Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಧರ್ಮೋಪದೇಶಕಾಂಡ 28:36 - ಪರಿಶುದ್ದ ಬೈಬಲ್‌

36 “ಯೆಹೋವನು ನಿಮ್ಮನ್ನೂ ನಿಮ್ಮ ಅರಸನನ್ನೂ ನೀವು ಅರಿಯದ ದೇಶಕ್ಕೆ ಅಟ್ಟಿಬಿಡುವನು. ನೀವಾಗಲಿ ನಿಮ್ಮ ಪೂರ್ವಿಕರಾಗಲಿ ಆ ದೇಶವನ್ನು ಎಂದೂ ನೋಡಲಿಲ್ಲ. ಅಲ್ಲಿ ಮರ, ಕಲ್ಲುಗಳಿಂದ ಮಾಡಿದ ಸುಳ್ಳುದೇವರನ್ನು ಆರಾಧಿಸುವಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

36 ನಿಮಗೂ ನಿಮ್ಮ ಪೂರ್ವಿಕರಿಗೂ ಗೊತ್ತಿಲ್ಲದ ಜನಾಂಗದವರ ದೇಶಕ್ಕೆ ಯೆಹೋವನು ನಿಮ್ಮನ್ನೂ ಮತ್ತು ನೀವು ನೇಮಿಸಿಕೊಳ್ಳುವ ಅರಸರನ್ನೂ ಒಯ್ಯುವನು; ಅಲ್ಲಿ ನೀವು ಮರದ ದೇವರುಗಳನ್ನೂ ಮತ್ತು ಕಲ್ಲಿನ ದೇವರುಗಳನ್ನೂ ಸೇವಿಸುವಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

36 ನಿಮಗೂ ನಿಮ್ಮ ಪಿತೃಗಳಿಗೂ ಗೊತ್ತಿಲ್ಲದ ಜನಾಂಗದವರ ದೇಶಕ್ಕೆ ನಿಮ್ಮನ್ನೂ ನೀವು ನೇಮಿಸಿಕೊಳ್ಳುವ ಅರಸರನ್ನೂ ಒಯ್ಯಿಸುವರು; ಅಲ್ಲಿ ನೀವು ಮರದ ದೇವರುಗಳನ್ನೂ ಕಲ್ಲಿನ ದೇವರುಗಳನ್ನೂ ಪೂಜಿಸುವಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

36 ನಿಮಗೂ ನಿಮ್ಮ ಪಿತೃಗಳಿಗೂ ಗೊತ್ತಿಲ್ಲದ ಜನಾಂಗದವರ ದೇಶಕ್ಕೆ ಯೆಹೋವನು ನಿಮ್ಮನ್ನೂ ನೀವು ನೇವಿುಸಿಕೊಳ್ಳುವ ಅರಸರನ್ನೂ ಒಯ್ಯಿಸುವನು; ಅಲ್ಲಿ ನೀವು ಮರದ ದೇವರುಗಳನ್ನೂ ಕಲ್ಲಿನ ದೇವರುಗಳನ್ನೂ ಸೇವಿಸುವಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

36 ಯೆಹೋವ ದೇವರು ನಿಮ್ಮನ್ನೂ, ನೀವು ನಿಮ್ಮ ಮೇಲೆ ನೇಮಿಸಿಕೊಳ್ಳುವ ಅರಸನನ್ನೂ, ನೀವೂ, ನಿಮ್ಮ ಪಿತೃಗಳೂ ಅರಿಯದ ಜನಾಂಗದ ಬಳಿಗೆ ಹೋಗುವಂತೆ ಮಾಡುವರು. ಅಲ್ಲಿ ಮರವೂ, ಕಲ್ಲೂ ಆಗಿರುವ ಬೇರೆ ದೇವರುಗಳನ್ನೂ ನೀವು ಪೂಜಿಸುವಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಧರ್ಮೋಪದೇಶಕಾಂಡ 28:36
31 ತಿಳಿವುಗಳ ಹೋಲಿಕೆ  

ಆದ್ದರಿಂದ ನಾನು ನಿಮ್ಮನ್ನು ಈ ದೇಶದ ಹೊರಗೆ ಎಸೆಯುತ್ತೇನೆ. ನೀವು ಪರದೇಶಕ್ಕೆ ಸೆರೆಹೋಗುವಂತೆ ಮಾಡುತ್ತೇನೆ. ನೀವು ಮತ್ತು ನಿಮ್ಮ ಪೂರ್ವಿಕರು ಎಂದೂ ನೋಡದ ಪ್ರದೇಶಕ್ಕೆ ನೀವು ಹೋಗುವಿರಿ. ಆ ಪ್ರದೇಶದಲ್ಲಿ ನೀವು ನಿಮ್ಮ ಮನಸ್ಸಿಗೆ ಬಂದಷ್ಟು ಸುಳ್ಳುದೇವತೆಗಳ ಸೇವೆಮಾಡಬಹುದು. ನಾನು ನಿಮಗೆ ಸಹಾಯವನ್ನೂ ಮಾಡುವದಿಲ್ಲ, ಯಾವ ರೀತಿಯ ಒಲವನ್ನೂ ತೋರುವದಿಲ್ಲ.’”


ಆ ನಗರದಲ್ಲಿ ಉಳಿದಿದ್ದ ಜನರನ್ನೆಲ್ಲಾ ನೆಬೂಜರದಾನನು ಸೆರೆಹಿಡಿದನು. ರಾಜನಾದ ನೆಬೂಕದ್ನೆಚ್ಚರನಿಗೆ ವಿಧೇಯರಾಗಿರಲು ಕೆಲವು ಜನರು ಒಪ್ಪಿದರು. ಆದರೆ ನೆಬೂಜರದಾನನು ಆ ಜನರನ್ನೆಲ್ಲಾ ಸೆರೆಹಿಡಿದನು. ಅವನು ನಗರದಲ್ಲಿದ್ದ ಪ್ರತಿಯೊಬ್ಬರನ್ನೂ ಕರೆದೊಯ್ದನು.


ಅಲ್ಲಿ, ಮನುಷ್ಯರು ಕೈಯಿಂದ ಮಾಡಿದ ದೇವರುಗಳನ್ನು ಪೂಜಿಸುವಿರಿ. ಅವು ಮರಕಲ್ಲುಗಳಿಂದ ರೂಪಿಸಲ್ಪಟ್ಟಿವೆ. ಅವು ನೋಡಲಾರವು, ಕೇಳಲಾರವು, ತಿನ್ನಲಾರವು ಮತ್ತು ಮೂಸಿನೋಡಲಾರವು!


ಜೀವದಿಂದುಳಿದ ಜನರನ್ನು ಸೆರೆಹಿಡಿದು ಬಾಬಿಲೋನಿನಗೆ ತೆಗೆದುಕೊಂಡು ಹೋಗಿ ತಮ್ಮ ಗುಲಾಮರನ್ನಾಗಿ ಮಾಡಿಕೊಂಡರು. ಪಾರಸಿಯ ಸಾಮ್ರಾಜ್ಯ ಸ್ಥಾಪನೆಯಾಗುವ ತನಕ ಅವರು ಅಲ್ಲಿ ಗುಲಾಮರಾಗಿದ್ದರು.


ಬಾಬಿಲೋನಿನ ಅರಸನಾದ ನೆಬೂಕದ್ನೆಚ್ಚರನು ಯೆಹೂದ ಪ್ರಾಂತ್ಯದ ಮೇಲೆ ಯುದ್ಧಕ್ಕೆ ಬಂದನು. ಯೆಹೋಯಾಕೀಮನನ್ನು ಸೆರೆಹಿಡಿದು ಅವನನ್ನು ಕಂಚಿನ ಸರಪಣಿಯಿಂದ ಕಟ್ಟಿಸಿದನು. ನಂತರ ಯೆಹೋಯಾಕೀಮನನ್ನು ಬಾಬಿಲೋನಿಗೆ ತೆಗೆದುಕೊಂಡು ಹೋದನು.


ಯೆಹೂದದ ಮತ್ತು ಜೆರುಸಲೇಮಿನ ಜನರನ್ನು ನಾಶಮಾಡಲು ಬಾಬಿಲೋನಿನ ಅರಸನನ್ನು ಕಳುಹಿಸಿದನು. ಬಾಬಿಲೋನಿನ ಅರಸನು ದೇವಾಲಯದೊಳಗಿದ್ದ ಯುವಜನರನ್ನು ಕೊಂದುಹಾಕಿದನು. ಅವನಿಗೆ ಯೆಹೂದದ ಮತ್ತು ಜೆರುಸಲೇಮಿನ ಜನರ ಮೇಲೆ ಕರುಣೆಯೇ ಇರಲಿಲ್ಲ. ಅವನು ಚಿಕ್ಕವರನ್ನೂ ದೊಡ್ಡವರನ್ನೂ ಗಂಡಸರನ್ನೂ ಹೆಂಗಸರನ್ನೂ ಬಿಡದೆ ಸಂಹರಿಸಿದನು. ರೋಗಿಗಳನ್ನೂ ಆರೋಗ್ಯವಂತರನ್ನೂ ಸಂಹರಿಸಿದನು; ಯೆಹೂದದ ಮತ್ತು ಜೆರುಸಲೇಮಿನ ಜನರನ್ನು ಶಿಕ್ಷಿಸಲು ದೇವರು ನೆಬೂಕದ್ನೆಚ್ಚರನನ್ನು ಉಪಯೋಗಿಸಿದನು.


ಆದ್ದರಿಂದ ಅಶ್ಶೂರ್ ದೇಶದ ಅರಸನ ಸೇನಾಪತಿಗಳು ಬಂದು ಯೆಹೂದದ ಮೇಲೆ ಯುದ್ಧ ಮಾಡುವಂತೆ ಯೆಹೋವನು ಮಾಡಿದನು. ಆ ಸೇನಾಪತಿಗಳು ಮನಸ್ಸೆಯನ್ನು ಬಂಧಿಸಿ ಸೆರೆಯಲ್ಲಿಟ್ಟರು. ಅವನಿಗೆ ಕೊಂಡಿಗಳನ್ನು ಸಿಕ್ಕಿಸಿ ಬೇಡಿಹಾಕಿ ಬಾಬಿಲೋನಿಗೆ ಒಯ್ದರು.


ಯೆಹೋವನು ನಿಮ್ಮನ್ನು ಲೋಕದ ಎಲ್ಲಾ ದೇಶಗಳಿಗೆ ಚದರಿಸಿಬಿಡುವನು. ಆತನು ಪ್ರಪಂಚದ ಒಂದು ಕಡೆಯಿಂದ ಇನ್ನೊಂದು ಕಡೆಯ ತನಕ ನಿಮ್ಮನ್ನು ಚದರಿಸುವನು. ಅಲ್ಲಿ ನೀವು ಕಲ್ಲುಮರಗಳಿಂದ ಮಾಡಿದ ದೇವರುಗಳನ್ನು ಪೂಜಿಸುವಿರಿ. ಆ ಸುಳ್ಳುದೇವರುಗಳನ್ನು ನೀವಾಗಲಿ ನಿಮ್ಮ ಪೂರ್ವಿಕರಾಗಲಿ ಎಂದೂ ಪೂಜಿಸಿರಲಿಲ್ಲ.


ಇಸ್ರೇಲ್ ಜನರೇ, ನನ್ನ ಒಡೆಯನಾದ ಯೆಹೋವನು ಹೀಗೆನ್ನುತ್ತಾನೆ: “ಆ ಹೊಲಸು ವಿಗ್ರಹಗಳನ್ನು ಆರಾಧಿಸಬೇಕೆನ್ನುವವನು ಹೋಗಿ ಆರಾಧಿಸಲಿ. ಮುಂದಿನ ಕಾಲದಲ್ಲಂತೂ ನೀವು ನನ್ನ ಬುದ್ಧಿಮಾತನ್ನು ಕೇಳೇ ಕೇಳುವಿರಿ. ನನ್ನ ಪರಿಶುದ್ಧ ಹೆಸರನ್ನು ನೀವು ನಿಮ್ಮ ಬಲಿಗಳಿಂದಲೂ ಬೊಂಬೆಗಳಿಂದಲೂ ಅಪಕೀರ್ತಿಗೆ ಗುರಿಮಾಡುವುದೇ ಇಲ್ಲ.”


ನಮಗೆ ರಾಜನು ಬಹಳ ಮುಖ್ಯವಾಗಿದ್ದನು. ಅವನು ನಮಗೆ ಉಸಿರಿನಷ್ಟೇ ಅಮೂಲ್ಯವಾಗಿದ್ದನು. ಆದರೆ ಅವರು ರಾಜನನ್ನೇ ಸೆರೆಹಿಡಿದರು. ಯೆಹೋವನೇ, ಆ ರಾಜನನ್ನು ಆರಿಸಿಕೊಂಡಿದ್ದನು. “ನಾವು ಅವನ ನೆರಳಿನಲ್ಲಿ ಬದುಕುತ್ತೇವೆ. ಅವನು ನಮ್ಮನ್ನು ಜನಾಂಗಗಳವರಿಂದ ಸಂರಕ್ಷಿಸುವನು” ಎಂದು ನಾವು ರಾಜನ ಬಗ್ಗೆ ಹೇಳಿಕೊಂಡಿದ್ದೆವು.


ಬಾಬಿಲೋನಿನವರು ನಿನ್ನ ಗಂಡುಮಕ್ಕಳನ್ನು ತೆಗೆದುಕೊಂಡು ಹೋಗುವರು. ಅವರು ಬಾಬಿಲೋನಿನ ಅರಮನೆಗಳಲ್ಲಿ ಕಂಚುಕಿಯರಾಗಿ ಸೇವೆ ಮಾಡುವರು” ಎಂದು ಹೇಳಿದನು.


ನೀವು ಅವರ ಅಸಹ್ಯವಾದ ವಿಗ್ರಹಗಳನ್ನು ನೋಡಿದಿರಿ. ಅವುಗಳು ಮರ, ಕಲ್ಲು, ಬೆಳ್ಳಿಬಂಗಾರಗಳಿಂದ ಕೆತ್ತಲ್ಪಟ್ಟವುಗಳಾಗಿದ್ದವು.


ಯೆಹೂದದ ಜನರು ಯೆಹೋವಾಹಾಜನನ್ನು ತಮ್ಮ ಹೊಸ ಅರಸನನ್ನಾಗಿ ಜೆರುಸಲೇಮಿನಲ್ಲಿ ಆರಿಸಿದರು. ಯೆಹೋವಾಹಾಜನು ಯೋಷೀಯನ ಮಗನು.


ಯೆಹೂದದ ಜನರೇ, ನಾನು ನಿಮ್ಮ ಮೇಲೆ ಶತ್ರುಗಳನ್ನು ಬರಮಾಡುವೆನು. ಅವರು ನೀವೆಂದೂ ತಿಳಿಯದ ಪ್ರದೇಶದಿಂದ ಬಂದು ನಿಮ್ಮನ್ನು ಅಲ್ಲಿಗೆ ಸಾಗಿಸುವರು. ನನಗೆ ಅತಿಕೋಪ ಬಂದಿದೆ. ನನ್ನ ಕೋಪವು ಜ್ವಾಲೆಯಂತಿದೆ. ಆ ಜ್ವಾಲೆಯಿಂದ ನೀವು ಸುಟ್ಟುಹೋಗುವಿರಿ.”


ಜೆರುಸಲೇಮನ್ನು ಹೀಗೆ ವಶಪಡಿಸಿಕೊಳ್ಳಲಾಯಿತು: ಚಿದ್ಕೀಯನು ಯೆಹೂದದ ರಾಜನಾಗಿ ಆಳುತ್ತಿದ್ದ ಒಂಭತ್ತನೇ ವರ್ಷದ ಹತ್ತನೆಯ ತಿಂಗಳಿನಲ್ಲಿ ಬಾಬಿಲೋನಿನ ರಾಜನಾದ ನೆಬೂಕದ್ನೆಚ್ಚರನು ತನ್ನ ಇಡೀ ಸೈನ್ಯದೊಂದಿಗೆ ಜೆರುಸಲೇಮಿನ ಮೇಲೆ ಧಾಳಿ ಮಾಡಿದನು. ಅದನ್ನು ವಶಪಡಿಸಿಕೊಳ್ಳುವದಕ್ಕಾಗಿ ಅವನು ಆ ನಗರವನ್ನು ಮುತ್ತಿದನು.


ದೇವರು ಮುಂದುವರಿಸುತ್ತಾ, “ಈ ನಗರದೊಳಗಿಂದ ನಿಮ್ಮನ್ನು ಹೊರಡಿಸಿ ನಿಮ್ಮನ್ನು ಪರದೇಶಿಯರಿಗೆ ವಶಪಡಿಸುತ್ತೇನೆ; ಮತ್ತು ನಿಮ್ಮನ್ನು ದಂಡಿಸುತ್ತೇನೆ.


ಯೆಹೋವನು ನಿಮ್ಮನ್ನು ಅನ್ಯದೇಶಗಳಿಗೆ ಚದರಿಸಿಬಿಡುವನು. ಆತನು ನಿಮ್ಮನ್ನು ಚದರಿಸಿಬಿಡುವ ದೇಶಗಳವರ ಮಧ್ಯದಲ್ಲಿ ನಿಮ್ಮಲ್ಲಿ ಕೆಲವರು ಮಾತ್ರ ಜೀವಂತವಾಗಿ ಉಳಿದುಕೊಳ್ಳುವರು.


ಆದರೆ ನೀವು ಮೊಂಡರಾಗಿ ಕೆಟ್ಟಕಾರ್ಯಗಳನ್ನು ಮಾಡಿದ್ದಾದರೆ ಯೆಹೋವನು ನಿಮ್ಮನ್ನು ಮತ್ತು ನಿಮ್ಮ ರಾಜನನ್ನು ನಾಶಪಡಿಸುತ್ತಾನೆ” ಎಂದು ಹೇಳಿದನು.


ಬಾಬಿಲೋನ್ ರಾಜನು ಹಮಾತ್ ದೇಶದ ರಿಬ್ಲದಲ್ಲಿ ಅವರನ್ನೆಲ್ಲ ಕೊಂದುಹಾಕಿದನು. ಹೀಗೆ ಯೆಹೂದದ ಜನರನ್ನೆಲ್ಲ ಅವರ ದೇಶದಿಂದ ಸೆರೆಯಾಳುಗಳನ್ನಾಗಿಸಿ ಹಿಡಿದೊಯ್ದರು.


ಇಸ್ರೇಲಿನ ದೇವರಾದ ಸರ್ವಶಕ್ತನಾದ ಯೆಹೋವನ ಸಂದೇಶವಿದು: “ಯೆಹೂದದ ಜನರು ಕಹಿಯಾದ ಆಹಾರವನ್ನು ತಿನ್ನುವಂತೆ ನಾನು ಬೇಗನೆ ಮಾಡುವೆನು; ಅವರು ವಿಷಮಿಶ್ರಿತ ನೀರನ್ನು ಕುಡಿಯುವಂತೆ ಮಾಡುವೆನು.


ಜೆರುಸಲೇಮಿನ ಹೆಬ್ಬಾಗಿಲುಗಳು ನೆಲದಲ್ಲಿ ಹೂತುಹೋಗಿವೆ. ಆತನು ಹೆಬ್ಬಾಗಿಲುಗಳ ಸರಳುಗಳನ್ನು ಮುರಿದು ಚೂರುಚೂರು ಮಾಡಿದ್ದಾನೆ. ಅವಳ ರಾಜನು ಮತ್ತು ರಾಜಕುಮಾರರು ಅನ್ಯಜನಾಂಗಗಳ ಮಧ್ಯದಲ್ಲಿದ್ದಾರೆ. ಆ ಜನರಿಗೆ ಉಪದೇಶ ಮಾಡಲು ಯಾರೂ ಇಲ್ಲ. ಪ್ರವಾದಿಗಳಿಗೆ ಯೆಹೋವನಿಂದ ಯಾವ ದರ್ಶನಗಳೂ ಇಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು