ಧರ್ಮೋಪದೇಶಕಾಂಡ 28:67 - ಪರಿಶುದ್ದ ಬೈಬಲ್67 ಮುಂಜಾನೆಯಲ್ಲಿ ನೀವು, ‘ಇದು ಸಾಯಂಕಾಲವಾಗಿದ್ದರೆ ಉತ್ತಮವಾಗಿರುತ್ತಿತ್ತು’ ಎಂದು ಅನ್ನುವಿರಿ. ಸಾಯಂಕಾಲದಲ್ಲಿ, ‘ಇದು ಮುಂಜಾನೆಯಾಗಿದ್ದರೆ ಉತ್ತಮವಾಗಿರುತ್ತಿತ್ತು’ ಎಂದು ಅನ್ನುವಿರಿ. ನಿಮ್ಮ ಹೃದಯದಲ್ಲಿರುವ ಭಯ ಮತ್ತು ನೀವು ಕಣ್ಣಾರೆ ಕಾಣುವ ಭಯಂಕರ ಸಂಗತಿಗಳೇ ಇದಕ್ಕೆ ಕಾರಣ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201967 ಮನಸ್ಸಿನಲ್ಲಿ ಯಾವಾಗಲೂ ಪ್ರಾಣಭಯವಿರುವುದರಿಂದಲೂ ಕಣ್ಣಿನಿಂದ ಭಯಂಕರವಾದ ಸಂಗತಿಗಳನ್ನು ನೋಡುವುದರಿಂದಲೂ ನೀವು ಹೊತ್ತಾರೆಯಲ್ಲಿ, “ಅಯ್ಯೋ, ಅಯ್ಯೋ ಸಾಯಂಕಾಲ ಯಾವಾಗ ಬರುವುದೋ” ಎಂದೂ, ಸಾಯಂಕಾಲದಲ್ಲಿ, “ಅಯ್ಯೋ, ಅಯ್ಯೋ! ಬೆಳಿಗ್ಗೆ ಯಾವಾಗ ಬರುವುದೋ” ಎಂದು ಕೊರಗುವಿರಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)67 ಮನಸ್ಸಿನಲ್ಲಿ ನಿರಂತರ ಪ್ರಾಣಭಯವಿರುವುದರಿಂದ ಹಾಗು ಕಣ್ಣಿನಿಂದ ಭಯಂಕರವಾದ ಸಂಗತಿಗಳನ್ನು ನೋಡುವುದರಿಂದ ನೀವು ಹೊತ್ತಾರೆಯಲ್ಲೇ, ‘ಅಯ್ಯೋ, ಅಯ್ಯೋ, ಸಾಯಂಕಾಲ ಯಾವಾಗ ಬರುವುದೋ?’ ಎಂದೂ ಸಾಯಂಕಾಲದಲ್ಲಿ, ‘ಅಯ್ಯೋ, ಅಯ್ಯೋ, ಮರುದಿನ ಯಾವಾಗ ಬರುವುದೋ?’ ಎಂದೂ ಕೊರಗುವಿರಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)67 ಮನಸ್ಸಿನಲ್ಲಿ ಯಾವಾಗಲೂ ಪ್ರಾಣಭಯವಿರುವದರಿಂದಲೂ ಕಣ್ಣಿನಿಂದ ಭಯಂಕರವಾದ ಸಂಗತಿಗಳನ್ನು ನೋಡುವದರಿಂದಲೂ ನೀವು ಹೊತ್ತಾರೆಯಲ್ಲಿ - ಅಯ್ಯೋ, ಅಯ್ಯೋ! ಸಾಯಂಕಾಲ ಯಾವಾಗ ಬರುವದೋ ಎಂದೂ ಸಾಯಂಕಾಲದಲ್ಲಿ - ಅಯ್ಯೋ, ಅಯ್ಯೋ! ಮರುದಿನ ಯಾವಾಗ ಬರುವದೋ ಎಂದೂ ಹೇಳುವಿರಿ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ67 ನಿಮ್ಮ ಹೃದಯದಲ್ಲಿನ ಪ್ರಾಣಭೀತಿ, ಹೆದರಿಕೆಯ ನಿಮಿತ್ತವೂ ನಿಮ್ಮ ಕಣ್ಣುಗಳು ನೋಡುವ ಭಯಂಕರ ನೋಟದಿಂದ ನೀವು ಮುಂಜಾನೆಯಲ್ಲಿ, “ಸಂಜೆ ಆಗಬೇಕು,” ಎನ್ನುವಿರಿ. ಸಂಜೆಯಲ್ಲಿ, “ಮುಂಜಾನೆ ಆಗಬೇಕು,” ಎನ್ನುವಿರಿ. ಅಧ್ಯಾಯವನ್ನು ನೋಡಿ |