ಆದ್ದರಿಂದ ನಾನು ಉತ್ತರದ ಎಲ್ಲಾ ಜನಾಂಗಗಳನ್ನು ಕರೆಸುತ್ತೇನೆ.” ಇದು ಯೆಹೋವನ ಸಂದೇಶ. “ನಾನು ಬಾಬಿಲೋನಿನ ರಾಜನಾದ ನೆಬೂಕದ್ನೆಚ್ಚರನನ್ನು ಕೂಡಲೇ ಕರೆಸುವೆನು. ಅವನು ನನ್ನ ಸೇವಕ. ನಾನು ಆ ಜನರನ್ನು ಯೆಹೂದ ದೇಶದ ವಿರುದ್ಧವಾಗಿಯೂ ಯೆಹೂದ್ಯರ ವಿರುದ್ಧವಾಗಿಯೂ ತರುತ್ತೇನೆ. ನಾನು ನಿಮ್ಮ ಸುತ್ತಮುತ್ತಲಿನಲ್ಲಿದ್ದ ಜನಾಂಗಗಳ ವಿರುದ್ಧವಾಗಿಯೂ ಅವರನ್ನು ಕರೆತರುವೆನು. ನಾನು ಆ ದೇಶಗಳನ್ನೆಲ್ಲ ನಾಶಮಾಡುವೆನು. ನಾನು ಆ ಭೂಮಿಗಳನ್ನು ಶಾಶ್ವತವಾಗಿ ಬರಿದಾದ ಮರುಭೂಮಿಗಳನ್ನಾಗಿ ಮಾಡುವೆನು. ಜನರು ಆ ದೇಶಗಳನ್ನು ನೋಡಿ ಅವು ಹಾಳಾಗಿರುವುದನ್ನು ಕಂಡು ಬೆರಗಾಗಿ ಸಿಳ್ಳುಹಾಕುವರು.