ಧರ್ಮೋಪದೇಶಕಾಂಡ 29:10 - ಪರಿಶುದ್ದ ಬೈಬಲ್10 “ಈ ದಿನ ನೀವೆಲ್ಲರೂ ದೇವರ ಮುಂದೆ ನಿಂತಿದ್ದೀರಿ. ನಿಮ್ಮ ನಾಯಕರು, ಹಿರಿಯರು, ನಿಮ್ಮ ಜನರೆಲ್ಲಾ ಇಲ್ಲಿ ಇರುವಿರಿ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201910 ಇಸ್ರಾಯೇಲ್ ಪುರುಷರೇ, ನೀವೆಲ್ಲರೂ ಈಹೊತ್ತು ನಿಮ್ಮ ದೇವರಾದ ಯೆಹೋವನ ಸನ್ನಿಧಿಯಲ್ಲಿ ನಿಂತಿರುವುದಕ್ಕೆ ಕಾರಣವೇನೆಂದರೆ, ನಿಮ್ಮ ದೇವರಾದ ಯೆಹೋವನು ನಿಮಗೆ ಹೇಳಿದಂತೆ ನಿಮ್ಮ ಪ್ರಧಾನರು, ಗೋತ್ರದವರು, ಹಿರಿಯರು, ಅಧಿಕಾರಿಗಳು, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)10 “ಇಸ್ರಯೇಲ ಜನರೇ, ನಿಮ್ಮ ಮುಖ್ಯಸ್ಥರು, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)10 ಇಸ್ರಾಯೇಲ ಪುರುಷರೇ, ನಿಮ್ಮ ಪ್ರಧಾನರು, ಗೋತ್ರದವರು, ಹಿರಿಯರು, ಅಧಿಕಾರಿಗಳು, ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ10 ನೀವೆಲ್ಲರು ಈ ಹೊತ್ತು ನಿಮ್ಮ ದೇವರಾದ ಯೆಹೋವ ದೇವರ ಮುಂದೆ ನಿಂತಿದ್ದೀರಿ. ನಿಮ್ಮ ಗೋತ್ರಗಳ ಮುಖ್ಯಸ್ಥರೂ ಹಿರಿಯರೂ ಅಧಿಕಾರಿಗಳೂ ಇಸ್ರಾಯೇಲಿನ ಜನರೆಲ್ಲರೂ ಅಧ್ಯಾಯವನ್ನು ನೋಡಿ |
ಹೀಗೆ ಇವರೆಲ್ಲಾ ಯೆಹೋವನಿಗೆ ಒಂದು ವಿಶೇಷವಾದ ವಾಗ್ದಾನವನ್ನು ಮಾಡಿದರು. ತಾವು ವಾಗ್ದಾನವನ್ನು ನೆರವೇರಿಸದೆ ಹೋದಲ್ಲಿ ಸಂಕಟಬಾಧೆಗಳು ಪ್ರಾಪ್ತವಾಗುವಂತೆ ಯೆಹೋವನನ್ನು ಕೇಳಿಕೊಂಡರು. ಇವರೆಲ್ಲಾ ದೇವರ ನೀತಿನಿಯಮಗಳನ್ನು ಅನುಸರಿಸುತ್ತೇವೆಂದು ಮಾತುಕೊಟ್ಟರು. ಆ ನೀತಿನಿಯಮಗಳನ್ನು ಯೆಹೋವನು ತನ್ನ ಸೇವಕನಾದ ಮೋಶೆಯ ಮೂಲಕ ನಮಗೆ ಕೊಟ್ಟನು. ಮೇಲೆ ಕಾಣಿಸಿದ ಹೆಸರುಗಳಲ್ಲದೆ ಉಳಿದ ಜನರು, ಯಾಜಕರು, ಲೇವಿಯರು, ದ್ವಾರಪಾಲಕರು, ಗಾಯಕರು, ದೇವಾಲಯದ ಸೇವಕರು ಮತ್ತು ಇಸ್ರೇಲಿನ ಜನರು ತಮ್ಮ ಸುತ್ತಲು ವಾಸಿಸುವ ಜನರಿಂದ ಪ್ರತ್ಯೇಕಿಸಲ್ಪಟ್ಟರು. ದೇವರ ವಿಧಿನಿಯಮಗಳನ್ನು ಅನುಸರಿಸುವುದಕ್ಕಾಗಿ ತಮ್ಮ ಹೆಂಡತಿ ಮಕ್ಕಳೊಂದಿಗೆ ಪ್ರತ್ಯೇಕಿಸಿಕೊಂಡರು. ದೇವರಿಗೆ ಮಾಡಿದ ಒಡಂಬಡಿಕೆಯನ್ನು ನಡೆಸಿಕೊಡಲು ಒಪ್ಪಿದರು ಮತ್ತು ಹಾಗೆ ಮಾಡದಿದ್ದಲ್ಲಿ ದೇವರಿಂದ ಸಂಕಟ ವ್ಯಾಧಿಗಳನ್ನು ಸ್ವೀಕರಿಸಲೂ ಒಪ್ಪಿದರು.
ಸಮುವೇಲನ ಸುದ್ದಿಯು ಇಸ್ರೇಲಿನಲ್ಲೆಲ್ಲಾ ಹರಡಿತು. ಏಲಿಯು ಬಹು ವೃದ್ಧನಾದನು. ಅವನ ಮಕ್ಕಳು ಯೆಹೋವನ ಸನ್ನಿಧಿಯಲ್ಲಿ ಕೆಟ್ಟಕಾರ್ಯಗಳನ್ನು ನಡೆಸುತ್ತಲೇ ಇದ್ದರು. ಆ ಕಾಲದಲ್ಲಿ ಫಿಲಿಷ್ಟಿಯರು ಇಸ್ರೇಲರಿಗೆ ವಿರುದ್ಧವಾಗಿ ಯುದ್ಧಮಾಡಲು ಒಟ್ಟುಗೂಡಿದರು. ಇಸ್ರೇಲರು ಫಿಲಿಷ್ಟಿಯರಿಗೆ ವಿರುದ್ಧವಾಗಿ ಹೊರಟು ಎಬೆನೆಜೆರಿನಲ್ಲಿ ಪಾಳೆಯ ಮಾಡಿಕೊಂಡರು; ಫಿಲಿಷ್ಟಿಯರು ಅಫೇಕಿನಲ್ಲಿ ಪಾಳೆಯ ಮಾಡಿಕೊಂಡರು.