ಧರ್ಮೋಪದೇಶಕಾಂಡ 29:22 - ಪರಿಶುದ್ದ ಬೈಬಲ್22 “ಮುಂದಿನ ದಿವಸಗಳಲ್ಲಿ ನಿಮ್ಮ ಸಂತತಿಯವರೂ ದೂರದೇಶದ ಪರದೇಶಸ್ಥರೂ ನಿಮ್ಮ ದೇಶವು ಹೇಗೆ ಹಾಳಾಗಿ ಹೋಯಿತು ಎಂಬುದನ್ನು ನೋಡುವರು. ಯೆಹೋವನು ದೇಶಕ್ಕೆ ತಂದ ವ್ಯಾಧಿಗಳನ್ನು ಅವರು ನೋಡುವರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201922 “ಮುಂದೆ ಹುಟ್ಟುವ ನಿಮ್ಮ ಸಂತತಿಯವರೂ ದೇಶಾಂತರಗಳಿಂದ ಬರುವ ಅನ್ಯರೂ ನಿಮ್ಮ ದೇಶಕ್ಕೆ ಯೆಹೋವನು ಉಂಟುಮಾಡಿದ ರೋಗ ಮತ್ತು ಉಪದ್ರವಗಳನ್ನು ಕಂಡು ಆಶ್ಚರ್ಯಪಡುವರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)22 “ಮುಂದೆ ಹುಟ್ಟುವ ನಿಮ್ಮ ಸಂತತಿಯವರೂ ದೇಶಾಂತರಗಳಿಂದ ಬರುವ ಅನ್ಯರೂ ನಿಮ್ಮ ನಾಡಿಗೆ ಸರ್ವೇಶ್ವರ ಉಂಟುಮಾಡಿದ ರೋಗೋಪದ್ರವಗಳನ್ನು ಕಂಡು ಆಶ್ಚರ್ಯಪಡುವರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)22 ಮುಂದೆ ಹುಟ್ಟುವ ನಿಮ್ಮ ಸಂತತಿಯವರೂ ದೇಶಾಂತರಗಳಿಂದ ಬರುವ ಅನ್ಯರೂ ನಿಮ್ಮ ದೇಶಕ್ಕೆ ಯೆಹೋವನು ಉಂಟುಮಾಡಿದ ರೋಗೋಪದ್ರವಗಳನ್ನು ಕಂಡು ಆಶ್ಚರ್ಯಪಡುವರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ22 ಹೀಗೆ ನಿಮ್ಮ ತರುವಾಯ ಹುಟ್ಟುವ ನಿಮ್ಮ ಮಕ್ಕಳ ಮುಂದಿನ ಸಂತತಿಯೂ, ದೂರದೇಶದಿಂದ ಬರುವ ಅನ್ಯನೂ, ಆ ದೇಶದ ವಿಪತ್ತುಗಳನ್ನೂ, ಯೆಹೋವ ದೇವರು ಅದರಲ್ಲಿ ಬರಮಾಡಿದ ರೋಗಗಳನ್ನೂ ನೋಡುವರು. ಅಧ್ಯಾಯವನ್ನು ನೋಡಿ |
ನನ್ನ ಜೀವದಾಣೆ, ಮೋವಾಬ್ಯರೂ ಅಮ್ಮೋನ್ಯರೂ ಸೊದೋಮ್ ಗೊಮೋರದವರಂತೆ ನಾಶವಾಗುವರು. ನಾನು ಸರ್ವಶಕ್ತನಾದ ಇಸ್ರೇಲರ ದೇವರಾಗಿರುವೆನು. ನಾನು ವಾಗ್ದಾನ ಮಾಡುವದೇನೆಂದರೆ, ಆ ರಾಜ್ಯಗಳು ಸಂಪೂರ್ಣವಾಗಿ ನಾಶವಾಗುವವು. ಅವರ ಭೂಮಿಯು ಕಳೆಗಳಿಂದ ತುಂಬಿಹೋಗುವದು. ಅದು ಮೃತ್ಯುಸಮುದ್ರದ ಉಪ್ಪಿನಿಂದ ತುಂಬಿಹೋದಂತಿರುವದು. ನನ್ನ ಜನರಲ್ಲಿ ಉಳಿದವರು ಅವರ ದೇಶವನ್ನೂ ಅಲ್ಲಿ ಉಳಿದಿರುವ ವಸ್ತುಗಳನ್ನೂ ತಮ್ಮ ವಶಮಾಡಿಕೊಳ್ಳುವರು.”