ಧರ್ಮೋಪದೇಶಕಾಂಡ 29:18 - ಪರಿಶುದ್ದ ಬೈಬಲ್18 ಇಲ್ಲಿರುವ ಯಾವ ಪುರುಷನಾಗಲಿ ಸ್ತ್ರೀಯಾಗಲಿ ಯಾವ ಗೋತ್ರದವರಾಗಲಿ ನಿಮ್ಮ ದೇವರಾದ ಯೆಹೋವನನ್ನು ಬಿಟ್ಟುಹೋಗದಂತೆ ನೋಡಿಕೊಳ್ಳಿರಿ. ಯಾವನೂ ಹೋಗಿ ಬೇರೆ ಜನಾಂಗಗಳ ದೇವರುಗಳ ಸೇವೆಮಾಡಬಾರದು. ಅಂಥದ್ದನ್ನು ಮಾಡುವ ಜನರು ಕಹಿಯಾದ ಮತ್ತು ವಿಷಭರಿತವಾದ ಹಣ್ಣನ್ನು ಬಿಡುವ ಗಿಡದಂತಿದ್ದಾರೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201918 “ಎಚ್ಚರಿಕೆಯಿಂದಿರಿ, ನಮ್ಮ ದೇವರಾದ ಯೆಹೋವನನ್ನು ಬಿಟ್ಟು ಆ ಜನಾಂಗಗಳ ದೇವರುಗಳನ್ನು ಸೇವಿಸುವ ಯಾವ ಕುಲವಾಗಲಿ, ಕುಟುಂಬವಾಗಲಿ, ಸ್ತ್ರೀಯರಾಗಲಿ, ಪುರುಷರಾಗಲಿ ನಿಮ್ಮಲ್ಲಿ ಇರಲೇ ಬಾರದು; ನಿಮ್ಮಲ್ಲಿ ಯಾವ ವಿಷದ ಬಳ್ಳಿಯ ಬೇರೂ ಇರಬಾರದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)18 “ಎಚ್ಚರಿಕೆಯಿಂದಿರಿ! ನಮ್ಮ ದೇವರಾದ ಸರ್ವೇಶ್ವರನನ್ನು ಬಿಟ್ಟು, ಆ ಜನಾಂಗಗಳ ದೇವರುಗಳನ್ನು ಅವಲಂಬಿಸುವ ಯಾವ ಕುಲವಾಗಲಿ, ಕುಟುಂಬವಾಗಲಿ, ಸ್ತ್ರೀಪುರುಷರಾಗಲಿ ನಿಮ್ಮಲ್ಲಿ ಇರಲೇಬಾರದು; ನಿಮ್ಮಲ್ಲಿ ಯಾವ ವಿಷಲತೆಯ ಬೇರೂ ಇರಬಾರದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)18 ಎಚ್ಚರಿಕೆಯಾಗಿರ್ರಿ; ನಮ್ಮ ದೇವರಾದ ಯೆಹೋವನನ್ನು ಬಿಟ್ಟು ಆ ಜನಾಂಗಗಳ ದೇವರುಗಳನ್ನು ಸೇವಿಸುವ ಯಾವ ಕುಲವಾಗಲಿ ಕುಟುಂಬವಾಗಲಿ ಸ್ತ್ರೀಪುರುಷರಾಗಲಿ ನಿಮ್ಮಲ್ಲಿ ಇರಲೇಬಾರದು; ನಿಮ್ಮಲ್ಲಿ ಯಾವ ವಿಷಲತೆಯ ಬೇರೂ ಇರಬಾರದು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ18 ಈ ಹೊತ್ತು ನಮ್ಮ ದೇವರಾದ ಯೆಹೋವ ದೇವರನ್ನು ಬಿಟ್ಟು ಆ ಜನಾಂಗಗಳ ದೇವರುಗಳಿಗೆ ಸೇವೆ ಮಾಡುವುದಕ್ಕೆ ತಿರುಗಿಕೊಳ್ಳುವ ಹೃದಯವುಳ್ಳ ಪುರುಷನಾದರೂ ಸ್ತ್ರೀಯಾದರೂ ಕುಟುಂಬವಾದರೂ ಗೋತ್ರವಾದರೂ ಇರಬಾರದು. ಈ ಘೋರ ವಿಷವನ್ನೂ, ಬೆಳೆಸುವ ಬೇರೂ ನಿಮ್ಮಲ್ಲಿ ಇರಬಾರದು. ಅಧ್ಯಾಯವನ್ನು ನೋಡಿ |
ಸರ್ವಶಕ್ತನಾದ ಯೆಹೋವನು ಪ್ರವಾದಿಗಳ ಬಗ್ಗೆ ಹೀಗೆನ್ನುತ್ತಾನೆ, “ನಾನು ಆ ಪ್ರವಾದಿಗಳನ್ನು ದಂಡಿಸುವೆನು. ಆ ಶಿಕ್ಷೆಯು ವಿಷಪೂರಿತ ಆಹಾರದಂತೆಯೂ ನೀರಿನಂತೆಯೂ ಇರುವುದು. ಪ್ರವಾದಿಗಳು ಒಂದು ಆಧ್ಯಾತ್ಮಿಕ ವ್ಯಾಧಿಯನ್ನು ಪ್ರಾರಂಭಿಸಿದರು. ಆ ವ್ಯಾಧಿಯು ಇಡೀ ದೇಶದಲ್ಲೆಲ್ಲ ಪ್ರಸರಿಸಿತು. ಆದ್ದರಿಂದ ನಾನು ಆ ಪ್ರವಾದಿಗಳನ್ನು ಶಿಕ್ಷಿಸುತ್ತೇನೆ. ಆ ವ್ಯಾಧಿಯು ಆ ಪ್ರವಾದಿಗಳಿಂದ ಜೆರುಸಲೇಮಿಗೆ ಬಂದಿತು.”