Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಧರ್ಮೋಪದೇಶಕಾಂಡ 28:48 - ಪರಿಶುದ್ದ ಬೈಬಲ್‌

48 ಆದ್ದರಿಂದ ಆತನು ನಿಮ್ಮ ವೈರಿಗಳನ್ನು ಕಳುಹಿಸಿ ಅವರ ಸೇವೆ ನೀವು ಮಾಡುವಂತೆ ಮಾಡುವನು. ನೀವು ಹಸಿವು ಬಾಯಾರಿಕೆಗಳಿಂದ ಬಳಲುವಿರಿ; ಬಟ್ಟೆಯಿಲ್ಲದೆ ಬಡವರಾಗಿ ಜೀವಿಸುವಿರಿ. ನಿಮ್ಮ ಯೆಹೋವನು ನಿಮ್ಮ ಮೇಲೆ ಭಾರವನ್ನು ಹೊರಿಸುವನು. ಆ ಭಾರವನ್ನು ನಿಮ್ಮಿಂದ ತೆಗೆಯಲಾಗುವುದಿಲ್ಲ; ನೀವು ನಾಶವಾಗುವಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

48 ಯೆಹೋವನು ನಿಮ್ಮ ಮೇಲೆ ಶತ್ರುಗಳನ್ನು ಬರಮಾಡುವನು; ಆಗ ನೀವು ಹಸಿವೆ, ಬಾಯಾರಿಕೆಗಳುಳ್ಳವರಾಗಿ, ಬಟ್ಟೆಯೂ ಮತ್ತು ಏನೂ ಇಲ್ಲದವರಾಗಿ ಆ ಶತ್ರುಗಳಿಗೇ ಸೇವಕರಾಗಬೇಕಾಗುವುದು. ಯೆಹೋವನು ಕಬ್ಬಿಣದ ನೊಗವನ್ನು ಹೇರಿಸಿ ನಿಮ್ಮನ್ನು ನಾಶಮಾಡುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

48 ಆದುದರಿಂದ ಸರ್ವೇಶ್ವರ ನಿಮ್ಮ ಮೇಲೆ ಶತ್ರುಗಳನ್ನು ಬರಮಾಡುವರು; ಆಗ ನೀವು ಹಸಿವು ಬಾಯಾರಿಕೆಗಳಿಗೆ ಗುರಿಯಾಗಿ ಬಟ್ಟೆಬರೆ ಏನೂ ಇಲ್ಲದೆ, ಆ ಶತ್ರುಗಳಿಗೇ ಸೇವಕರಾಗಬೇಕಾಗುವುದು. ಕಬ್ಬಿಣದ ನೊಗವನ್ನು ಹೇರಿಸಿ ಸರ್ವೇಶ್ವರ ನಿಮ್ಮನ್ನು ನಾಶಮಾಡುವರು;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

48 ಆಗ ನೀವು ಹಸಿವು ಬಾಯಾರಿಕೆಗಳುಳ್ಳವರಾಗಿ ಬಟ್ಟೆಯೂ ಏನೂ ಇಲ್ಲದೆ ಆ ಶತ್ರುಗಳಿಗೇ ಸೇವಕರಾಗಬೇಕಾಗುವದು. ಆತನು ಕಬ್ಬಿಣದ ನೊಗವನ್ನು ಹೇರಿಸಿ ನಿಮ್ಮನ್ನು ನಾಶಮಾಡುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

48 ಆದುದರಿಂದ ಹಸಿವೆಯಲ್ಲಿ, ದಾಹದಲ್ಲಿ, ಬಡತನದಲ್ಲಿ ಬಟ್ಟೆಬರೆ ಏನೂ ಇಲ್ಲದೆ, ಯೆಹೋವ ದೇವರು ನಿಮ್ಮ ಮೇಲೆ ಕಳುಹಿಸುವ ಆ ಶತ್ರುಗಳಿಗೇ ನೀವು ಸೇವಕರಾಗಬೇಕಾಗುವುದು. ಯೆಹೋವ ದೇವರು ನಿಮ್ಮನ್ನು ನಾಶಮಾಡುವವರೆಗೆ ಕಬ್ಬಿಣದ ನೊಗವನ್ನು ನಿಮ್ಮ ಮೇಲೆ ಹೊರಿಸುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಧರ್ಮೋಪದೇಶಕಾಂಡ 28:48
23 ತಿಳಿವುಗಳ ಹೋಲಿಕೆ  

“ದಂಗೆಕೋರರಿಗೆ ಇದನ್ನು ಹೇಳು: ಈ ಸಂಗತಿಗಳ ಅರ್ಥವು ನಿಮಗೆ ಗೊತ್ತಿಲ್ಲವೇ? ಅವರಿಗೆ ಹೇಳು: ಮೊದಲಿನ ಗರುಡ ಪಕ್ಷಿ ಬಾಬಿಲೋನ್ ರಾಜನಾದ ನೆಬೂಕದ್ನೆಚ್ಚರನು. ಅವನು ಜೆರುಸಲೇಮಿಗೆ ಬಂದು ಅದರ ರಾಜನನ್ನೂ ಅದರ ಹಿರಿಯರನ್ನೂ ಬಂಧಿಸಿ, ಅವರನ್ನು ತನ್ನ ರಾಜ್ಯವಾದ ಬಾಬಿಲೋನಿಗೆ ಕೊಂಡೊಯ್ದನು.


ನಾನು ಯೆಹೂದದ ಜನರನ್ನು ಗಮನಿಸುತ್ತಿರುವುದು ಅವರನ್ನು ಕಾಪಾಡುವುದಕ್ಕಲ್ಲ. ನಾನು ಅವರನ್ನು ಗಮನಿಸುತ್ತಿರುವುದು ಅವರಿಗೆ ಕೇಡುಮಾಡುವುದಕ್ಕಾಗಿ. ಈಜಿಪ್ಟಿನಲ್ಲಿ ವಾಸಿಸುವ ಯೆಹೂದಿಯರು ಹಸಿವಿನಿಂದ ಸತ್ತುಹೋಗುವರು ಮತ್ತು ಖಡ್ಗಕ್ಕೆ ಬಲಿಯಾಗುವರು. ಅವರು ನಿರ್ನಾಮವಾಗುವವರೆಗೆ ಸಾಯುತ್ತಿರುವರು.


ಯೆಹೋವನು ಇನ್ನು ಮುಂದೆ ತಾಳ್ಮೆಯಿಂದ ಇರಲಾರನು. ನೀವು ಮಾಡಿದ ಅಸಹ್ಯಕೃತ್ಯಗಳನ್ನು ಯೆಹೋವನು ದ್ವೇಷಿಸುತ್ತಾನೆ. ಆದ್ದರಿಂದ ಆತನು ನಿಮ್ಮ ದೇಶವನ್ನು ಬರಿದಾದ ಮರುಭೂಮಿಯನ್ನಾಗಿ ಮಾಡಿದ್ದಾನೆ, ಈಗ ಅಲ್ಲಿ ಯಾರೂ ವಾಸಿಸುವದಿಲ್ಲ. ಬೇರೆಯವರು ಆ ದೇಶದ ಬಗ್ಗೆ ಕೆಟ್ಟ ಮಾತುಗಳನ್ನಾಡುತ್ತಾರೆ.


ನನ್ನ ನೊಗಕ್ಕೆ ಹೆಗಲು ಕೊಟ್ಟು ನನ್ನಿಂದ ಕಲಿತುಕೊಳ್ಳಿರಿ. ನಾನು ಸಾತ್ವಿಕನೂ ದೀನನೂ ಆಗಿರುವುದರಿಂದ ನೀವು ನಿಮ್ಮ ಆತ್ಮಗಳಿಗೆ ವಿಶ್ರಾಂತಿಯನ್ನು ಕಂಡುಕೊಳ್ಳುವಿರಿ.


ಆಗ ಅಗಲ ರೆಕ್ಕೆಗಳಿದ್ದ ಇನ್ನೊಂದು ಹದ್ದು ದ್ರಾಕ್ಷಾಲತೆಯನ್ನು ನೋಡಿತು. ಈ ಹದ್ದಿಗೆ ತುಂಬಾ ಪುಕ್ಕಗಳಿದ್ದವು. ದ್ರಾಕ್ಷಾಲತೆಯು ತನ್ನ ಬೇರುಗಳನ್ನು ಹದ್ದಿನ ಕಡೆಗೆ ತಿರುಗಿಸಿತ್ತು. ಹದ್ದಿಗೆ ನೀರು ಹಾಯಿಸಲು ಸಾಧ್ಯವಾಗುವಂತೆ ಅದು ತನ್ನ ರೆಂಬೆಗಳನ್ನು ಹದ್ದಿನ ಕಡೆಗೆ ಚಾಚಿಕೊಂಡಿತ್ತು. ಅದು ತಾನು ನೆಡಲ್ಪಟ್ಟಿದ್ದ ಸ್ಥಳದಿಂದ ಬೇರೆ ಕಡೆಗೆ ತಿರುಗಿಕೊಂಡಿತು.


ಅವರಿಗೆ ಹೀಗೆ ಹೇಳು, ದೇವರಾದ ಯೆಹೋವನು ಹೀಗೆನ್ನುತ್ತಾನೆ: “‘ಅಗಲವಾದ ರೆಕ್ಕೆಗಳುಳ್ಳ ದೊಡ್ಡ ಹದ್ದು (ಬಾಬಿಲೋನಿನ ರಾಜನಾದ ನೆಬೂಕದ್ನೆಚ್ಚರನು) ಲೆಬನೋನಿಗೆ ಬಂದಿತು. ಅದರ ರೆಕ್ಕೆಗಳು ಅನೇಕ ಚುಕ್ಕೆಗಳನ್ನು ಹೊಂದಿತ್ತು.


ನಾನು ನಿಮಗೆ ಕೊಟ್ಟ ಭೂಮಿಯನ್ನು ನೀವು ಕಳೆದುಕೊಳ್ಳುವಿರಿ. ನಿಮ್ಮನ್ನು ನಿಮಗೆ ತಿಳಿಯದ ನಾಡಿನಲ್ಲಿ ನಿಮ್ಮ ಶತ್ರುಗಳ ದಾಸರನ್ನಾಗಿ ಮಾಡುವೆನು. ಏಕೆಂದರೆ ನನಗೆ ತುಂಬಾ ಕೋಪ ಬಂದಿದೆ. ನನ್ನ ಕೋಪವು ಉರಿಯುವ ಜ್ವಾಲೆಯಂತಿದೆ; ನೀವು ಅದರಲ್ಲಿ ಭಸ್ಮವಾಗಿ ಹೋಗುವಿರಿ.”


ಯೆಹೂದದ ಜನರು ನಿನ್ನನ್ನು, ‘ಯೆರೆಮೀಯನೇ, ನಮ್ಮ ದೇವರಾದ ಯೆಹೋವನು ನಮಗೆ ಇಂಥಾ ಕೇಡನ್ನು ಏಕೆ ಮಾಡಿದನು’ ಎಂದು ಕೇಳಬಹುದು. ಆಗ ಅವರಿಗೆ ಹೀಗೆ ಉತ್ತರಕೊಡು: ‘ಯೆಹೂದದ ಜನರಾದ ನೀವು ಯೆಹೋವನನ್ನು ತೊರೆದಿದ್ದೀರಿ, ನಿಮ್ಮ ದೇಶದಲ್ಲಿ ನೀವು ಅನ್ಯರ ವಿಗ್ರಹಗಳ ಸೇವೆ ಮಾಡುತ್ತಿದ್ದೀರಿ. ಆದ್ದರಿಂದಲೇ ನೀವು ಪರದೇಶದಲ್ಲಿ ಪರದೇಶಿಯರ ಸೇವೆಯನ್ನು ಮಾಡುವಿರಿ.’”


“ನನ್ನ ಜನರ ಮೇಲೆ ನಾನು ಸಿಟ್ಟಿಗೆದ್ದಿದ್ದೆನು. ಅವರು ನನಗೆ ಸೇರಿದವರಾಗಿದ್ದಾರೆ. ಆದರೆ ನಾನು ಅವರ ಮೇಲೆ ಸಿಟ್ಟಾದೆನು. ಆದ್ದರಿಂದ ನಾನು ಅವರನ್ನು ತಳ್ಳಿಬಿಟ್ಟೆನು. ಅವರನ್ನು ನಿನಗೆ ಕೊಟ್ಟೆನು; ನೀನು ಅವರನ್ನು ಶಿಕ್ಷಿಸಿದೆ. ಅವರ ಮೇಲೆ ಕರುಣೆ ತೋರಿಸಲಿಲ್ಲ. ವೃದ್ಧರೂ ಕಷ್ಟದ ಕೆಲಸ ಮಾಡುವಂತೆ ಮಾಡಿದೆ.


ಆದರೆ ಜೆರುಸಲೇಮಿನ ಜನರು ಶೀಶಕನ ಸೇವಕರಾಗುವರು. ಯಾಕೆಂದರೆ ನನ್ನ ಸೇವೆಮಾಡುವುದಕ್ಕೂ ಇತರ ರಾಜರುಗಳ ಸೇವೆಮಾಡುವುದಕ್ಕೂ ವ್ಯತ್ಯಾಸವಿದೆ ಎಂಬುದನ್ನು ಅವರು ಅರಿತುಕೊಳ್ಳಬೇಕಾಗಿದೆ.”


ಹಸಿವೆಯಿಂದ ಅವರು ಕ್ಷೀಣವಾಗುವರು; ಭಯಂಕರ ವ್ಯಾಧಿಯಿಂದ ಅವರು ನಾಶವಾಗುವರು. ಕಾಡುಪ್ರಾಣಿಗಳನ್ನು ಅವರ ಮಧ್ಯೆ ಕಳುಹಿಸುವೆನು. ವಿಷಸರ್ಪಗಳೂ ಹಲ್ಲಿಗಳೂ ಅವರನ್ನು ಕಚ್ಚುವವು.


“ಇಸ್ರೇಲಿನ ನಿನ್ನ ಜನರೂ ಕೆಲವು ಸಂದರ್ಭಗಳಲ್ಲಿ ನಿನ್ನ ವಿರುದ್ಧವಾಗಿ ಪಾಪಮಾಡುತ್ತಾರೆ. ಅವರನ್ನು ಅವರ ಶತ್ರುಗಳು ಸೋಲಿಸುತ್ತಾರೆ. ಆಗ ಜನರು ನಿನ್ನ ಹತ್ತಿರಕ್ಕೆ ಹಿಂದಿರುಗಿ ನಿನ್ನನ್ನು ಸ್ತುತಿಸುತ್ತಾರೆ. ಈ ಆಲಯದಲ್ಲಿ ಜನರು ನಿನಗೆ ಪ್ರಾರ್ಥಿಸುತ್ತಾರೆ.


ಎಳೆಕೂಸಿನ ನಾಲಿಗೆಯು ಬಾಯಾರಿಕೆಯಿಂದ ಅಂಗಳಿಗೆ ಅಂಟಿಕೊಳ್ಳುತ್ತದೆ. ಎಳೆಯ ಮಕ್ಕಳು ರೊಟ್ಟಿಯನ್ನು ಕೇಳಿದರೆ ಅವರಿಗೆ ಯಾರೂ ಏನೂ ಕೊಡುವುದಿಲ್ಲ.


ಆಗ ಅವರು ನಿನ್ನನ್ನು ಎಷ್ಟು ದ್ವೇಷಿಸುವರೆಂದು ನಿನಗೆ ತೋರಿಸುವರು. ನೀನು ದುಡಿದವುಗಳನ್ನೆಲ್ಲ ಅವರು ಕಿತ್ತುಕೊಳ್ಳುವರು. ನಿನ್ನನ್ನು ಬೆತ್ತಲೆಮಾಡಿ ಬಿಟ್ಟುಬಿಡುವರು. ಜನರು ನಿನ್ನ ಪಾಪಗಳನ್ನು ಪರಿಪೂರ್ಣವಾಗಿ ನೋಡುವರು. ನೀನು ಸೂಳೆಯಂತೆ ವರ್ತಿಸಿದ್ದನ್ನು ಅವರು ನೋಡುವರು. ನಿನ್ನ ನೀಚತನವೂ ನಿನ್ನ ಸೂಳೆತನವೂ


ಅದಕ್ಕಾಗಿಯೇ ಯೆಹೋವನು ಹೀಗೆ ಹೇಳುತ್ತಾನೆ: “ನೋಡಿ, ನಾನು ಈ ಕುಟುಂಬದ ವಿರುದ್ಧವಾಗಿ ಸಂಕಟ ತರಲು ಯೋಚಿಸುತ್ತಿದ್ದೇನೆ. ನಿನ್ನನ್ನು ನೀನು ರಕ್ಷಿಸಲು ಸಾಧ್ಯವಿರುವುದಿಲ್ಲ. ಭಯಂಕರ ದಿವಸಗಳು ಬರುವದರಿಂದ ನೀನು ಉಬ್ಬಿಕೊಳ್ಳುವುದನ್ನು ನಿಲ್ಲಿಸುವೆ.


ಅತಿ ಕಷ್ಟಗಳನ್ನು ಅನುಭವಿಸಿದ ಮೇಲೆ ಯೆಹೂದ ಬಂಧನಕ್ಕೊಳಗಾಗಿದ್ದಾಳೆ. ಅತಿ ಶ್ರಮಪಟ್ಟ ಮೇಲೆಯೂ ಅವಳು ಸೆರೆ ಒಯ್ಯಲ್ಪಟ್ಟಿದ್ದಾಳೆ. ಯೆಹೂದ ಬೇರೆ ಜನಾಂಗಗಳ ಜೊತೆಯಲ್ಲಿ ವಾಸಿಸುತ್ತಾಳೆ. ಆದರೆ ಅವಳಿಗೆ ವಿಶ್ರಾಂತಿ ಸಿಕ್ಕಿಲ್ಲ. ಅವಳನ್ನು ಬೆನ್ನಟ್ಟಿದ ಜನರು ಆಕೆಯು ಬಳಲಿ ಹೋಗಿದ್ದಾಗಲೇ ಅವಳನ್ನು ಹಿಡಿದುಕೊಂಡರು.


“ನನ್ನ ಪಾಪಗಳನ್ನೆಲ್ಲ ಒಟ್ಟುಗೂಡಿಸಿ ನೊಗದಂತೆ ಕಟ್ಟಲಾಗಿದೆ. ಯೆಹೋವನು ತನ್ನ ಕೈಗಳಿಂದ ನನ್ನ ಪಾಪಗಳನ್ನು ಒಟ್ಟಿಗೆ ಕಟ್ಟಿದ್ದಾನೆ. ಯೆಹೋವನ ಆ ನೊಗವು ನನ್ನ ಕತ್ತಿನ ಮೇಲೆ ಇದೆ. ಯೆಹೋವನು ನನ್ನನ್ನು ದುರ್ಬಲಗೊಳಿಸಿದ್ದಾನೆ. ನಾನು ಎದುರಿಸಲಾಗದ ಜನರ ಕೈಗೆ ಯೆಹೋವನು ನನ್ನನ್ನು ಒಪ್ಪಿಸಿಕೊಟ್ಟಿದ್ದಾನೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು