ಧರ್ಮೋಪದೇಶಕಾಂಡ 28:50 - ಪರಿಶುದ್ದ ಬೈಬಲ್50 ಅವರು ಮಹಾಕ್ರೂರಿಗಳು. ಅವರು ನಿಮ್ಮಲ್ಲಿರುವ ಮುದುಕರಿಗೆ ಅಥವಾ ಎಳೆಗೂಸುಗಳಿಗೆ ಕರುಣೆ ತೋರಿಸರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201950 ಆ ಜನಾಂಗದವರು ಕ್ರೂರಮುಖವುಳ್ಳವರಾಗಿ ನಿಮ್ಮನ್ನು ವೃದ್ಧರೆಂದು ಮರ್ಯಾದೆ ತೋರಿಸುವುದಿಲ್ಲ ಮತ್ತು ಚಿಕ್ಕವರೆಂದು ಕನಿಕರಿಸುವುದಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)50 ಆ ಜನಾಂಗದವರು ಕ್ರೂರಮುಖವುಳ್ಳವರು; ನೀವು ವೃದ್ಧರೆಂದು ಮರ್ಯಾದೆ ತೋರಿಸುವುದಿಲ್ಲ, ಚಿಕ್ಕವರೆಂದು ಕನಿಕರಿಸುವುದಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)50 ಆ ಜನಾಂಗದವರು ಕ್ರೂರಮುಖವುಳ್ಳವರಾಗಿ ನಿಮ್ಮನ್ನು ವೃದ್ಧರೆಂದು ಮರ್ಯಾದೆ ತೋರಿಸುವದಿಲ್ಲ, ಚಿಕ್ಕವರೆಂದು ಕನಿಕರಿಸುವದಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ50 ಆ ಜನಾಂಗದವರು ಕ್ರೂರಮುಖವುಳ್ಳವರು. ನಿಮ್ಮನ್ನು ವೃದ್ಧರೆಂದು ಮರ್ಯಾದೆ ತೋರಿಸುವದಿಲ್ಲ, ಚಿಕ್ಕವರೆಂದು ದಯೆಯೂ ತೋರಿಸುವುದಿಲ್ಲ. ಅಧ್ಯಾಯವನ್ನು ನೋಡಿ |
ಯೆಹೂದದ ಮತ್ತು ಜೆರುಸಲೇಮಿನ ಜನರನ್ನು ನಾಶಮಾಡಲು ಬಾಬಿಲೋನಿನ ಅರಸನನ್ನು ಕಳುಹಿಸಿದನು. ಬಾಬಿಲೋನಿನ ಅರಸನು ದೇವಾಲಯದೊಳಗಿದ್ದ ಯುವಜನರನ್ನು ಕೊಂದುಹಾಕಿದನು. ಅವನಿಗೆ ಯೆಹೂದದ ಮತ್ತು ಜೆರುಸಲೇಮಿನ ಜನರ ಮೇಲೆ ಕರುಣೆಯೇ ಇರಲಿಲ್ಲ. ಅವನು ಚಿಕ್ಕವರನ್ನೂ ದೊಡ್ಡವರನ್ನೂ ಗಂಡಸರನ್ನೂ ಹೆಂಗಸರನ್ನೂ ಬಿಡದೆ ಸಂಹರಿಸಿದನು. ರೋಗಿಗಳನ್ನೂ ಆರೋಗ್ಯವಂತರನ್ನೂ ಸಂಹರಿಸಿದನು; ಯೆಹೂದದ ಮತ್ತು ಜೆರುಸಲೇಮಿನ ಜನರನ್ನು ಶಿಕ್ಷಿಸಲು ದೇವರು ನೆಬೂಕದ್ನೆಚ್ಚರನನ್ನು ಉಪಯೋಗಿಸಿದನು.
“ನನಗಾದ ರಾತ್ರಿಯ ದರ್ಶನದಲ್ಲಿ ನಾಲ್ಕನೆ ಮೃಗವನ್ನು ಕಂಡೆ. ಅದು ಅತ್ಯಂತ ಬಲಿಷ್ಠವಾಗಿತ್ತು ಮತ್ತು ಭಯಂಕರವಾಗಿತ್ತು. ಅದು ಅತಿ ಶಕ್ತಿಶಾಲಿಯಾಗಿತ್ತು. ಅದಕ್ಕೆ ದೊಡ್ಡದೊಡ್ಡ ಕಬ್ಬಿಣದ ಹಲ್ಲುಗಳಿದ್ದವು. ಈ ಪ್ರಾಣಿಯು ತಾನು ಬೇಟೆಯಾಡಿದ ಪಶುವನ್ನು ತಂಡುತುಂಡು ಮಾಡುತ್ತಾ ತಿನ್ನುತ್ತಿತ್ತು; ಮಿಕ್ಕಿದ್ದನ್ನು ಅದು ತುಳಿಯುತ್ತಿತ್ತು. ಈ ನಾಲ್ಕನೆಯ ಪ್ರಾಣಿಯು ನಾನು ಅದಕ್ಕೂ ಮುಂಚೆ ನೋಡಿದ ಮೃಗಗಳಿಗಿಂತ ಭಿನ್ನವಾಗಿತ್ತು. ಈ ಮೃಗಕ್ಕೆ ಹತ್ತು ಕೊಂಬುಗಳಿದ್ದವು.
ಅವರು ನಿಮ್ಮ ಪಶುಗಳನ್ನು ಅಟ್ಟಿಸಿಕೊಂಡು ಹೋಗುವರು; ನೀವು ಬೆಳೆದ ಬೆಳೆಯನ್ನು ಕೊಂಡೊಯ್ಯುವರು. ನಿಮ್ಮನ್ನು ನಾಶಪಡಿಸುವ ತನಕ ಅವರು ಪ್ರತಿಯೊಂದನ್ನೂ ತೆಗೆದುಕೊಂಡು ಹೋಗುವರು. ಅವರು ನಿಮಗೆ ದವಸಧಾನ್ಯವನ್ನಾಗಲಿ ದ್ರಾಕ್ಷಾರಸವನ್ನಾಗಲಿ ಎಣ್ಣೆಯನ್ನಾಗಲಿ ಹಸುಗಳನ್ನಾಗಲಿ ಕುರಿಗಳನ್ನಾಗಲಿ ಮೇಕೆಗಳನ್ನಾಗಲಿ ಬಿಟ್ಟುಹೋಗುವುದಿಲ್ಲ. ಅವರು ನಿಮ್ಮನ್ನು ನಾಶಪಡಿಸುವ ತನಕ ಪ್ರತಿಯೊಂದನ್ನೂ ತೆಗೆದುಕೊಂಡು ಹೋಗುವರು.
“‘ಇದಾದ ಮೇಲೆ ನಾನು ಯೆಹೂದದ ರಾಜನಾದ ಚಿದ್ಕೀಯನನ್ನು ಮತ್ತು ಅಧಿಪತಿಗಳನ್ನು ಬಾಬಿಲೋನಿನ ರಾಜನಾದ ನೆಬೂಕದ್ನೆಚ್ಚರನಿಗೆ ಒಪ್ಪಿಸುತ್ತೇನೆ. ಜೆರುಸಲೇಮಿನ ಕೆಲವು ಜನರು ಭಯಂಕರವಾದ ರೋಗದಿಂದ ಸಾಯುವುದಿಲ್ಲ; ಕೆಲವು ಜನರು ಖಡ್ಗಗಳಿಗೆ ಆಹುತಿಯಾಗುವದಿಲ್ಲ; ಕೆಲವರು ಹಸಿವಿನಿಂದ ಸಾಯುವುದಿಲ್ಲ. ಅಂಥವರನ್ನು ನಾನು ನೆಬೂಕದ್ನೆಚ್ಚರನಿಗೆ ಕೊಡುತ್ತೇನೆ. ಯೆಹೂದದ ವೈರಿಯು ಗೆಲ್ಲುವಂತೆ ನಾನು ಮಾಡುತ್ತೇನೆ. ನೆಬೂಕದ್ನೆಚ್ಚರನ ಸೈನಿಕರು ಯೆಹೂದ್ಯರನ್ನು ಕೊಲ್ಲಬಯಸುತ್ತಾರೆ. ಆದ್ದರಿಂದ ಯೆಹೂದ ಮತ್ತು ಜೆರುಸಲೇಮಿನ ಜನರು ಖಡ್ಗಗಳಿಗೆ ಬಲಿಯಾಗುವರು. ನೆಬೂಕದ್ನೆಚ್ಚರನು ಸ್ವಲ್ಪವೂ ದಯೆ ತೋರುವದಿಲ್ಲ. ಆ ಜನರ ಸಲುವಾಗಿ ಅವನು ಮರುಗುವದಿಲ್ಲ.’