Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಧರ್ಮೋಪದೇಶಕಾಂಡ 28:51 - ಪರಿಶುದ್ದ ಬೈಬಲ್‌

51 ಅವರು ನಿಮ್ಮ ಪಶುಗಳನ್ನು ಅಟ್ಟಿಸಿಕೊಂಡು ಹೋಗುವರು; ನೀವು ಬೆಳೆದ ಬೆಳೆಯನ್ನು ಕೊಂಡೊಯ್ಯುವರು. ನಿಮ್ಮನ್ನು ನಾಶಪಡಿಸುವ ತನಕ ಅವರು ಪ್ರತಿಯೊಂದನ್ನೂ ತೆಗೆದುಕೊಂಡು ಹೋಗುವರು. ಅವರು ನಿಮಗೆ ದವಸಧಾನ್ಯವನ್ನಾಗಲಿ ದ್ರಾಕ್ಷಾರಸವನ್ನಾಗಲಿ ಎಣ್ಣೆಯನ್ನಾಗಲಿ ಹಸುಗಳನ್ನಾಗಲಿ ಕುರಿಗಳನ್ನಾಗಲಿ ಮೇಕೆಗಳನ್ನಾಗಲಿ ಬಿಟ್ಟುಹೋಗುವುದಿಲ್ಲ. ಅವರು ನಿಮ್ಮನ್ನು ನಾಶಪಡಿಸುವ ತನಕ ಪ್ರತಿಯೊಂದನ್ನೂ ತೆಗೆದುಕೊಂಡು ಹೋಗುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

51 ಅವರು ನಿಮ್ಮ ದನಗಳನ್ನೂ ಮತ್ತು ಬೆಳೆಗಳನ್ನೂ ತಿಂದುಬಿಟ್ಟು ನಿಮಗೆ ಧಾನ್ಯವನ್ನಾಗಲಿ, ದ್ರಾಕ್ಷಾರಸವನ್ನಾಗಲಿ, ಎಣ್ಣೆಯನ್ನಾಗಲಿ, ದನ ಮತ್ತು ಕುರಿಗಳ ಸಂತಾನವನ್ನಾಗಲಿ ಉಳಿಸದೆ ನಿಮ್ಮನ್ನು ಸಂಪೂರ್ಣವಾಗಿ ನಾಶಮಾಡುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

51 ಅವರು ನಿಮ್ಮ ದನಗಳನ್ನೂ ಬೆಳೆಗಳನ್ನೂ ತಿಂದುಬಿಡುವರು. ನಿಮಗೆ ಧಾನ್ಯವನ್ನಾಗಲಿ, ದ್ರಾಕ್ಷಾರಸವನ್ನಾಗಲಿ, ಎಣ್ಣೆಯನ್ನಾಗಲಿ, ದನಕುರಿಗಳ ಸಂತಾನವನ್ನಾಗಲಿ, ಉಳಿಸದೆ ನಿಮ್ಮನ್ನು ಸಂಪೂರ್ಣವಾಗಿ ನಾಶಮಾಡುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

51 ಅವರು ನಿಮ್ಮ ದನಗಳನ್ನೂ ಬೆಳೆಗಳನ್ನೂ ತಿಂದುಬಿಟ್ಟು ನಿಮಗೆ ಧಾನ್ಯವನ್ನಾಗಲಿ ದ್ರಾಕ್ಷಾರಸವನ್ನಾಗಲಿ ಎಣ್ಣೆಯನ್ನಾಗಲಿ ದನಕುರಿಗಳ ಸಂತಾನವನ್ನಾಗಲಿ ಉಳಿಸದೆ ನಿಮ್ಮನ್ನು ಸಂಪೂರ್ಣವಾಗಿ ನಾಶಮಾಡುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

51 ಅವರು ನಿಮ್ಮ ಪಶುಗಳ ಫಲವನ್ನೂ ನಿಮ್ಮ ಭೂಮಿಯ ಫಲವನ್ನೂ ನೀವು ನಾಶವಾಗುವವರೆಗೆ ತಿಂದುಬಿಡುವರು. ಅವರು ಧಾನ್ಯವನ್ನೂ, ಹೊಸ ದ್ರಾಕ್ಷಾರಸವನ್ನೂ, ಓಲಿವ್ ಎಣ್ಣೆಯನ್ನೂ, ಪಶುಗಳ ಅಭಿವೃದ್ಧಿಯನ್ನೂ, ಕುರಿಗಳ ಮಂದೆಗಳನ್ನೂ ಉಳಿಸದೆ ನಿಮ್ಮನ್ನು ಸಂಪೂರ್ಣವಾಗಿ ನಾಶಮಾಡುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಧರ್ಮೋಪದೇಶಕಾಂಡ 28:51
13 ತಿಳಿವುಗಳ ಹೋಲಿಕೆ  

“ನೀವು ಅರಿಯದಿರುವ ದೇಶದವರು ಬಂದು ನಿಮ್ಮ ಪೈರನ್ನು ಕೊಯ್ದುಕೊಂಡು ಹೋಗುವರು; ನೀವು ದುಡಿದು ಸಂಪಾದಿಸಿದವುಗಳನ್ನು ಎತ್ತಿಕೊಂಡು ಹೋಗುವರು. ಜನರು ನಿಮ್ಮನ್ನು ಕುಗ್ಗಿಸಿ ಬಲಹೀನರನ್ನಾಗಿ ಮಾಡುವರು.


ಯೆಹೋವನು ವಾಗ್ದಾನವನ್ನು ಮಾಡಿರುತ್ತಾನೆ. ಆತನ ಸ್ವಂತ ಹೆಸರೇ ಅದಕ್ಕೆ ಸಾಕ್ಷಿಯಾಗಿದೆ. ಆತನು ತನ್ನ ಸಾಮರ್ಥ್ಯದಿಂದ ವಾಗ್ದಾನವನ್ನು ನೆರವೇರಿಸುವನು. ಯೆಹೋವನು ಹೇಳಿದ್ದೇನೆಂದರೆ, “ನಿನ್ನ ಆಹಾರವನ್ನು ನಾನು ನಿನ್ನ ವೈರಿಗಳಿಗೆ ಮತ್ತೆ ಕೊಡುವದಿಲ್ಲವೆಂದು ವಾಗ್ದಾನ ಮಾಡುತ್ತೇನೆ. ನೀನು ತಯಾರಿಸುವ ದ್ರಾಕ್ಷಾರಸವನ್ನು ಇನ್ನು ಮುಂದೆ ನಿನ್ನ ವೈರಿಗಳು ಸೇವಿಸುವದಿಲ್ಲವೆಂದು ನಾನು ವಾಗ್ದಾನ ಮಾಡುತ್ತೇನೆ.


ಇದನ್ನು ನೀನು ಸಾಮಾನ್ಯ ಜನರಿಗೆ ತಿಳಿಸಬೇಕು. ನೀನು ಹೀಗೆ ಹೇಳಬೇಕು, ‘ಇನ್ನೂ ಇಸ್ರೇಲ್ ದೇಶದಲ್ಲಿರುವ ಜೆರುಸಲೇಮಿನ ನಿವಾಸಿಗಳ ಬಗ್ಗೆ ನಮ್ಮ ಒಡೆಯನಾದ ಯೆಹೋವನು ಹೀಗೆನ್ನುತ್ತಾನೆ: ಅವರು ಊಟಮಾಡುವಾಗ ಉದ್ವೇಗದಿಂದಿರುವರು; ಅವರು ಕುಡಿಯುವಾಗ ಭಯದಿಂದಿರುವರು. ಯಾಕೆಂದರೆ ಅವರ ದೇಶದಲ್ಲಿರುವ ಸಮಸ್ತವು ನಾಶವಾಗುತ್ತದೆ, ಯಾಕೆಂದರೆ ಅಲ್ಲಿ ವಾಸಿಸುವವರೆಲ್ಲರೂ ಹಿಂಸಕರಾಗಿದ್ದಾರೆ.


ಅವರು ಆ ವಸ್ತುಗಳನ್ನು ಬೆಟ್ಟಗಳ ಮೇಲೆಯೂ ಬಯಲು ಪ್ರದೇಶದಲ್ಲಿಯೂ ಜ್ಞಾಪಿಸಿಕೊಳ್ಳುವರು. ಯೆಹೂದದ ಜನರಲ್ಲಿ ಭಂಡಾರಗಳಿವೆ. ನಾನು ಅವುಗಳನ್ನು ಬೇರೆಯವರಿಗೆ ಒಪ್ಪಿಸುತ್ತೇನೆ. ನಿಮ್ಮ ದೇಶದಲ್ಲಿದ್ದ ಎಲ್ಲಾ ಉನ್ನತಸ್ಥಳಗಳನ್ನು ಜನರು ನಾಶಮಾಡುವರು. ಆ ಸ್ಥಳಗಳಲ್ಲಿ ಪೂಜೆಮಾಡಿ ನೀವು ಪಾಪಕ್ಕೆ ಗುರಿಯಾಗಿರುವಿರಿ.


ಯೆಹೂದದ ಜನರಲ್ಲಿ ಅನೇಕ ಭಂಡಾರಗಳಿವೆ. ಆ ಭಂಡಾರಗಳನ್ನು ನಾನು ಬೇರೆಯವರಿಗೆ ಒಪ್ಪಿಸುತ್ತೇನೆ. ಬೇರೆಯವರು ಆ ಭಂಡಾರಗಳನ್ನು ಹಣ ಕೊಟ್ಟು ತೆಗೆದುಕೊಳ್ಳಬೇಕಾಗಿಲ್ಲ. ನಾನು ಅವರಿಗೆ ಅವುಗಳನ್ನು ಉಚಿತವಾಗಿ ಕೊಟ್ಟುಬಿಡುತ್ತೇನೆ. ಏಕೆಂದರೆ ಯೆಹೂದವು ಅನೇಕ ಪಾಪಗಳನ್ನು ಮಾಡಿದೆ. ದೇಶದ ಪ್ರತಿಯೊಂದು ಭಾಗದಲ್ಲಿಯೂ ಯೆಹೂದ ಪಾಪಮಾಡಿದೆ.


ನಿಮ್ಮ ದೇಶವು ಹಾಳಾಗಿದೆ; ನಿಮ್ಮ ನಗರಗಳು ಬೆಂಕಿಯಿಂದ ಸುಡಲ್ಪಟ್ಟಿವೆ. ನಿಮ್ಮ ಶತ್ರುಗಳು ನಿಮ್ಮ ದೇಶವನ್ನು ವಶಪಡಿಸಿಕೊಂಡಿದ್ದಾರೆ; ಅನ್ಯದೇಶವು ಶತ್ರುಸೈನ್ಯದಿಂದ ಹಾಳಾಗುವಂತೆಯೇ, ನಿಮ್ಮ ದೇಶವೂ ಹಾಳಾಗಿದೆ.


ನಿಮಗೆ ರೊಟ್ಟಿ ದಯಪಾಲಿಸುವುದನ್ನು ನಾನು ನಿಲ್ಲಿಸಿದಾಗ, ಹತ್ತು ಮಂದಿ ಸ್ತ್ರೀಯರು ತಮ್ಮಲ್ಲಿರುವ ಎಲ್ಲಾ ರೊಟ್ಟಿಗಳನ್ನು ಒಂದೇ ಒಲೆಯಲ್ಲಿ ಸುಡುವರು. ಅವರು ಪ್ರತಿ ರೊಟ್ಟಿಯ ತುಂಡನ್ನು ತೂಕ ಮಾಡಿ ಹಂಚಿಕೊಳ್ಳುವರು. ನೀವು ತಿಂದರೂ ಹಸಿದವರಾಗಿಯೇ ಇರುವಿರಿ.


ಅವರು ಮಹಾಕ್ರೂರಿಗಳು. ಅವರು ನಿಮ್ಮಲ್ಲಿರುವ ಮುದುಕರಿಗೆ ಅಥವಾ ಎಳೆಗೂಸುಗಳಿಗೆ ಕರುಣೆ ತೋರಿಸರು.


“ಆ ವೈರಿಗಳು ನಿಮ್ಮ ಪಟ್ಟಣಗಳನ್ನೆಲ್ಲಾ ಮುತ್ತಿ ವಶಪಡಿಸಿಕೊಳ್ಳುವರು. ಆ ಪಟ್ಟಣಗಳಿಗೆ ಎತ್ತರದ ಪೌಳಿಗೋಡೆಗಳಿವೆ. ಆದ್ದರಿಂದ ನಮಗೆ ಭಯವಿಲ್ಲವೆಂದು ನೀವು ಭರವಸೆಯಿಂದಿರುವಿರಿ. ಆದರೆ ಅವರು ಪೌಳಿಗೋಡೆಗಳನ್ನು ಕೆಡವಿ ನೆಲಸಮ ಮಾಡುವರು. ದೇವರಾದ ಯೆಹೋವನು ನಿಮಗೆ ಕೊಟ್ಟಿರುವ ಪಟ್ಟಣಗಳಲ್ಲೆಲ್ಲಾ ತೊಂದರೆ ಮಾಡುವರು.


ಅದಕ್ಕಾಗಿ ನಾನು ನಿಮ್ಮನ್ನು ಪೂರ್ವದ ಜನರಿಗೆ ಬಿಟ್ಟುಕೊಡುವೆನು. ಅವರು ಬಂದು ನಿಮ್ಮ ದೇಶವನ್ನು ಕಿತ್ತುಕೊಳ್ಳುವರು. ಅವರ ಸೈನ್ಯವು ಬಂದು ನಿಮ್ಮ ದೇಶದೊಳಗೆ ಪಾಳೆಯ ಮಾಡುವದು. ಅವರು ನಿಮ್ಮ ಮಧ್ಯದಲ್ಲಿ ವಾಸಿಸಿ ನಿಮ್ಮ ಹಣ್ಣುಗಳನ್ನು ತಿಂದು ನಿಮ್ಮ ಹಾಲನ್ನು ಕುಡಿಯುವರು.


ನಂತರ ನೆಬೂಜರದಾನನೊಂದಿಗಿದ್ದ ಬಾಬಿಲೋನ್ ಸೈನ್ಯವು ಜೆರುಸಲೇಮಿನ ಸುತ್ತಲೂ ಇದ್ದ ಗೋಡೆಯನ್ನು ಕೆಡವಿಹಾಕಿತು.


ಬರಗಾಲದ ನಿಮಿತ್ತ ಸತ್ತವರಿಗಿಂತಲೂ ಖಡ್ಗಗಳಿಂದ ಹತರಾದವರ ಸಾವೇ ಮೇಲಾಗಿತ್ತು. ಹಸಿವೆಯಿಂದಿದ್ದ ಜನರು ನೋವಿನಿಂದ ನರಳಾಡಿದರು. ಭೂಮಿಯಿಂದ ಆಹಾರವನ್ನು ಪಡೆಯಲಾಗದೆ ಅವರು ಸತ್ತುಹೋದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು