Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಧರ್ಮೋಪದೇಶಕಾಂಡ 28:6 - ಪರಿಶುದ್ದ ಬೈಬಲ್‌

6 ನೀವು ಮಾಡುವ ಎಲ್ಲಾ ಕಾರ್ಯಗಳಲ್ಲಿ ಸಫಲ ಹೊಂದುವಂತೆ ಆಶೀರ್ವದಿಸುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ನೀವು ಹೊರಗೆ ಹೋಗುವಾಗಲೂ ಒಳಗೆ ಬರುವಾಗಲೂ ಶುಭವುಂಟಾಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

6 ನೀವು ಕೆಲಸಕ್ಕೆ ಹೋಗುವಾಗಲೂ ಬರುವಾಗಲೂ ಶುಭವುಂಟಾಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

6 ನೀವು ಕೆಲಸಕ್ಕೆ ಹೋಗುವಾಗಲೂ ಬರುವಾಗಲೂ ಶುಭವುಂಟಾಗುವದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

6 ನೀವು ಕೆಲಸಕ್ಕೆ ಹೊರಡುವಾಗಲೂ ನಿಮಗೆ ಆಶೀರ್ವಾದ, ಬರುವಾಗಲೂ ನಿಮಗೆ ಆಶೀರ್ವಾದ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಧರ್ಮೋಪದೇಶಕಾಂಡ 28:6
9 ತಿಳಿವುಗಳ ಹೋಲಿಕೆ  

ನೀನು ಹೋಗುವಾಗಲೂ ಬರುವಾಗಲೂ ಯೆಹೋವನು ನಿನಗೆ ಸಹಾಯಮಾಡುವನು. ಆತನು ನಿನ್ನನ್ನು ಸದಾಕಾಲ ಕಾಪಾಡುವನು.


ಈ ಜನರನ್ನು ಸರಿಯಾದ ರೀತಿಯಲ್ಲಿ ಆಳುವ ಹಾಗೆ ನನಗೆ ಜ್ಞಾನವನ್ನೂ ವಿವೇಕವನ್ನೂ ದಯಪಾಲಿಸು. ನಿನ್ನ ಸಹಾಯವಿಲ್ಲದೆ ಈ ನಿನ್ನ ಜನರನ್ನು ಆಳಲು ಯಾರಿಗೂ ಸಾಧ್ಯವಿಲ್ಲ” ಎಂದು ಹೇಳಿದನು.


ಅವನು ಅವರನ್ನು ಯುದ್ಧದಲ್ಲಿ ಮುನ್ನಡೆಸುವವನೂ ಸೈನ್ಯದ ಯೋಜನೆಗಳನ್ನು ರೂಪಿಸುವವನೂ ಆಗಿರಲಿ. ಆಗ ಯೆಹೋವನ ಸಮೂಹವು ಕುರುಬನಿಲ್ಲದ ಕುರಿಯಂತಾಗುವುದಿಲ್ಲ.”


ಅಬ್ನೇರನು ನೇರನ ಮಗನೆಂಬುದು ನಿನಗೆ ತಿಳಿದಿದೆ. ಅವನು ನಿನ್ನನ್ನು ವಂಚಿಸಲು ಬಂದಿದ್ದನು. ನೀನು ಮಾಡುತ್ತಿರುವುದನ್ನೆಲ್ಲಾ ತಿಳಿದುಕೊಳ್ಳಲು ಅವನು ಬಂದಿದ್ದನು” ಎಂದು ಹೇಳಿದನು.


“ನಾನು ಈಗ ನೂರಿಪ್ಪತ್ತು ವರ್ಷದವನಾಗಿದ್ದೇನೆ. ನನಗೆ ನಿಮ್ಮನ್ನು ಇನ್ನೂ ನಡೆಸಲು ಸಾಧ್ಯವಿಲ್ಲ. ಯೆಹೋವನು, ‘ನೀನು ಜೋರ್ಡನ್ ಹೊಳೆಯನ್ನು ದಾಟಕೂಡದು’ ಎಂದು ಹೇಳಿರುತ್ತಾನೆ.


ಯೆಹೋವನು ನಿಮ್ಮ ಪುಟ್ಟಿಗಳನ್ನೂ ಪಾತ್ರೆಗಳನ್ನೂ ಆಶೀರ್ವದಿಸಿ ಅವು ಯಾವಾಗಲೂ ಆಹಾರಪದಾರ್ಥಗಳಿಂದ ತುಂಬಿರುವಂತೆ ಮಾಡುವನು.


“ವೈರಿಗಳು ನಿಮ್ಮೆದುರಾಗಿ ಯುದ್ಧಮಾಡಲು ಬಂದಾಗ ನಿಮಗೆ ಆತನು ಸಹಾಯ ಮಾಡುವನು. ವೈರಿಗಳು ಒಂದು ದಿಕ್ಕಿನಿಂದ ಬಂದರೆ ಏಳು ದಾರಿಯಲ್ಲಿ ಪಲಾಯನ ಮಾಡುವರು.


ನೀವು ಎಲ್ಲಾ ಸಮಯಗಳಲ್ಲಿ ಮಾಡುವ ಎಲ್ಲಾ ಕೆಲಸಕಾರ್ಯಗಳನ್ನು ನಿಮ್ಮ ದೇವರಾದ ಯೆಹೋವನು ಶಪಿಸುವನು.


ಅದಕ್ಕೆ ದೇವರು ಬಿಳಾಮನಿಗೆ, “ನೀನು ಅವರ ಜೊತೆಯಲ್ಲಿ ಹೋಗಬಾರದು, ಆ ಜನರಿಗೆ ಶಾಪಕೊಡಬಾರದು. ನಾನು ಅವರನ್ನು ಆಶೀರ್ವದಿಸಿದ್ದೇನೆ” ಎಂದು ಹೇಳಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು