ಧರ್ಮೋಪದೇಶಕಾಂಡ 28:62 - ಪರಿಶುದ್ದ ಬೈಬಲ್62 ನೀವು ಆಕಾಶದ ನಕ್ಷತ್ರದಷ್ಟು ಅಸಂಖ್ಯಾತರಾಗಿದ್ದರೂ ನಿಮ್ಮಲ್ಲಿ ಕೆಲವರೇ ಉಳಿದುಕೊಳ್ಳುವರು. ಯಾಕೆಂದರೆ ನೀವು ನಿಮ್ಮ ದೇವರಾದ ಯೆಹೋವನಿಗೆ ಕಿವಿಗೊಡಲಿಲ್ಲ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201962 ನಕ್ಷತ್ರಗಳಷ್ಟು ಅಸಂಖ್ಯರಾಗಿರುವ ನೀವು ನಿಮ್ಮ ದೇವರಾದ ಯೆಹೋವನ ಮಾತಿನಲ್ಲಿ ಲಕ್ಷ್ಯವಿಡದೆ ಹೋಗುವುದರಿಂದ ಸ್ವಲ್ಪ ಜನರಾಗಿಯೇ ಉಳಿಯುವಿರಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)62 ನಕ್ಷತ್ರಗಳಷ್ಟು ಅಸಂಖ್ಯರಾಗಿರುವ ನೀವು, ನಿಮ್ಮ ದೇವರಾದ ಸರ್ವೇಶ್ವರನ ಮಾತಿನಲ್ಲಿ ಲಕ್ಷ್ಯವಿಡದೆ ಹೋದುದರಿಂದ ಸ್ವಲ್ಪ ಮಂದಿಯೇ ಉಳಿಯುವಿರಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)62 ನಕ್ಷತ್ರಗಳಷ್ಟು ಅಸಂಖ್ಯರಾಗಿರುವ ನೀವು ನಿಮ್ಮ ದೇವರಾದ ಯೆಹೋವನ ಮಾತಿನಲ್ಲಿ ಲಕ್ಷ್ಯವಿಡದೆಹೋದದರಿಂದ ಸ್ವಲ್ಪಮಂದಿಯೇ ಉಳಿಯುವಿರಿ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ62 ನೀವು ನಿಮ್ಮ ದೇವರಾದ ಯೆಹೋವ ದೇವರ ಮಾತನ್ನು ಕೇಳದೇ ಹೋದದ್ದರಿಂದ, ಆಕಾಶದ ನಕ್ಷತ್ರಗಳ ಹಾಗೆ ಅಸಂಖ್ಯಾತರಾಗಿರುವ ನೀವು ಸ್ವಲ್ಪ ಮಂದಿಯಾಗಿ ಉಳಿಯುವಿರಿ. ಅಧ್ಯಾಯವನ್ನು ನೋಡಿ |