನ್ನು ಸರ್ವೇಶ್ವರ ಹುಟ್ಟಿಸಿ ಬಾಧಿಸುವರು; ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)35 ಯೆಹೋವನು ನಿಮ್ಮ ಮೊಣಕಾಲುಗಳಲ್ಲಿಯೂ ತೊಡೆಗಳಲ್ಲಿಯೂ ಮತ್ತು ಅಂಗಾಲು ಮೊದಲುಗೊಂಡು ನಡುನೆತ್ತಿಯವರೆಗೂ ವಾಸಿಯಾಗದ ಕೆಟ್ಟಕೆಟ್ಟ ಹುಣ್ಣುಗಳನ್ನು ಹುಟ್ಟಿಸಿ ಬಾಧಿಸುವನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ35 ಯೆಹೋವ ದೇವರು ನಿಮ್ಮನ್ನು ಮೊಣಕಾಲುಗಳಲ್ಲಿಯೂ, ತೊಡೆಗಳಲ್ಲಿಯೂ ವಾಸಿಯಾಗದ ಕೆಟ್ಟ ಉರಿ ಹುಣ್ಣಿನಿಂದ ಅಂಗಾಲು ಮೊದಲ್ಗೊಂಡು ನೆತ್ತಿಯವರೆಗೆ ಹೊಡೆಯುವರು. ಅಧ್ಯಾಯವನ್ನು ನೋಡಿ |
ಆ ಸಮಯದಲ್ಲಿ ಸ್ತ್ರೀಯರ ಪರಿಮಳದ್ರವ್ಯವು ಕೊಳೆತ ವಾಸನೆಯಿಂದ ಕೂಡಿರುವುದು. ಅವರು ಸೊಂಟಪಟ್ಟಿಯ ಬದಲಿಗೆ ಹಗ್ಗ ಕಟ್ಟಿಕೊಳ್ಳುವರು; ತಲೆಕೂದಲನ್ನು ಅಂದವಾಗಿ ಹೆಣೆದುಕೊಳ್ಳುವ ಬದಲು ಬೋಳಿಸಿಕೊಳ್ಳುವರು. ಈಗ ಅವರಿಗೆ ಆಧುನಿಕ ವಸ್ತ್ರಗಳಿರುವವು; ಆದರೆ ಆಗ ಅವರು ಶೋಕವಸ್ತ್ರಗಳನ್ನೇ ಧರಿಸುವರು. ಈಗ ಅವರು ಮುಖಗಳಿಗೆ ಸೌಂದರ್ಯದ ಬೊಟ್ಟುಗಳನ್ನು ಇಟ್ಟುಕೊಳ್ಳುವರು; ಆದರೆ ಆಗ ಅವರ ಚರ್ಮದಲ್ಲಿ ಸುಟ್ಟಕಲೆಗಳೇ ಇರುವವು.