Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಧರ್ಮೋಪದೇಶಕಾಂಡ 28:45 - ಪರಿಶುದ್ದ ಬೈಬಲ್‌

45 “ನಿಮ್ಮ ದೇವರಾದ ಯೆಹೋವನು ಹೇಳಿದ ಸಂಗತಿಗಳಿಗೆ ನೀವು ಕಿವಿಗೊಡದೆ ಹೋದದ್ದರಿಂದ, ಆತನು ಕೊಟ್ಟ ಆಜ್ಞೆಗಳಿಗೂ ನಿಯಮಗಳಿಗೂ ನೀವು ವಿಧೇಯರಾಗದಿದ್ದ ಕಾರಣ ಈ ಶಾಪಗಳೆಲ್ಲಾ ನಿಮ್ಮ ಮೇಲೆ ಬರುತ್ತವೆ. ನೀವು ನಾಶವಾಗುವವರೆಗೂ ಅವು ನಿಮ್ಮನ್ನು ಅಟ್ಟಿಸಿಕೊಂಡು ಬರುತ್ತವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

45 ನೀವು ನಿಮ್ಮ ದೇವರಾದ ಯೆಹೋವನ ಮಾತಿಗೆ ಕಿವಿಗೊಡದೆಯೂ, ಆತನು ನೇಮಿಸಿದ ಆಜ್ಞಾವಿಧಿಗಳನ್ನು ಅನುಸರಿಸದೆಯೂ ಹೋದುದರಿಂದ ಈ ಎಲ್ಲಾ ಅಶುಭಗಳು ನಿಮಗೆ ಪ್ರಾಪ್ತವಾಗಿ ನಿಮ್ಮನ್ನು ಹಿಂದಟ್ಟಿ ಹಿಡಿದು ಕಡೆಗೆ ನಾಶಮಾಡುವವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

45 “ನೀವು ನಿಮ್ಮ ದೇವರಾದ ಸರ್ವೇಶ್ವರನ ಮಾತಿಗೆ ಕಿವಿಗೊಡದೆ ಅವರು ನೇಮಿಸಿದ ಆಜ್ಞಾವಿಧಿಗಳನ್ನು ಅನುಸರಿಸದೆ ಹೋದುದರಿಂದ ಈ ಎಲ್ಲಾ ಅಶುಭಗಳು ನಿಮಗೆ ಪ್ರಾಪ್ತವಾಗಿ, ನಿಮ್ಮನ್ನು ಹಿಂದಟ್ಟಿ ಹಿಡಿದು, ಕಡೆಗೆ ನಾಶಮಾಡುವುವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

45 ನೀವು ನಿಮ್ಮ ದೇವರಾದ ಯೆಹೋವನ ಮಾತಿಗೆ ಕಿವಿಗೊಡದೆಯೂ ಆತನು ನೇವಿುಸಿದ ಆಜ್ಞಾವಿಧಿಗಳನ್ನು ಅನುಸರಿಸದೆಯೂ ಹೋದದರಿಂದ ಈ ಎಲ್ಲಾ ಅಶುಭಗಳು ನಿಮಗೆ ಪ್ರಾಪ್ತವಾಗಿ ನಿಮ್ಮನ್ನು ಹಿಂದಟ್ಟಿ ಹಿಡಿದು ಕಡೆಗೆ ನಾಶಮಾಡುವವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

45 ಇದಲ್ಲದೆ ನೀವು ನಿಮ್ಮ ದೇವರಾದ ಯೆಹೋವ ದೇವರ ವಾಕ್ಯವನ್ನು ಕೇಳದೆ ಅವರು ನಿಮಗೆ ಆಜ್ಞಾಪಿಸಿದ ಆಜ್ಞೆಗಳನ್ನೂ ನಿಯಮಗಳನ್ನೂ ಕೈಗೊಳ್ಳದೆ ಇದ್ದುದರಿಂದ, ಈ ಶಾಪಗಳೆಲ್ಲಾ ನಿಮ್ಮ ಮೇಲೆ ಬಂದು, ನಿಮ್ಮನ್ನು ನಾಶಮಾಡುವವರೆಗೂ ನಿಮ್ಮನ್ನು ಹಿಂದಟ್ಟುವುವು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಧರ್ಮೋಪದೇಶಕಾಂಡ 28:45
18 ತಿಳಿವುಗಳ ಹೋಲಿಕೆ  

“ನಿಮ್ಮ ದೇವರಾದ ಯೆಹೋವನು ನಿಮಗೆ ಕೊಡುವ ಆಜ್ಞೆ, ಕಟ್ಟಳೆಗಳಿಗೆ ನೀವು ವಿಧೇಯರಾಗದಿದ್ದರೆ ಈ ಕೆಟ್ಟ ಸಂಗತಿಗಳು ನಿಮಗೆ ತಟ್ಟುವವು:


ನನ್ನ ಮಾತುಗಳನ್ನು ಕೇಳದೆ ಹೋದರೆ ನೀವು ನನಗೆ ವಿರೋಧಿಗಳಾಗಿದ್ದೀರಿ. ನಿಮ್ಮ ವೈರಿಯು ನಿಮ್ಮನ್ನು ನಾಶಮಾಡುವನು.” ಯೋಹೋವನೇ ಇವುಗಳನ್ನು ನುಡಿದಿದ್ದಾನೆ.


ನನ್ನ ಒಡೆಯನಾದ ಯೆಹೋವನು ಹೀಗೆನ್ನುತ್ತಾನೆ: “ಭಯಂಕರವಾದ ನಾಲ್ಕು ದಂಡನೆಗಳನ್ನು ನಾನು ಜೆರುಸಲೇಮ್ ಪಟ್ಟಣದ ಮೇಲೆ ಕಳುಹಿಸುವೆನು. ಆದ್ದರಿಂದ ಜೆರುಸಲೇಮಿಗೆ ಇನ್ನೂ ಎಷ್ಟು ಹೆಚ್ಚಾಗಿ ಕಷ್ಟಕರವಾಗಬಹುದೆಂದು ಯೋಚಿಸಿರಿ. ನಾನು ಆ ನಗರದ ವಿರುದ್ಧವಾಗಿ ಶತ್ರು ಸೈನಿಕರನ್ನು, ಹಸಿವೆ, ರೋಗ ಮತ್ತು ಕ್ರೂರಜಂತುಗಳನ್ನು ಕಳುಹಿಸುತ್ತೇನೆ. ದೇಶದಲ್ಲಿರುವ ಎಲ್ಲಾ ಜನರನ್ನೂ ಪಶುಗಳನ್ನೂ ನಿರ್ಮೂಲ ಮಾಡುವೆನು.


ಖಡ್ಗಧಾರಿಯಾದ ವೈರಿಯು ಪಟ್ಟಣದ ಹೊರಗಿದ್ದಾನೆ. ರೋಗ ಮತ್ತು ಹಸಿವೆ ಪಟ್ಟಣದೊಳಗಿವೆ. ಒಬ್ಬನು ಹೊರಗೆ ಹೊಲದ ಬಳಿ ಹೋದರೆ ವೈರಿಸೈನಿಕನು ಅವನನ್ನು ಕೊಲ್ಲುವನು. ಪಟ್ಟಣದೊಳಗೇ ಉಳಿದರೆ ರೋಗ ಮತ್ತು ಹಸಿವೆಯು ಅವನನ್ನು ಕೊಲ್ಲುವವು.


ಪಾಪಿಗಳು ಹೋದಲ್ಲೆಲ್ಲಾ ಕೇಡು ಅವರನ್ನು ಹಿಂಬಾಲಿಸುವುದು. ಸಜ್ಜನರಿಗಾದರೋ ಒಳ್ಳೆಯದೇ ಆಗುತ್ತದೆ.


ನೀನು ಗರ್ವಿಷ್ಠರನ್ನು ಖಂಡಿಸುವೆ. ನಿನ್ನ ಆಜ್ಞೆಗಳಿಗೆ ವಿಧೇಯರಾಗದ ಅವರು ಶಾಪಗ್ರಸ್ತರಾಗಿದ್ದಾರೆ.


ಯೆಹೋವನು ಇಸ್ರೇಲಿನ ಜನರೆಲ್ಲರನ್ನೂ ತಿರಸ್ಕರಿಸಿದನು. ಅವನು ಅವರಿಗೆ ಅನೇಕ ತೊಂದರೆಗಳನ್ನು ಉಂಟುಮಾಡಿದನು. ಅವರನ್ನು ನಾಶಗೊಳಿಸಲು ನಾಶಕರಿಗೆ ಆತನು ಅವಕಾಶ ನೀಡಿದನು. ಕೊನೆಗೆ, ಆತನು ಅವರನ್ನು ದೂರತಳ್ಳಿ, ತನ್ನ ದೃಷ್ಟಿಯಿಂದ ಅವರನ್ನೂ ದೂರಮಾಡಿದನು.


ಯೆಹೋವನು ನಿಮ್ಮ ಪುಟ್ಟಿಗಳನ್ನೂ ಪಾತ್ರೆಗಳನ್ನೂ ಆಶೀರ್ವದಿಸಿ ಅವು ಯಾವಾಗಲೂ ಆಹಾರಪದಾರ್ಥಗಳಿಂದ ತುಂಬಿರುವಂತೆ ಮಾಡುವನು.


ನಾನು ನಿಜವಾಗಿ ನನ್ನ ಕೋಪವನ್ನು ತೋರಿಸುವೆನು. ಹೌದು, ನಾನೇ ನಿಮ್ಮ ಪಾಪಗಳಿಗಾಗಿ ನಿಮ್ಮನ್ನು ಏಳರಷ್ಟಾಗಿ ದಂಡಿಸುವೆನು.


ನಾವು ಈ ನಗರವನ್ನು ನಾಶಮಾಡುತ್ತೇವೆ. ಈ ನಗರದ ದುಷ್ಟತನವನ್ನು ಯೆಹೋವನು ನೋಡಿದ್ದಾನೆ. ಆದ್ದರಿಂದ ಇದನ್ನು ನಾಶಮಾಡಲು ಆತನೇ ನಮ್ಮನ್ನು ಕಳುಹಿಸಿದ್ದಾನೆ” ಎಂದು ಹೇಳಿದರು.


“ನೀವು ಹೋಗುವ ದೇಶದಲ್ಲಿ ಬಹಳ ವರ್ಷ ಬಾಳಿದ ನಂತರ ನಿಮಗೆ ಮಕ್ಕಳೂ ಮೊಮ್ಮಕ್ಕಳೂ ಆಗುವರು. ಬಳಿಕ ನೀವು ನಿಮ್ಮ ಜೀವಿತಗಳನ್ನು ಹಾಳುಮಾಡಿಕೊಳ್ಳುವಿರಿ. ನೀವು ಎಲ್ಲಾ ಬಗೆಯ ವಿಗ್ರಹಗಳನ್ನು ಮಾಡಿಕೊಳ್ಳುವಿರಿ. ಅದು ದೇವರಿಗೆ ಬಹಳ ಕೋಪವನ್ನು ಉಂಟುಮಾಡುವುದು!


ಆದ್ದರಿಂದ ನಾನು ನಿಮಗೆ ಎಚ್ಚರಿಕೆ ಕೊಡುತ್ತಿದ್ದೇನೆ. ಆಕಾಶವೂ ಭೂಮಿಯೂ ಇದಕ್ಕೆ ಸಾಕ್ಷಿ. ಆ ಕೆಟ್ಟ ಕೆಲಸವನ್ನು ನೀವು ಮಾಡಿದರೆ ನೀವು ಹಾಳಾಗಿ ಹೋಗುವಿರಿ. ನೀವೀಗ ಜೋರ್ಡನ್ ನದಿಯನ್ನು ದಾಟಿ ಆ ದೇಶವನ್ನು ಸ್ವಾಧೀನ ಮಾಡಿಕೊಳ್ಳಲು ಹೋಗುತ್ತೀರಿ. ಆದರೆ ನೀವು ಮೂರ್ತಿಗಳನ್ನು ಮಾಡಿಕೊಂಡರೆ ಅಲ್ಲಿ ಹೆಚ್ಚುಕಾಲ ಬಾಳುವುದಿಲ್ಲ. ನೀವು ಸಂಪೂರ್ಣವಾಗಿ ನಾಶವಾಗುವಿರಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು