ಧರ್ಮೋಪದೇಶಕಾಂಡ 28:52 - ಪರಿಶುದ್ದ ಬೈಬಲ್52 “ಆ ವೈರಿಗಳು ನಿಮ್ಮ ಪಟ್ಟಣಗಳನ್ನೆಲ್ಲಾ ಮುತ್ತಿ ವಶಪಡಿಸಿಕೊಳ್ಳುವರು. ಆ ಪಟ್ಟಣಗಳಿಗೆ ಎತ್ತರದ ಪೌಳಿಗೋಡೆಗಳಿವೆ. ಆದ್ದರಿಂದ ನಮಗೆ ಭಯವಿಲ್ಲವೆಂದು ನೀವು ಭರವಸೆಯಿಂದಿರುವಿರಿ. ಆದರೆ ಅವರು ಪೌಳಿಗೋಡೆಗಳನ್ನು ಕೆಡವಿ ನೆಲಸಮ ಮಾಡುವರು. ದೇವರಾದ ಯೆಹೋವನು ನಿಮಗೆ ಕೊಟ್ಟಿರುವ ಪಟ್ಟಣಗಳಲ್ಲೆಲ್ಲಾ ತೊಂದರೆ ಮಾಡುವರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201952 ನಿಮ್ಮ ದೇವರಾದ ಯೆಹೋವನು ನಿಮಗೆ ಕೊಟ್ಟಿರುವ ದೇಶದ ಎಲ್ಲಾ ಪಟ್ಟಣಗಳಿಗೂ ಅವರು ಮುತ್ತಿಗೆಹಾಕಿ, ನೀವು ನಂಬಿಕೊಂಡಿದ್ದ ಎತ್ತರವಾದ ಕೊತ್ತಲುಗಳುಳ್ಳ ಗೋಡೆಗಳನ್ನು ಕೆಡವಿಬಿಡುವರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)52 ನಿಮ್ಮ ದೇವರಾದ ಸರ್ವೇಶ್ವರ ನಿಮಗೆ ಕೊಟ್ಟಿರುವ ನಾಡಿನ ಪಟ್ಟಣಗಳಿಗೆಲ್ಲಾ ಅವರು ಮುತ್ತಿಗೆ ಹಾಕುವರು; ನೀವು ನೆಚ್ಚಿಕೊಳ್ಳುವ ಎತ್ತರವಾದ ಕೊತ್ತಲುಗಳುಳ್ಳ ಗೋಡೆಗಳನ್ನು ಕೆಡವಿಬಿಡುವರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)52 ನಿಮ್ಮ ದೇವರಾದ ಯೆಹೋವನು ನಿಮಗೆ ಕೊಟ್ಟಿರುವ ದೇಶದ ಎಲ್ಲಾ ಪಟ್ಟಣಗಳಿಗೂ ಅವರು ಮುತ್ತಿಗೆಹಾಕಿ ನೀವು ನಂಬಿಕೊಂಡಿದ್ದ ಎತ್ತರವಾದ ಕೊತ್ತಲುಗಳುಳ್ಳ ಗೋಡೆಗಳನ್ನು ಕೆಡವಿಬಿಡುವರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ52 ನಿಮ್ಮ ದೇವರಾದ ಯೆಹೋವ ದೇವರು ನಿಮಗೆ ಕೊಟ್ಟ ನಿಮ್ಮ ದೇಶದಲ್ಲೆಲ್ಲಾ ನಿಮ್ಮ ಎಲ್ಲಾ ಊರುಗಳಲ್ಲಿ ನಿಮಗೆ ಮುತ್ತಿಗೆ ಹಾಕುವರು. ನೀವು ನಂಬಿಕೊಂಡಿರುವ ಉದ್ದವಾದ ಮತ್ತು ಭದ್ರವಾದ ನಿಮ್ಮ ಗೋಡೆಗಳನ್ನು ಕೆಡವಿಬಿಡುವರು. ಅಧ್ಯಾಯವನ್ನು ನೋಡಿ |
ಯೆಹೋವನು ವಾಗ್ದಾನವನ್ನು ಮಾಡಿರುತ್ತಾನೆ. ಆತನ ಸ್ವಂತ ಹೆಸರೇ ಅದಕ್ಕೆ ಸಾಕ್ಷಿಯಾಗಿದೆ. ಆತನು ತನ್ನ ಸಾಮರ್ಥ್ಯದಿಂದ ವಾಗ್ದಾನವನ್ನು ನೆರವೇರಿಸುವನು. ಯೆಹೋವನು ಹೇಳಿದ್ದೇನೆಂದರೆ, “ನಿನ್ನ ಆಹಾರವನ್ನು ನಾನು ನಿನ್ನ ವೈರಿಗಳಿಗೆ ಮತ್ತೆ ಕೊಡುವದಿಲ್ಲವೆಂದು ವಾಗ್ದಾನ ಮಾಡುತ್ತೇನೆ. ನೀನು ತಯಾರಿಸುವ ದ್ರಾಕ್ಷಾರಸವನ್ನು ಇನ್ನು ಮುಂದೆ ನಿನ್ನ ವೈರಿಗಳು ಸೇವಿಸುವದಿಲ್ಲವೆಂದು ನಾನು ವಾಗ್ದಾನ ಮಾಡುತ್ತೇನೆ.
ಅವರು ನಿಮ್ಮ ಪಶುಗಳನ್ನು ಅಟ್ಟಿಸಿಕೊಂಡು ಹೋಗುವರು; ನೀವು ಬೆಳೆದ ಬೆಳೆಯನ್ನು ಕೊಂಡೊಯ್ಯುವರು. ನಿಮ್ಮನ್ನು ನಾಶಪಡಿಸುವ ತನಕ ಅವರು ಪ್ರತಿಯೊಂದನ್ನೂ ತೆಗೆದುಕೊಂಡು ಹೋಗುವರು. ಅವರು ನಿಮಗೆ ದವಸಧಾನ್ಯವನ್ನಾಗಲಿ ದ್ರಾಕ್ಷಾರಸವನ್ನಾಗಲಿ ಎಣ್ಣೆಯನ್ನಾಗಲಿ ಹಸುಗಳನ್ನಾಗಲಿ ಕುರಿಗಳನ್ನಾಗಲಿ ಮೇಕೆಗಳನ್ನಾಗಲಿ ಬಿಟ್ಟುಹೋಗುವುದಿಲ್ಲ. ಅವರು ನಿಮ್ಮನ್ನು ನಾಶಪಡಿಸುವ ತನಕ ಪ್ರತಿಯೊಂದನ್ನೂ ತೆಗೆದುಕೊಂಡು ಹೋಗುವರು.