Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಧರ್ಮೋಪದೇಶಕಾಂಡ 29:13 - ಪರಿಶುದ್ದ ಬೈಬಲ್‌

13 ಈ ಒಡಂಬಡಿಕೆಯ ಮೂಲಕ ದೇವರು ನಿಮ್ಮನ್ನು ತನ್ನ ಸ್ವಕೀಯ ಜನರನ್ನಾಗಿ ಮಾಡುತ್ತಾನೆ. ಆತನು ನಿಮಗೆ ದೇವರಾಗಿದ್ದಾನೆ. ನಿಮ್ಮ ಪೂರ್ವಿಕರಾದ ಅಬ್ರಹಾಮನಿಗೆ, ಇಸಾಕನಿಗೆ, ಯಾಕೋಬನಿಗೆ ಹೇಳಿದಂತೆ ನಿಮಗೂ ಹೇಳುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

13 ನಿಮ್ಮ ಪೂರ್ವಿಕರಾದ ಅಬ್ರಹಾಮ್, ಇಸಾಕ್ ಮತ್ತು ಯಾಕೋಬರಿಗೆ ವಾಗ್ದಾನ ಮಾಡಿದಂತೆಯೂ ನಿಮ್ಮನ್ನು ತನಗೆ ಸ್ವಕೀಯಜನರನ್ನಾಗಿಯೂ, ತನ್ನನ್ನು ನಿಮಗೆ ದೇವರನ್ನಾಗಿಯೂ ಸ್ಥಾಪಿಸಿಕೊಳ್ಳುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

13 ಆ ಒಡಂಬಡಿಕೆ ಯಾವುದೆಂದರೆ, ದೇವರು ನಿಮಗೆ ಹೇಳಿದಂತೆಯೂ, ನಿಮ್ಮ ಪಿತೃಗಳಾದ ಅಬ್ರಹಾಮನಿಗೂ, ಇಸಾಕನಿಗೂ, ಯಾಕೋಬನಿಗೂ ಪ್ರಮಾಣ ಮಾಡಿದಂತೆಯೂ, ಈ ಹೊತ್ತು ನಿಮ್ಮನ್ನು ತಮ್ಮ ಜನರನ್ನಾಗಿ ಸ್ಥಾಪಿಸಿ, ನಿಮಗೆ ದೇವರಾಗಬೇಕೆಂಬುದೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಧರ್ಮೋಪದೇಶಕಾಂಡ 29:13
12 ತಿಳಿವುಗಳ ಹೋಲಿಕೆ  

ನೀವು ನನ್ನ ಜನರಾಗಿರುವಿರಿ; ನಾನು ನಿಮ್ಮ ದೇವರಾಗಿರುವೆನು. ನಿಮ್ಮ ದೇವರಾಗಿರುವ ಯೆಹೋವನಾದ ನಾನೇ ನಿಮ್ಮನ್ನು ಈಜಿಪ್ಟಿನವರ ಬಿಟ್ಟೀಕೆಲಸದಿಂದ ಬಿಡುಗಡೆಗೊಳಿಸಿದೆನೆಂದು ಆಗ ನೀವು ತಿಳಿದುಕೊಳ್ಳುವಿರಿ.


ನಾನು ನಿನ್ನೊಂದಿಗೆ ಒಡಂಬಡಿಕೆಯನ್ನು ಮಾಡಿಕೊಳ್ಳುವೆನು. ಈ ಒಡಂಬಡಿಕೆಯು ನಿನ್ನ ಎಲ್ಲಾ ಸಂತತಿಯವರಿಗೆ ಶಾಶ್ವತವಾಗಿ ಅನ್ವಯಿಸುವುದು. ನಾನೇ ನಿನಗೂ ನಿನ್ನ ಎಲ್ಲಾ ಸಂತತಿಯವರಿಗೂ ದೇವರಾಗಿರುವೆನು.


ನೀವು ಯೆಹೋವನ ಆಜ್ಞೆಗಳಿಗೆ ವಿಧೇಯರಾದರೆ ನಿಮ್ಮ ದೇವರಾದ ಯೆಹೋವನು ನಿಮ್ಮನ್ನು ತನ್ನ ವಾಗ್ದಾನಕ್ಕನುಸಾರವಾಗಿ ವಿಶೇಷವಾದ ಸ್ವಕೀಯ ಪ್ರಜೆಗಳನ್ನಾಗಿ ಮಾಡುವನು.


ಆದರೆ ಆ ಜನರು ಉತ್ತಮ ದೇಶವಾದ ಪರಲೋಕಕ್ಕಾಗಿ ಕಾದಿದ್ದರು. ಆದ್ದರಿಂದ ದೇವರು ತನ್ನನ್ನು ಅವರ ದೇವರೆಂದು ಹೇಳಿಕೊಳ್ಳಲು ನಾಚಿಕೆಪಡದೆ ಅವರಿಗಾಗಿ ಒಂದು ನಗರವನ್ನು ಸಿದ್ಧಪಡಿಸಿದನು.


ಇಸ್ರೇಲರು ಮತ್ತು ಯೆಹೂದ್ಯರು ನನ್ನ ಭಕ್ತರಾಗಿರುವರು, ನಾನು ಅವರ ದೇವರಾಗಿರುವೆನು.


ಯಾಕೆಂದರೆ ನೀವು ಯೆಹೋವನ ಪ್ರಜೆಗಳಾಗಿದ್ದೀರಿ. ಭೂಲೋಕದಲ್ಲಿರುವ ಎಲ್ಲಾ ಜನಾಂಗಗಳಿಂದ ಆತನು ನಿಮ್ಮನ್ನು ಆರಿಸಿಕೊಂಡಿದ್ದಾನೆ. ನೀವು ಆತನ ಸ್ವಕೀಯ ಪ್ರಜೆಯಾಗಿದ್ದೀರಿ.


ನೀನು ಪ್ರಯಾಣ ಮಾಡುತ್ತಿರುವ ಈ ಕಾನಾನ್ ದೇಶವನ್ನೆಲ್ಲ ನಿನಗೂ ನಿನ್ನ ಸಂತತಿಯವರಿಗೂ ಶಾಶ್ವತವಾಗಿ ಕೊಡುವೆನು. ನಾನೇ ನಿಮ್ಮ ದೇವರಾಗಿರುವೆನು” ಎಂದು ಹೇಳಿದನು.


ನೀವೆಲ್ಲಾ ನಿಮ್ಮ ದೇವರಾದ ಯೆಹೋವನೊಂದಿಗೆ ಒಡಂಬಡಿಕೆಯನ್ನು ಮಾಡುವುದಕ್ಕೋಸ್ಕರ ನಿಂತಿದ್ದೀರಿ. ದೇವರು ನಿಮ್ಮೊಂದಿಗೆ ಒಡಂಬಡಿಕೆಯನ್ನು ಮಾಡುತ್ತಾನೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು