ಧರ್ಮೋಪದೇಶಕಾಂಡ 28:58 - ಪರಿಶುದ್ದ ಬೈಬಲ್58 “ಈ ಪುಸ್ತಕದಲ್ಲಿ ಬರೆದಿರುವ ಎಲ್ಲಾ ಆಜ್ಞೆಗಳಿಗೂ ಉಪದೇಶಗಳಿಗೂ ನೀವು ವಿಧೇಯರಾಗಬೇಕು. ನಿಮ್ಮ ದೇವರಾದ ಯೆಹೋವನು ಅದ್ಭುತನೂ ಭಯಂಕರನೂ ಆಗಿರುವುದರಿಂದ ಆತನ ಹೆಸರನ್ನು ನೀವು ಗೌರವಿಸಬೇಕು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201958 ಈ ಗ್ರಂಥದಲ್ಲಿ ಬರೆದಿರುವ ಧರ್ಮಶಾಸ್ತ್ರವಾಕ್ಯಗಳನ್ನೆಲ್ಲಾ ನೀವು ಅನುಸರಿಸದೆ ನಿಮ್ಮ ದೇವರಾದ ಯೆಹೋವನೆಂಬ ಮಹಾಮಹಿಮೆಯುಳ್ಳ ಅದ್ಭುತ ನಾಮದಲ್ಲಿ ನೀವು ಭಯಭಕ್ತಿಯುಳ್ಳವರಾಗಿ ನಡೆಯದೆ ಹೋದರೆ, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)58 “ಈ ಗ್ರಂಥದಲ್ಲಿ ಬರೆದಿರುವ ಧರ್ಮಶಾಸ್ತ್ರ ವಾಕ್ಯಗಳನ್ನೆಲ್ಲಾ ನೀವು ಅನುಸರಿಸಲೊಲ್ಲದೆ, ನಿಮ್ಮ ದೇವರಾದ ಸರ್ವೇಶ್ವರನೆಂಬ ಮಹಾಮಹಿಮೆಯುಳ್ಳ ಪೂಜ್ಯನಾಮದಲ್ಲಿ ನೀವು ಭಯಭಕ್ತಿಯುಳ್ಳವರಾಗಿರದೇ ಹೋದರೆ ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)58 ಈ ಗ್ರಂಥದಲ್ಲಿ ಬರೆದಿರುವ ಧರ್ಮಶಾಸ್ತ್ರವಾಕ್ಯಗಳನ್ನೆಲ್ಲಾ ನೀವು ಅನುಸರಿಸಲೊಲ್ಲದೆ ನಿಮ್ಮ ದೇವರಾದ ಯೆಹೋವನೆಂಬ ಮಹಾಮಹಿಮೆಯುಳ್ಳ ಭಯಂಕರ ನಾಮದಲ್ಲಿ ನೀವು ಭಯಭಕ್ತಿಯುಳ್ಳವರಾಗಿರದೆ ಹೋದರೆ ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ58 ನಿಮ್ಮ ದೇವರಾದ ಯೆಹೋವ ದೇವರೆಂಬ ಈ ಘನವುಳ್ಳ ಹೆಸರಿಗೆ ನೀವು ಭಯಪಡಬೇಕೆಂದು ಈ ಪುಸ್ತಕದಲ್ಲಿ ಬರೆದಿರುವ ಈ ನಿಯಮದ ಮಾತುಗಳನ್ನು ಅಲಕ್ಷಿಸಿ, ತಪ್ಪು ದಾರಿ ಹಿಡಿದರೆ, ಅಧ್ಯಾಯವನ್ನು ನೋಡಿ |
ನಿಮ್ಮಲ್ಲಿ ಕೆಲವರಲ್ಲಿ ಯಜ್ಞಕ್ಕೆ ಬೇಕಾಗಿರುವ ಒಳ್ಳೆಯ ಗಂಡು ಪಶುಗಳು ಇದ್ದಾಗ್ಯೂ ಅವರು ನನಗೆ ಅವುಗಳನ್ನು ಸಮರ್ಪಿಸುವದಿಲ್ಲ. ಕೆಲವರು ಕಳಂಕವಿಲ್ಲದ ಪಶುಗಳನ್ನು ನನಗೆ ತರುತ್ತಾರೆ. ಅವರು ಅಂಥಾ ಆರೋಗ್ಯಕರ ಪಶುಗಳನ್ನು ನನಗೆ ಸಮರ್ಪಿಸಲು ವಾಗ್ದಾನ ಮಾಡುವರು. ಆದರೆ ಗುಪ್ತವಾಗಿ ಅವರು ಆ ಪಶುವನ್ನು ಬದಲಿಸಿ ನನಗೆ ರೋಗಿಯಾದ ಪಶುಗಳನ್ನು ಕೊಡುತ್ತಾರೆ. ಅವರಿಗೆ ದುರ್ದೆಶೆ ಸಂಭವಿಸಲಿರುವದು. ನಾನು ದೊಡ್ಡ ಅರಸನು. ನೀವು ನನ್ನನ್ನು ಗೌರವಿಸಬೇಕು. ಭೂಲೋಕದ ಸರ್ವಜನರು ನನ್ನನ್ನು ಸನ್ಮಾನಿಸುವರು.” ಇವು ಸರ್ವಶಕ್ತನಾದ ಯೆಹೋವನ ನುಡಿಗಳು.
ಆ ಬಳಿಕ, ಲೇವಿಯರಾದ ಯೇಷೂವ, ಕದ್ಮೀಯೇಲ್, ಬಾನೀ, ಹಷಬ್ನೆಯ, ಶೇರೇಬ್ಯ, ಹೋದೀಯ, ಶೆಬನ್ಯ ಮತ್ತು ಪೆತಹ್ಯ ಎಂಬವರು, “ಎದ್ದುನಿಂತುಕೊಂಡು ನಿಮ್ಮ ದೇವರಾದ ಯೆಹೋವನನ್ನು ಸ್ತುತಿಸಿರಿ” ಎಂದು ಹೇಳಿದರು. “ದೇವರು ಯಾವಾಗಲೂ ಇದ್ದಾತನಾಗಿದ್ದಾನೆ ಮತ್ತು ಯಾವಾಗಲೂ ಇರುವಾತನಾಗಿದ್ದಾನೆ. ನಿನ್ನ ಮಹಿಮಾಪೂರ್ಣವಾದ ಹೆಸರನ್ನು ಜನರು ಕೊಂಡಾಡಲಿ; ನಿನ್ನ ಹೆಸರು ಎಲ್ಲಾ ಸ್ತುತಿಕೀರ್ತನೆಗಳಿಗೆ ಮಿಗಿಲಾಗಿ ಎತ್ತಲ್ಪಡಲಿ.
ನೀವು ನನಗೆ ಅಂಜುವುದಿಲ್ಲವೇ?” ಇದು ಯೆಹೋವನ ಸಂದೇಶ: “ನೀವು ನನ್ನ ಎದುರಿಗೆ ಭಯದಿಂದ ನಡುಗುವುದಿಲ್ಲವೇ? ಸಾಗರಗಳಿಗೆ ಗಡಿಯಂತೆ ದಡವನ್ನು ನಿರ್ಮಿಸಿದವನು ನಾನೇ. ಸಮುದ್ರವು ನಿರಂತರವಾಗಿ ತನ್ನ ಸೀಮೆಯಲ್ಲಿಯೇ ಹರಿಯಬೇಕೆಂದು ಹಾಗೆ ಮಾಡಿದೆ. ತೆರೆಗಳು ದಡವನ್ನು ಅಪ್ಪಳಿಸಬಹುದು ಆದರೆ ಅವುಗಳು ಅದನ್ನು ನಾಶಮಾಡಲಾರವು. ತೆರೆಗಳು ಬರುವಾಗ ಭೋರ್ಗರೆಯಬಹುದು, ಆದರೆ ದಡವನ್ನು ದಾಟಿಹೋಗಲಾರವು.