Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಧರ್ಮೋಪದೇಶಕಾಂಡ 28:49 - ಪರಿಶುದ್ದ ಬೈಬಲ್‌

49 “ಬಹಳ ದೂರದಿಂದ ಒಂದು ಜನಾಂಗವು ನಿಮ್ಮೊಂದಿಗೆ ಯುದ್ಧಮಾಡಲು ಬರುವಂತೆ ಯೆಹೋವನು ಮಾಡುವನು. ನೀವು ಅವರ ಭಾಷೆಯನ್ನು ಅರಿಯದಿರುವಿರಿ. ಆಕಾಶದಿಂದ ಹದ್ದು ಹಾರಿಬರುವಂತೆ ಅತೀ ವೇಗವಾಗಿ ಅವರು ನಿಮ್ಮ ಮೇಲೆ ಬೀಳುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

49 ರಣಹದ್ದು ಹೇಗೆ ದೂರದಿಂದ ಹಾರಿಬರುವುದೋ ಹಾಗೆಯೇ ನಿಮಗೆ ತಿಳಿಯದ ಭಾಷೆಯನ್ನಾಡುವ ಒಂದು ಜನಾಂಗವು ನಿಮ್ಮ ಮೇಲೆ ಬರುವಂತೆ ಯೆಹೋವನು ಮಾಡುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

49 ನಿಮಗೆ ತಿಳಿಯದ ಭಾಷೆಯನ್ನಾಡುವ ಒಂದು ಜನಾಂಗ, ರಣಹದ್ದು ಹೇಗೆ ದೂರದಿಂದ ಹಾರಿಬರುವುದೊ ಹಾಗೆಯೇ ದೂರದಿಂದ ನಿಮ್ಮ ಮೇಲೆ ಬರುವಂತೆ ಮಾಡುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

49 ನಿಮಗೆ ತಿಳಿಯದ ಭಾಷೆಯನ್ನಾಡುವ ಒಂದು ಜನಾಂಗವು ರಣಹದ್ದು ಹೇಗೆ ದೂರದಿಂದ ಹಾರಿಬರುವದೋ ಹಾಗೆಯೇ ದೂರದಿಂದ ನಿಮ್ಮ ಮೇಲೆ ಬರುವಂತೆ ಯೆಹೋವನು ಮಾಡುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

49 ಯೆಹೋವ ದೇವರು ದೂರದಿಂದ ಅಂದರೆ, ಭೂಮಿಯ ಕೊನೆಯಿಂದ ರಣಹದ್ದು ಹೇಗೆ ಹಾರಿಬರುವುದೋ ಹಾಗೆಯೇ, ನಿಮಗೆ ತಿಳಿಯದ ಭಾಷೆಯನ್ನಾಡುವ ಒಂದು ಜನಾಂಗವನ್ನು ನಿಮ್ಮ ಮೇಲೆ ಬರುವಂತೆ ಮಾಡುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಧರ್ಮೋಪದೇಶಕಾಂಡ 28:49
26 ತಿಳಿವುಗಳ ಹೋಲಿಕೆ  

ನಮ್ಮನ್ನು ಅಟ್ಟಿಸಿಕೊಂಡು ಬಂದ ಜನರು ಆಕಾಶದಲ್ಲಿ ಹಾರುವ ಹದ್ದುಗಳಿಗಿಂತಲೂ ವೇಗಶಾಲಿಗಳಾಗಿದ್ದರು. ಅವರು ನಮ್ಮನ್ನು ಬೆಟ್ಟಗಳಿಗೆ ಅಟ್ಟಿಸಿಕೊಂಡು ಬಂದರು. ನಮ್ಮನ್ನು ಹಿಡಿಯುವುದಕ್ಕಾಗಿ ಮರುಭೂಮಿಯಲ್ಲಿ ಅವಿತುಕೊಂಡರು.


ಯೆಹೋವನು ತಾನು ಎರಗಬೇಕಾದ ಪ್ರಾಣಿಯ ಮೇಲೆ ಹಾರಾಡುವ ರಣಹದ್ದಿನಂತೆ ಇರುವನು. ಆತನು ಬೊಚ್ರ ನಗರದ ಮೇಲೆ ತನ್ನ ರೆಕ್ಕೆಗಳನ್ನು ಹರಡುವ ರಣಹದ್ದಿನಂತಿದ್ದಾನೆ. ಆ ಸಮಯದಲ್ಲಿ ಎದೋಮಿನ ಸೈನಿಕರು ಭಯಪಡುವರು. ಪ್ರಸವವೇದನೆಪಡುವ ಹೆಂಗಸಿನಂತೆ ಅವರು ಭಯದಿಂದ ಗೋಳಾಡುವರು.


ಯೆಹೋವನು ಹೀಗೆನ್ನುತ್ತಾನೆ: “ನೋಡಿ, ಒಂದು ರಣಹದ್ದು ಆಕಾಶದಿಂದ ಎರಗುತ್ತಿದೆ. ಅದು ಮೋವಾಬಿನ ಮೇಲೆ ತನ್ನ ರೆಕ್ಕೆಗಳನ್ನು ಹರಡುತ್ತಿದೆ.


“ಯೆಹೋವನಾಲಯದ ಕಾವಲುಗಾರನಂತೆ ತುತ್ತೂರಿಯನ್ನು ನಿನ್ನ ತುಟಿಗಳಲ್ಲಿಟ್ಟು ಊದು. ಇಸ್ರೇಲರು ನನ್ನ ಕಟ್ಟಳೆಗಳಿಗೆ ಅವಿಧೇಯರಾಗಿ ನನ್ನ ಒಡಂಬಡಿಕೆಯನ್ನು ಮುರಿದಿದ್ದಾರೆ.


ಅವರಿಗೆ ಹೀಗೆ ಹೇಳು, ದೇವರಾದ ಯೆಹೋವನು ಹೀಗೆನ್ನುತ್ತಾನೆ: “‘ಅಗಲವಾದ ರೆಕ್ಕೆಗಳುಳ್ಳ ದೊಡ್ಡ ಹದ್ದು (ಬಾಬಿಲೋನಿನ ರಾಜನಾದ ನೆಬೂಕದ್ನೆಚ್ಚರನು) ಲೆಬನೋನಿಗೆ ಬಂದಿತು. ಅದರ ರೆಕ್ಕೆಗಳು ಅನೇಕ ಚುಕ್ಕೆಗಳನ್ನು ಹೊಂದಿತ್ತು.


“ದಂಗೆಕೋರರಿಗೆ ಇದನ್ನು ಹೇಳು: ಈ ಸಂಗತಿಗಳ ಅರ್ಥವು ನಿಮಗೆ ಗೊತ್ತಿಲ್ಲವೇ? ಅವರಿಗೆ ಹೇಳು: ಮೊದಲಿನ ಗರುಡ ಪಕ್ಷಿ ಬಾಬಿಲೋನ್ ರಾಜನಾದ ನೆಬೂಕದ್ನೆಚ್ಚರನು. ಅವನು ಜೆರುಸಲೇಮಿಗೆ ಬಂದು ಅದರ ರಾಜನನ್ನೂ ಅದರ ಹಿರಿಯರನ್ನೂ ಬಂಧಿಸಿ, ಅವರನ್ನು ತನ್ನ ರಾಜ್ಯವಾದ ಬಾಬಿಲೋನಿಗೆ ಕೊಂಡೊಯ್ದನು.


ಪವಿತ್ರ ಗ್ರಂಥದಲ್ಲಿ ಈ ರೀತಿ ಬರೆಯಲ್ಪಟ್ಟಿದೆ: “ವಿವಿಧ ಭಾಷೆಗಳನ್ನು ಮಾತಾಡುವವರ ಮೂಲಕವೂ ವಿದೇಶಿಯರ ನಾಲಿಗೆಯ ಮೂಲಕವೂ ನಾನು ಈ ಜನರೊಂದಿಗೆ ಮಾತಾಡುವೆನು; ಆದರೂ ಇವರು ನನಗೆ ವಿಧೇಯರಾಗುವುದಿಲ್ಲ.” ಪ್ರಭುವು ಹೇಳುವುದು ಅದನ್ನೇ.


ಹದ್ದುಗಳು ಎಲ್ಲಿ ಕೂಡಿಬರುತ್ತವೆಯೋ ಅಲ್ಲಿ ಹೆಣವಿರುತ್ತದೆ ಎಂಬುದು ನಿಮಗೆ ಗೊತ್ತೇ ಇದೆ. ಅದೇ ರೀತಿ ನನ್ನ ಬರುವಿಕೆಯೂ ಸ್ಪಷ್ಟವಾಗಿರುವುದು.


ಅರವತ್ತೆರಡು ವಾರಗಳ ತರುವಾಯ ಅಭಿಷಿಕ್ತನ ಕೊಲೆಯಾಗುವುದು. ಅವನು ಇಲ್ಲವಾಗುವನು. ಭವಿಷ್ಯತ್ತಿನ ನಾಯಕನ ಜನರು ನಗರವನ್ನೂ ಪವಿತ್ರಾಲಯವನ್ನೂ ಹಾಳುಮಾಡುವರು. ಆ ಅಂತ್ಯವು ಒಂದು ಪ್ರವಾಹದಂತೆ ಬರುವುದು. ಕೊನೆಯವರೆಗೂ ಯುದ್ಧ ನಡೆಯುವುದು. ಆ ಸ್ಥಳವನ್ನು ಸಂಪೂರ್ಣವಾಗಿ ನಾಶಮಾಡಬೇಕೆಂದು ದೇವರು ಆಜ್ಞಾಪಿಸಿದ್ದಾನೆ.


ಇಗೋ, ಆ ಶತ್ರುವು ಮೇಘಮಾಲೆಯಂತೆ ಬರುತ್ತಿದ್ದಾನೆ. ಅವನ ರಥಗಳು ಬಿರುಗಾಳಿಯಂತೆ ಕಾಣುತ್ತಿವೆ. ಅವನ ಕುದುರೆಗಳು ಹದ್ದುಗಳಿಗಿಂತ ವೇಗವಾಗಿ ಓಡುತ್ತಿವೆ. ಇದು ನಮಗೆ ತುಂಬ ಅಪಾಯಕಾರಿಯಾಗಿದೆ; ನಾವು ಹಾಳಾಗಿಹೋದೆವು.


ಸೈಪ್ರಸ್‌ನ ತೀರಗಳಿಂದ ಹಡಗುಗಳು ಬರುವವು. ಅವರು ಅಶ್ಶೂರ್ಯವನ್ನೂ ಏಬೆರವನ್ನೂ ಸೋಲಿಸುವರು; ಆದರೆ ಅವರು ಸಹ ನಾಶವಾಗುವರು.”


ಭಾಷೆಗಳನ್ನು ಅರ್ಥಮಾಡಿಕೊಳ್ಳಲು ಕಷ್ಟಕರವಾದ ಅಥವಾ ಮಾತಾಡಲು ಕಷ್ಟವಾದ ಅಥವಾ ಪದಗಳನ್ನು ಅರ್ಥಮಾಡಿಕೊಳ್ಳಲು ನಿನಗೆ ಸಾಧ್ಯವಾಗದ ಅನೇಕ ಜನಾಂಗಗಳ ಬಳಿಗೆ ನಾನು ನಿನ್ನನ್ನು ಕಳುಹಿಸುತ್ತಿಲ್ಲ. ಆ ಜನಾಂಗಗಳ ಬಳಿಗೆ ನಾನು ನಿನ್ನನ್ನು ಕಳುಹಿಸಿದರೆ ಅವರು ಖಂಡಿತವಾಗಿಯೂ ಕಿವಿಗೊಡುವರು.


ಆದ್ದರಿಂದ ನಾವು ಕೆಳಗೆ ಹೋಗಿ ಅವರ ಭಾಷೆಯನ್ನು ತಾರುಮಾರು ಮಾಡೋಣ; ಆಗ ಅವರು ಒಬ್ಬರನ್ನೊಬ್ಬರು ಅರ್ಥಮಾಡಿಕೊಳ್ಳುವುದಿಲ್ಲ” ಎಂದು ಹೇಳಿದನು.


ಆತನು ಯೋಸೇಫನನ್ನು ಈಜಿಪ್ಟಿನಿಂದ ಬಿಡಿಸಿಕೊಂಡು ಬಂದಾಗ ಅವನೊಂದಿಗೆ ಈ ಒಡಂಬಡಿಕೆಯನ್ನು ಮಾಡಿಕೊಂಡನು. ಈಜಿಪ್ಟಿನಲ್ಲಿ ನಾವು ಕೇಳಿದ್ದು ನಮಗೆ ಅರ್ಥವಾಗದ ಭಾಷೆಯನ್ನೇ!


ಆಕಾಶದಲ್ಲಿ ಹಾರುವ ಹದ್ದಿನ ರೀತಿ, ಬಂಡೆಯ ಮೇಲೆ ಹರಿದಾಡುವ ಹಾವು, ಸಮುದ್ರದ ಮೇಲೆ ಸಂಚರಿಸುವ ಹಡಗು ಮತ್ತು ಹೆಂಗಸನ್ನು ಪ್ರೇಮಿಸುತ್ತಿರುವ ಗಂಡಸು.


“ಆ ಸಮಯದಲ್ಲಿ ಯೆಹೋವನು ನೊಣಗಳನ್ನು ಕರೆಯುವನು. ಆ ನೊಣಗಳು ಈಗ ಈಜಿಪ್ಟಿನ ನದಿಗಳ ಸಮೀಪದಲ್ಲಿವೆ. ಯೆಹೋವನು ದುಂಬಿಗಳನ್ನು ಕರೆಯುವನು. ಆ ದುಂಬಿಗಳು ಈಗ ಅಶ್ಶೂರ್ ದೇಶದಲ್ಲಿವೆ. ಈ ವೈರಿಗಳು ನಿಮ್ಮ ದೇಶಕ್ಕೆ ಬಂದು


ಆಗ ಪ್ರವಾದಿಯಾದ ಯೆಶಾಯನು ಅರಸನಾದ ಹಿಜ್ಕೀಯನ ಬಳಿಗೆ ಹೋಗಿ, “ನಿನ್ನ ಬಳಿಗೆ ಬಂದವರು ಎಲ್ಲಿಯವರು? ಅವರು ಏನನ್ನು ಹೇಳಿದರು?” ಎಂದು ವಿಚಾರಿಸಿದನು. ಅದಕ್ಕೆ ಹಿಜ್ಕೀಯನು, “ಇವರು ಬಹುದೂರ ದೇಶದಿಂದ ನನ್ನನ್ನು ಸಂಧಿಸಲು ಬಂದಿದ್ದಾರೆ. ಅವರ ದೇಶ ಬಾಬಿಲೋನ್” ಎಂದನು.


ದೇವರು ಮುಂದುವರಿಸುತ್ತಾ, “ಈ ನಗರದೊಳಗಿಂದ ನಿಮ್ಮನ್ನು ಹೊರಡಿಸಿ ನಿಮ್ಮನ್ನು ಪರದೇಶಿಯರಿಗೆ ವಶಪಡಿಸುತ್ತೇನೆ; ಮತ್ತು ನಿಮ್ಮನ್ನು ದಂಡಿಸುತ್ತೇನೆ.


“ಮೊದಲು ಕಾಣಿಸಿದ ಮೃಗವು ಸಿಂಹದ ಹಾಗಿತ್ತು. ಅದಕ್ಕೆ ಹದ್ದಿನಂತೆ ರೆಕ್ಕೆಗಳಿದ್ದವು. ನಾನು ಈ ಮೃಗವನ್ನು ನೋಡುತ್ತಲೇ ಇರಲು ಅದರ ರೆಕ್ಕೆಗಳು ಕೀಳಲ್ಪಟ್ಟವು. ಅದು ನೆಲದಿಂದ ಎತ್ತಲ್ಪಟ್ಟು ಮನುಷ್ಯನ ಹಾಗೆ ಎರಡು ಕಾಲುಗಳ ಮೇಲೆ ನಿಲ್ಲಿಸಲ್ಪಟ್ಟಿತ್ತು. ಅದಕ್ಕೆ ಮನುಷ್ಯನ ಹೃದಯವನ್ನು ಕೊಡಲಾಯಿತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು