Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಧರ್ಮೋಪದೇಶಕಾಂಡ 28:57 - ಪರಿಶುದ್ದ ಬೈಬಲ್‌

57 ಅವಳು ಅಡಗಿಕೊಂಡು ಮಗುವನ್ನು ಹೆರುವಳು. ಬಳಿಕ ಆ ಮಗುವನ್ನೂ ಅದರೊಡನೆ ಬರುವುದೆಲ್ಲವನ್ನೂ ಭಯಂಕರವಾದ ಹಸಿವೆಯಿಂದಾಗಿ ತಿಂದುಬಿಡುವಳು. ನಿಮ್ಮ ಶತ್ರುವು ಬಂದು ನಿಮ್ಮ ಪಟ್ಟಣಗಳಿಗೆ ಮುತ್ತಿಗೆ ಹಾಕಿ ನಿಮ್ಮನ್ನು ಸಂಕಟಕ್ಕೆ ಗುರಿ ಮಾಡಿದಾಗ ಈ ಕೆಟ್ಟ ಸಂಗತಿಗಳೆಲ್ಲಾ ನಿಮಗೆ ಸಂಭವಿಸುತ್ತವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

57 ತಾನು ಆಗಲೇ ಹೆತ್ತ ಮಗುವಿನ ಮಾಂಸವನ್ನೂ ರಹಸ್ಯವಾಗಿ ತಿನ್ನಬೇಕೆಂದು ಯೋಚಿಸಿ, ಪ್ರಾಣಪ್ರಿಯನಾದ ಗಂಡನಿಗೂ, ಮಕ್ಕಳಿಗೂ ತಿಳಿಯದಂತೆ ಆ ಕಾರ್ಯವನ್ನು ಮಾಡುವಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

57 ಅವಳು ಕೊರತೆಯಲ್ಲಿಯೂ, ಮುತ್ತಿಗೆಯಲ್ಲಿಯೂ, ಶತ್ರು ನಿಮಗೆ ನಿಮ್ಮ ಪಟ್ಟಣಗಳಲ್ಲಿ ಮಾಡುವ ಇಕ್ಕಟ್ಟಿನಲ್ಲಿಯೂ, ತನ್ನ ಮಕ್ಕಳನ್ನು ಗುಪ್ತವಾಗಿ ತಿಂದುಬಿಡುವಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಧರ್ಮೋಪದೇಶಕಾಂಡ 28:57
6 ತಿಳಿವುಗಳ ಹೋಲಿಕೆ  

ಆದರೆ ನಾನು ಹೇಳುವುದೇನೆಂದರೆ, “ಒಬ್ಬ ತಾಯಿಯು ತನ್ನ ಮಗುವನ್ನು ಮರೆತಾಳೇ? ತಾನು ಹೆತ್ತ ಶಿಶುವನ್ನು ತಾಯಿಯು ಮರೆತುಬಿಡುವಳೇ? ಇಲ್ಲ. ಒಂದುವೇಳೆ ತಾಯಿ ತನ್ನ ಮಕ್ಕಳನ್ನು ಮರೆತಾಳು, ಆದರೆ ಯೆಹೋವನಾದ ನಾನು ನಿಮ್ಮನ್ನು ಮರೆಯುವದಿಲ್ಲ.


ರಾಜದಂಡವನ್ನು ಹಿಡಿಯತಕ್ಕವನು ಬರುವ ತನಕ ಯೆಹೂದನು ರಾಜದಂಡವನ್ನು ಹಿಡಿದುಕೊಳ್ಳುವನು. ಅವನ ಸಂತತಿಯವರು ಶಾಶ್ವತವಾಗಿ ಆಳುವರು; ಅನ್ಯಜನಾಂಗಗಳು ಅವನಿಗೆ ಕಪ್ಪಕಾಣಿಕೆಗಳನ್ನು ತಂದು ಅವನಿಗೆ ವಿಧೇಯರಾಗಿರುವರು.


ವೈರಿಗಳು ನಿಮ್ಮ ಪಟ್ಟಣವನ್ನು ಮುತ್ತಿಗೆ ಹಾಕಿದಾಗ ನೀವು ಸಂಕಟ ಅನುಭವಿಸುವಿರಿ. ಆಗ ನೀವು ಊಟಕ್ಕೆ ಇಲ್ಲದೆ ತೊಂದರೆಗೊಳಗಾಗುವಿರಿ; ಹಸಿವು ತಾಳಲಾರದೆ ನಿಮ್ಮ ಮಕ್ಕಳನ್ನೇ ತಿನ್ನುವಿರಿ.


ನಂತರ ಇಸ್ರೇಲಿನ ರಾಜನು ಆ ಸ್ತ್ರೀಗೆ, “ನಿನ್ನ ತೊಂದರೆಯೇನು?” ಎಂದು ಕೇಳಿದನು. ಆ ಸ್ತ್ರೀಯು, “ಇವಳು ನನಗೆ, ‘ನಿನ್ನ ಮಗನನ್ನು ನನಗೆ ಕೊಡು. ನಾವು ಅವನನ್ನು ಕೊಂದು, ಈ ಹೊತ್ತು ತಿನ್ನೋಣ. ನಾಳೆ ನನ್ನ ಮಗನನ್ನು ತಿನ್ನೋಣ’ ಎಂದಳು.


ನಾವು ನನ್ನ ಮಗನನ್ನು ಬೇಯಿಸಿ, ನಾವು ತಿಂದು ಬಿಟ್ಟೆವು. ಮಾರನೆಯ ದಿನ ನಾನು ಈ ಸ್ತ್ರೀಗೆ, ‘ನಿನ್ನ ಮಗನನ್ನು ನಾವು ಕೊಂದು ತಿನ್ನೋಣ’ ಎಂದು ಹೇಳಿದೆನು. ಆದರೆ ಅವಳು ತನ್ನ ಮಗನನ್ನು ಅಡಗಿಸಿಟ್ಟಿದ್ದಾಳೆ!” ಎಂದು ಹೇಳಿದಳು.


ಆ ಸಮಯದಲ್ಲಿ, ಕನಿಕರವುಳ್ಳ ಸ್ತ್ರೀಯರು ಸಹ ತಮ್ಮ ಮಕ್ಕಳನ್ನೇ ಬೇಯಿಸಿ ತಿಂದುಬಿಟ್ಟರು. ಆ ಮಕ್ಕಳು ಅವರ ತಾಯಂದಿರಿಗೇ ಆಹಾರವಾದರು. ನನ್ನ ಜನರು ನಾಶಗೊಂಡಾಗ ಇದು ಸಂಭವಿಸಿತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು