ಧರ್ಮೋಪದೇಶಕಾಂಡ 28:63 - ಪರಿಶುದ್ದ ಬೈಬಲ್63 “ಯೆಹೋವನು ನಿಮ್ಮ ಅಭಿವೃದ್ದಿಯಲ್ಲಿ ಸಂತೋಷಪಡುವಂತೆ ನಿಮ್ಮ ಅವನತಿಯಲ್ಲಿಯೂ ನಿಮ್ಮ ನಾಶನದಲ್ಲಿಯೂ ಸಂತೋಷಪಡುವನು. ನೀವು ಆ ದೇಶವನ್ನು ನಿಮ್ಮದನ್ನಾಗಿಸಿಕೊಳ್ಳಲು ಹೋಗುವಿರಿ. ಆದರೆ ಜನರು ನಿಮ್ಮನ್ನು ದೇಶದಿಂದ ಹೊರಡಿಸಿ ಅಟ್ಟಿಬಿಡುವರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201963 ಹೇಗೆ ಯೆಹೋವನು ಈಗ ನಿಮ್ಮನ್ನು ಅಭಿವೃದ್ಧಿಪಡಿಸುವುದರಲ್ಲಿಯೂ, ಹೆಚ್ಚಿಸುವುದರಲ್ಲಿಯೂ ಸಂತೋಷಪಡುತ್ತಾನೋ ಹಾಗೆಯೇ ಆಗ ನಿಮ್ಮನ್ನು ಕೆಡಿಸಿ ನಾಶಮಾಡುವುದರಲ್ಲಿ ಸಂತೋಷಪಟ್ಟು, ನೀವು ಸ್ವಾಧೀನಮಾಡಿಕೊಳ್ಳುವುದಕ್ಕೆ ಹೋಗುವ ದೇಶದೊಳಗಿಂದ ನಿಮ್ಮನ್ನು ಕಿತ್ತುಹಾಕುವನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)63 ಸರ್ವೇಶ್ವರ ಈಗ ನಿಮ್ಮನ್ನು ಅಭಿವೃದ್ಧಿಪಡಿಸುವುದರಲ್ಲೂ ಹೆಚ್ಚಿಸುವುದರಲ್ಲೂ ಹೇಗೆ ಸಂತೋಷಪಡುತ್ತಾರೋ ಹಾಗೆಯೇ ಆಗ ನಿಮ್ಮನ್ನು ಕೆಡಿಸಿ ನಾಶಮಾಡುವುದರಲ್ಲಿ ಸಂತೋಷಪಡುವರು. ನೀವು ಸ್ವಾಧೀನಮಾಡಿಕೊಳ್ಳುವುದಕ್ಕೆ ಹೋಗುವ ನಾಡಿನೊಳಗಿಂದ ನಿಮ್ಮನ್ನು ಕಿತ್ತುಹಾಕುವರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)63 ಹೇಗೆ ಯೆಹೋವನು ಈಗ ನಿಮ್ಮನ್ನು ಅಭಿವೃದ್ಧಿಪಡಿಸುವದರಲ್ಲಿಯೂ ಹೆಚ್ಚಿಸುವದರಲ್ಲಿಯೂ ಸಂತೋಷಪಡುತ್ತಾನೋ ಹಾಗೆಯೇ ಆಗ ನಿಮ್ಮನ್ನು ಕೆಡಿಸಿ ನಾಶಮಾಡುವದರಲ್ಲಿ ಸಂತೋಷಪಟ್ಟು ನೀವು ಸ್ವಾಧೀನಮಾಡಿಕೊಳ್ಳುವದಕ್ಕೆ ಹೋಗುವ ದೇಶದೊಳಗಿಂದ ನಿಮ್ಮನ್ನು ಕಿತ್ತುಹಾಕುವನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ63 ಯೆಹೋವ ದೇವರು ಹೇಗೆ ನಿಮಗೆ ಸಮೃದ್ಧಿಯನ್ನು ಕೊಡುವುದಕ್ಕೂ ನಿಮ್ಮನ್ನು ಹೆಚ್ಚಿಸುವುದಕ್ಕೂ ನಿಮಗೋಸ್ಕರ ಸಂತೋಷಿಸಿದರೋ, ಹಾಗೆಯೇ ಯೆಹೋವ ದೇವರು ನಿಮ್ಮನ್ನು ಕೆಡಿಸಿ, ನಾಶಮಾಡುವುದಕ್ಕೂ ನಿಮಗೆ ವಿರೋಧವಾಗಿ ಸಂತೋಷಿಸುವರು. ನೀವು ಸ್ವಾಧೀನಮಾಡಿಕೊಳ್ಳುವುದಕ್ಕೆ ಹೋಗುವ ದೇಶದಿಂದಲೂ ನಿಮ್ಮನ್ನು ಕಿತ್ತುಹಾಕುವರು. ಅಧ್ಯಾಯವನ್ನು ನೋಡಿ |
ನಿಮ್ಮ ಎಲ್ಲಾ ಕಾರ್ಯಗಳಲ್ಲಿ ಯಶಸ್ವಿಯಾಗುವಂತೆ ದೇವರು ಮಾಡುವನು. ನಿಮಗೆ ಅನೇಕ ಮಕ್ಕಳನ್ನು ಅನುಗ್ರಹಿಸುವನು. ನಿಮ್ಮ ದನಗಳನ್ನು ಆಶೀರ್ವದಿಸುವನು. ಅವುಗಳಿಗೆ ಅನೇಕ ಕರುಗಳಿರುವವು. ನಿಮ್ಮ ಹೊಲಗಳು ಅಧಿಕವಾದ ಬೆಳೆಯನ್ನು ಕೊಡುವಂತೆ ಆಶೀರ್ವದಿಸುವನು. ಯೆಹೋವನು ನಿಮಗೆ ಶುಭವನ್ನು ಉಂಟುಮಾಡುವುದರಲ್ಲಿ ಸಂತೋಷಿಸುವನು. ನಿಮ್ಮ ಪೂರ್ವಿಕರಿಗೆ ಮೇಲನ್ನು ಉಂಟುಮಾಡಲು ಆತನು ಬಯಸಿದ್ದನು.
“ಆಗ ನೀನು ಅವರಿಗೆ ಹೀಗೆ ಹೇಳಬೇಕು, ‘ನನ್ನ ಒಡೆಯನಾದ ಯೆಹೋವನು ಹೀಗೆನ್ನುತ್ತಾನೆ: ನನ್ನ ಜೀವದಾಣೆ, ನಾನು ಜನರು ಸಾಯುವುದನ್ನು ನೋಡಲು ಇಷ್ಟಪಡುವದಿಲ್ಲ; ದುಷ್ಟರು ಸಾಯುವದರಲ್ಲಿಯೂ ನನಗೆ ಇಷ್ಟವಿಲ್ಲ. ಆ ದುಷ್ಟರು ನನ್ನ ಕಡೆಗೆ ತಿರುಗಬೇಕೆಂದು ನಾನು ಇಷ್ಟಪಡುತ್ತೇನೆ. ಅವರು ತಮ್ಮ ದುರ್ನಡತೆಯನ್ನು ಬಿಟ್ಟು ನಿಜವಾದ ಜೀವನವನ್ನು ನಡೆಸಬೇಕು. ಆದ್ದರಿಂದ ನನ್ನ ಬಳಿಗೆ ಹಿಂದಿರುಗಿ ಬನ್ನಿರಿ. ದುಷ್ಟತನವನ್ನು ಬಿಟ್ಟುಬಿಡಿರಿ. ಇಸ್ರೇಲ್ ಜನರೇ, ನೀವು ಯಾಕೆ ಸಾಯುತ್ತೀರಿ?’
ಪೂರ್ವಕಾಲದಲ್ಲಿ, ಇಸ್ರೇಲ್ ಮತ್ತು ಯೆಹೂದಗಳ ಮೇಲೆ ನಾನು ಗಮನವಿಟ್ಟಿದ್ದೆನು. ಆದರೆ ನಾನು ಅವರನ್ನು ತೆಗೆದುಹಾಕುವ ಸಮಯಕ್ಕಾಗಿ ಕಾದುಕೊಂಡಿದ್ದೆ. ನಾನು ಅವರನ್ನು ಕೆಡವಿದೆ; ಅವರನ್ನು ಹಾಳುಮಾಡಿದೆ. ಅವರಿಗೆ ಅನೇಕ ಕಷ್ಟಗಳನ್ನು ಕೊಟ್ಟೆ. ಆದರೆ ಈಗ ಅವರನ್ನು ಅಭಿವೃದ್ಧಿಪಡಿಸುವದಕ್ಕಾಗಿ ಅವರನ್ನು ಬಲಶಾಲಿಗಳನ್ನಾಗಿ ಮಾಡಲು ಅವರ ಕಡೆಗೆ ಗಮನಹರಿಸುತ್ತೇನೆ” ಇದು ಯೆಹೋವನ ನುಡಿ.