Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಧರ್ಮೋಪದೇಶಕಾಂಡ 28:68 - ಪರಿಶುದ್ದ ಬೈಬಲ್‌

68 ಯೆಹೋವನು ನಿಮ್ಮನ್ನು ಹಡಗುಗಳ ಮುಖಾಂತರ ಈಜಿಪ್ಟಿಗೆ ಕೊಂಡೊಯ್ಯುವನು. ನೀವು ಅಲ್ಲಿಗೆ ಹೋಗುವುದೇ ಇಲ್ಲವೆಂದು ನಾನು ಹೇಳಿದ್ದೆನು. ಆದರೆ ದೇವರು ನಿಮ್ಮನ್ನು ಅಲ್ಲಿಗೆ ಕಳುಹಿಸುವನು. ಈಜಿಪ್ಟಿನಲ್ಲಿ ನಿಮ್ಮನ್ನು ನೀವೇ ಗುಲಾಮರನ್ನಾಗಿ ನಿಮ್ಮ ವೈರಿಗಳಿಗೆ ಮಾರಿಕೊಳ್ಳುವಿರಿ; ಆದರೆ ಯಾರೂ ನಿಮ್ಮನ್ನು ಕೊಂಡುಕೊಳ್ಳುವವರಿರುವುದಿಲ್ಲ.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

68 ನೀವು ಐಗುಪ್ತದೇಶವನ್ನು ತಿರುಗಿ ಎಂದಿಗೂ ನೋಡುವುದಿಲ್ಲವೆಂದು ಯೆಹೋವನು ಹೇಳಿದ್ದರೂ ಆತನು ನಿಮ್ಮನ್ನು ಹಡಗುಗಳನ್ನೇರಿಸಿ ಅಲ್ಲಿಗೆ ತಿರುಗಿ ಹೋಗ ಮಾಡುವನು. ಅಲ್ಲಿ ನೀವು ಶತ್ರುಗಳಿಗೆ ನಿಮ್ಮನ್ನು ದಾಸದಾಸಿಯರನ್ನಾಗಿ ಮಾರಿಕೊಳ್ಳಬೇಕೆಂದು ಅಪೇಕ್ಷಿಸಿದರೂ ಯಾರೂ ನಿಮ್ಮನ್ನು ಕೊಂಡುಕೊಳ್ಳುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

68 ನೀವು ಈಜಿಪ್ಟ್ ದೇಶವನ್ನು ಮರಳಿ ಎಂದಿಗೂ ನೋಡುವುದಿಲ್ಲವೆಂದು ಸರ್ವೇಶ್ವರ ಹೇಳಿದ್ದರೂ ಅವರು ನಿಮ್ಮನ್ನು ಹಡಗುಗಳನ್ನೇರಿಸಿ ಅಲ್ಲಿಗೆ ತಿರುಗಿ ಹೋಗಮಾಡುವರು. ಅಲ್ಲಿ ನೀವು ಶತ್ರುಗಳಿಗೆ ನಿಮ್ಮನ್ನೇ ಗಂಡು ಹೆಣ್ಣು ಎನ್ನದೆ ಗುಲಾಮರನ್ನಾಗಿ ಮಾರಿಕೊಳ್ಳಬೇಕೆಂದು ಅಪೇಕ್ಷಿಸಿದರೂ ಯಾರೂ ನಿಮ್ಮನ್ನು ಕೊಂಡುಕೊಳ್ಳುವುದಿಲ್ಲ.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

68 ನೀವು ಐಗುಪ್ತದೇಶವನ್ನು ತಿರಿಗಿ ಎಂದಿಗೂ ನೋಡುವದಿಲ್ಲವೆಂದು ಯೆಹೋವನು ಹೇಳಿದ್ದರೂ ಆತನು ನಿಮ್ಮನ್ನು ಹಡಗುಗಳನ್ನೇರಿಸಿ ಅಲ್ಲಿಗೆ ತಿರಿಗಿ ಹೋಗಮಾಡುವನು. ಅಲ್ಲಿ ನೀವು ಶತ್ರುಗಳಿಗೆ ನಿಮ್ಮನ್ನು ದಾಸದಾಸಿಯರನ್ನಾಗಿ ಮಾರಿಕೊಳ್ಳಬೇಕೆಂದು ಅಪೇಕ್ಷಿಸಿದರೂ ಯಾರೂ ನಿಮ್ಮನ್ನು ಕೊಂಡುಕೊಳ್ಳುವದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

68 ಇದಲ್ಲದೆ, ಯೆಹೋವ ದೇವರು, ನೀವು ಇನ್ನು ಮೇಲೆ ನೋಡುವುದಿಲ್ಲ ಎಂದು ಹೇಳಿದ ದಾರಿಯಲ್ಲಿಯೇ ಹಡಗುಗಳಲ್ಲಿ ಜನರು ನಿಮ್ಮನ್ನು ಈಜಿಪ್ಟಿಗೆ ತಿರುಗಿ ಬರಮಾಡುವರು. ನಿಮ್ಮನ್ನು ಅಲ್ಲಿ ದಾಸರಾಗಿಯೂ ದಾಸಿಯರಾಗಿಯೂ ನಿಮ್ಮ ಶತ್ರುಗಳಿಗೆ ಮಾರಿಕೊಳ್ಳಬೇಕೆಂದಿದ್ದರೂ, ಕೊಂಡುಕೊಳ್ಳುವವರು ಇರುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಧರ್ಮೋಪದೇಶಕಾಂಡ 28:68
14 ತಿಳಿವುಗಳ ಹೋಲಿಕೆ  

ಯೆಹೂದದಲ್ಲಿ ಅಳಿದುಳಿದ ಕೆಲವು ಜನರಿದ್ದರು. ಆ ಜನರು ಈಜಿಪ್ಟಿನಲ್ಲಿ ನೆಲೆಸಲು ಬಂದರು. ಆದರೆ ನಾನು ಯೆಹೂದಕುಲದ ಆ ಕೆಲವು ಅಳಿದುಳಿದವರನ್ನು ನಾಶಮಾಡುವೆನು. ಅವರು ಕತ್ತಿಗಳಿಂದ ಕೊಲ್ಲಲ್ಪಡುವರು; ಹಸಿವಿನಿಂದ ಸತ್ತುಹೋಗುವರು. ಬೇರೆ ಜನಾಂಗಗಳ ಜನರು ಅವರ ಬಗ್ಗೆ ನಿಂದಿಸುವಂತೆ ಅವರ ಸ್ಥಿತಿ ಆಗುವುದು. ಅವರಿಗೆ ಉಂಟಾದ ದುರ್ಗತಿಯನ್ನು ನೋಡಿ ಬೇರೆ ಜನಾಂಗದ ಜನರು ಭಯಪಡುವರು. ಆ ಜನರು ಶಾಪದ ಶಬ್ಧವಾಗುವರು. ಬೇರೆ ಜನಾಂಗದವರು ಯೆಹೂದದ ಆ ಜನರಿಗೆ ಅಪಮಾನ ಮಾಡುವರು.


ಯೆಹೋವನ ದೇಶದಲ್ಲಿ ಇಸ್ರೇಲು ವಾಸಿಸದು. ಎಫ್ರಾಯೀಮ್ ಈಜಿಪ್ಟಿಗೆ ಹಿಂದಿರುಗುವದು. ಅಶ್ಶೂರ್ಯದಲ್ಲಿ ಅವರು ತಮಗೆ ನಿಷೇಧಿಸಲ್ಪಟ್ಟ ಆಹಾರವನ್ನು ತಿನ್ನುವರು.


ಆ ಜನರು ಯೆಹೋವನ ಮಾತುಗಳನ್ನು ಕಿವಿಗೆ ಹಾಕಿಕೊಳ್ಳಲಿಲ್ಲ. ಆ ಎಲ್ಲಾ ಜನರು ಈಜಿಪ್ಟಿಗೆ ಹೋದರು. ಅವರು ತಹಪನೇಸ್ ಎಂಬ ಊರಿಗೆ ಸೇರಿದರು.


ಇಸ್ರೇಲರು ಯಜ್ಞವನ್ನು ಪ್ರೀತಿಸುತ್ತಾರೆ. ಅವರು ಮಾಂಸವನ್ನು ಯಜ್ಞಮಾಡಿ ತಿನ್ನುತ್ತಾರೆ. ಯೆಹೋವನು ಅವರ ಯಜ್ಞವನ್ನು ಸ್ವೀಕರಿಸುವುದಿಲ್ಲ. ಅವರ ಪಾಪಗಳನ್ನು ತನ್ನ ನೆನಪಿಗೆ ತಂದು ಅವರನ್ನು ಶಿಕ್ಷಿಸುವನು. ಅವರು ಈಜಿಪ್ಟಿಗೆ ಸೆರೆಯಾಳುಗಳಾಗಿ ಒಯ್ಯಲ್ಪಡುವರು.


ಇವರಲ್ಲಿ ಕೆಲವರು ಸೈನಿಕರಿಂದ ಕೊಲ್ಲಲ್ಪಡುವರು. ಇನ್ನು ಕೆಲವರು ಬಂಧಿತರಾಗಿ ಪರದೇಶಕ್ಕೆ ಒಯ್ಯಲ್ಪಡುವರು. ಅನ್ಯದೇಶೀಯರು ತಮ್ಮ ಕಾಲ ಮುಗಿಯುವ ತನಕ ಪರಿಶುದ್ಧ ಪಟ್ಟಣವಾದ ಜೆರುಸಲೇಮಿನಲ್ಲಿ ನಡೆದಾಡುವರು.


ಅರಸನು ತನ್ನ ಉಪಯೋಗಕ್ಕಾಗಿ ಹೆಚ್ಚೆಚ್ಚಾಗಿ ಕುದುರೆಗಳನ್ನು ಖರೀದಿಸಬಾರದು; ಜನರನ್ನು ಈಜಿಪ್ಟಿಗೆ ಕಳುಹಿಸಿ ಅಲ್ಲಿಂದ ಹೆಚ್ಚುಹೆಚ್ಚು ಕುದುರೆಗಳನ್ನು ತರಿಸಬಾರದು; ಯಾಕೆಂದರೆ, ‘ನೀವು ಆ ಮಾರ್ಗದಲ್ಲಿ ಹಿಂದಕ್ಕೆ ಹೋಗಲೇಬಾರದು’ ಎಂದು ಯೆಹೋವನು ಹೇಳಿದ್ದಾನೆ.


ಯಾಕೆಂದರೆ ನಾನು, ನನ್ನ ಜನರೂ ಕೊಲ್ಲಲ್ಪಡಲು, ನಾಶವಾಗಲು, ಸಂಪೂರ್ಣವಾಗಿ ನಿರ್ಮೂಲವಾಗಲು ಮಾರಲ್ಪಟ್ಟಿರುತ್ತೇವೆ. ನಾವು ಬರೇ ಗುಲಾಮರಾಗಿ ಮಾರಲ್ಪಟ್ಟಿದರೆ ನಾನು ಸುಮ್ಮನಿರುತ್ತಿದ್ದೆ. ಯಾಕೆಂದರೆ ಅದು ರಾಜನನ್ನು ತೊಂದರೆಪಡಿಸುವಂಥ ದೊಡ್ಡ ವಿಷಯವಲ್ಲ” ಎಂದು ಉತ್ತರಿಸಿದಳು.


“ನಮ್ಮ ಯೆಹೂದಿ ಜನರನ್ನು ಪರದೇಶಗಳಲ್ಲಿ ಗುಲಾಮರನ್ನಾಗಿ ಮಾರಿದ್ದರು. ಅಂಥವರನ್ನು ನಾವು ಕ್ರಯಕೊಟ್ಟು ಕೊಂಡುಕೊಂಡು ಅವರನ್ನು ಗುಲಾಮತನದಿಂದ ಬಿಡುಗಡೆ ಮಾಡಿಸಿದೆವು. ಆದರೆ ನೀವು ಈಗ ಮತ್ತೆ ಗುಲಾಮರನ್ನಾಗಿ ಮಾಡುತ್ತಿದ್ದೀರಿ” ಎಂದೆನು. ಸೇರಿಬಂದಿದ್ದ ಶ್ರೀಮಂತರೂ ಅಧಿಕಾರಿಗಳೂ ಸುಮ್ಮನೆ ಬಾಯಿ ಮುಚ್ಚಿಕೊಂಡರು. ಅವರಿಗೆ ಏನೂ ಹೇಳಲಿಕ್ಕೂ ಆಗಲಿಲ್ಲ.


“ಯೆಹೋವನೆಂಬ ನಾನೇ ನಿಮ್ಮ ದೇವರು. ಈಜಿಪ್ಟಿನಲ್ಲಿ ಗುಲಾಮರಾಗಿದ್ದ ನಿಮ್ಮನ್ನು ಆ ದೇಶದಿಂದ ಹೊರಗೆ ನಡಿಸಿದವನು ನಾನೇ.


“ಆದರೆ ಆ ಸೇವಕನು ದುಷ್ಟನಾಗಿ ತನ್ನ ಯಜಮಾನನು ಬೇಗನೆ ಹಿಂತಿರುಗಿ ಬರುವುದಿಲ್ಲ ಎಂದುಕೊಂಡರೆ ಏನಾಗುವುದು? ಆ ಸೇವಕನು ಯಜಮಾನನ ಇತರ ದಾಸದಾಸಿಯರನ್ನು ಹೊಡೆಯುವುದಕ್ಕೂ ತಿಂದುಕುಡಿದು ಮತ್ತನಾಗುವುದಕ್ಕೂ ತೊಡಗುವನು.


ಮುಂಜಾನೆಯಲ್ಲಿ ನೀವು, ‘ಇದು ಸಾಯಂಕಾಲವಾಗಿದ್ದರೆ ಉತ್ತಮವಾಗಿರುತ್ತಿತ್ತು’ ಎಂದು ಅನ್ನುವಿರಿ. ಸಾಯಂಕಾಲದಲ್ಲಿ, ‘ಇದು ಮುಂಜಾನೆಯಾಗಿದ್ದರೆ ಉತ್ತಮವಾಗಿರುತ್ತಿತ್ತು’ ಎಂದು ಅನ್ನುವಿರಿ. ನಿಮ್ಮ ಹೃದಯದಲ್ಲಿರುವ ಭಯ ಮತ್ತು ನೀವು ಕಣ್ಣಾರೆ ಕಾಣುವ ಭಯಂಕರ ಸಂಗತಿಗಳೇ ಇದಕ್ಕೆ ಕಾರಣ.


ಇಸ್ರೇಲ್ ಜನಾಂಗದೊಂದಿಗೆ ಹೋರೇಬ್ ಬೆಟ್ಟದಲ್ಲಿ ಯೆಹೋವನು ಒಂದು ಒಡಂಬಡಿಕೆಯನ್ನು ಮಾಡಿಕೊಂಡನು. ಅಲ್ಲದೆ ಇಸ್ರೇಲರು ಮೋವಾಬ್ ಪ್ರಾಂತ್ಯದಲ್ಲಿದ್ದಾಗ ಯೆಹೋವನು ಮೋಶೆಗೆ ಅವರೊಡನೆ ಇನ್ನೊಂದು ಒಡಂಬಡಿಕೆಯನ್ನು ಮಾಡಿಕೊಳ್ಳಲು ಹೇಳಿದನು. ಅದು ಯಾವುದೆಂದರೆ:


ಇಸ್ರೇಲರು ಈಜಿಪ್ಟನ್ನು ಬಿಟ್ಟುಹೋಗುವಂತೆ ಫರೋಹನು ಅನುಮತಿ ನೀಡಿದನು. ಇಸ್ರೇಲರು ಫಿಲಿಷ್ಟಿಯರ ದೇಶದ ಮೂಲಕ ಹಾದುಹೋಗುವ ರಸ್ತೆಯಲ್ಲಿ ಹೋಗಲು ಯೆಹೋವನು ಅನುಮತಿ ನೀಡಲಿಲ್ಲ. ಸಮುದ್ರದ ಮೂಲಕ ಹಾದುಹೋಗುವ ಆ ರಸ್ತೆ ಬಹಳ ಹತ್ತಿರವಾಗಿತ್ತು. ಆದರೆ ಯೆಹೋವನು, “ಇಸ್ರೇಲರು ಆ ದಾರಿಯಲ್ಲಿ ಹೋದರೆ, ಯುದ್ಧಮಾಡಬೇಕಾಗುವುದು. ಆಗ ಅವರು ತಮ್ಮ ಮನಸ್ಸುಗಳನ್ನು ಬದಲಾಯಿಸಿ ಈಜಿಪ್ಟಿಗೆ ಹಿಂತಿರುಗಬಹುದು” ಅಂದುಕೊಂಡನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು