Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಧರ್ಮೋಪದೇಶಕಾಂಡ 29:23 - ಪರಿಶುದ್ದ ಬೈಬಲ್‌

23 ನಿಮ್ಮ ದೇಶವೆಲ್ಲಾ ನಿಷ್ಪ್ರಯೋಜಕವಾಗಿರುವುದು. ಅದರ ಮೇಲೆ ಉಪ್ಪೂ ಗಂಧಕವೂ ತುಂಬಿರುವುದು. ಅದರ ಮೇಲೆ ಯಾವ ಸಸಿಯೂ ಬೆಳೆಯಲಾರದು; ಕೂಳೆಯೂ ಬೆಳೆಯುವುದಿಲ್ಲ. ಸೊದೋಮ್, ಗೊಮೋರ, ಅದ್ಮಾ ಮತ್ತು ಚೆಬೋಯೀಮ್ ಎಂಬ ಪಟ್ಟಣಗಳು ಯೆಹೋವನ ಕೋಪದ ನಿಮಿತ್ತ ನಾಶವಾದಂತೆ ನಿಮ್ಮ ದೇಶವೂ ನಾಶವಾಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

23 ಎಲ್ಲಾ ಜನಾಂಗಗಳವರೂ ನಿಮ್ಮ ದೇಶವು ಯಾವ ವ್ಯವಸಾಯವೂ ಇಲ್ಲದೆ, ಹುಲ್ಲಾದರೂ ಬೆಳೆಯದೆ, ಹಾಳುಬಿದ್ದಿರುವುದನ್ನು ಕಾಣುವರು. ಯೆಹೋವನು ಕೋಪ ಮತ್ತು ರೋಷದಿಂದ ಕೆಡವಿದ ಸೊದೋಮ್ ಮತ್ತು ಗೊಮೋರ, ಅದ್ಮಾ ಮತ್ತು ಚೆಬೋಯಿಮ್ ಎಂಬ ಪಟ್ಟಣಗಳ ಪ್ರದೇಶದಂತೆ ಸುಟ್ಟು ಹೋಗಿ, ಎಲ್ಲಾ ಕಡೆಗಳಲ್ಲಿಯೂ ಗಂಧಕ ಉಪ್ಪುಗಳಿಂದ ತುಂಬಿರುವುದನ್ನು ಕಂಡು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

23 ಎಲ್ಲ ಜನಾಂಗಗಳವರೂ ನಿಮ್ಮ ಆ ನಾಡು ಯಾವ ವ್ಯವಸಾಯವೂ ಇಲ್ಲದೆ, ಹುಲ್ಲಾದರೂ ಬೆಳೆಯದೆ, ಹಾಳುಬಿದ್ದಿರುವುದನ್ನು ನೋಡುವರು. ಸರ್ವೇಶ್ವರ ಮಹಾಕೋಪದಿಂದ ಕೆಡವಿದ ಸೊದೋಮ್, ಗೊಮೋರ, ಅದ್ಮಾ, ಚೆಬೋಯಿಮ್ ಎಂಬ ಪಟ್ಟಣಗಳ ಪ್ರದೇಶದಂತೆ ಸುಟ್ಟುಹೋಗಿರುವುದನ್ನೂ ಎಲ್ಲ ಕಡೆಗಳಲ್ಲೂ ಗಂಧಕ ಉಪ್ಪುಗಳಿಂದ ತುಂಬಿರುವುದನ್ನೂ ನೋಡುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

23 ಎಲ್ಲಾ ಜನಾಂಗಗಳವರೂ ನಿಮ್ಮ ಆ ದೇಶವು ಯಾವ ವ್ಯವಸಾಯವಾದರೂ ಇಲ್ಲದೆ ಹುಲ್ಲಾದರೂ ಬೆಳೆಯದೆ ಹಾಳುಬಿದ್ದು ಯೆಹೋವನು ಮಹಾ ಕೋಪದಿಂದ ಕೆಡವಿದ ಸೊದೋಮ್ ಗೊಮೋರ ಅದ್ಮಾ ಚೆಬೋಯೀಮ್ ಎಂಬ ಪಟ್ಟಣಗಳ ಪ್ರದೇಶದಂತೆ ಸುಟ್ಟುಹೋದದ್ದಾಗಿ ಎಲ್ಲಾ ಕಡೆಗಳಲ್ಲಿಯೂ ಗಂಧಕ ಉಪ್ಪುಗಳಿಂದ ತುಂಬಿರುವದನ್ನು ಕಂಡು -

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

23 ಯೆಹೋವ ದೇವರು ತಮ್ಮ ದೈವಿಕ ಕೋಪದಲ್ಲಿ ಕೆಡವಿ ಹಾಕಿದ ಸೊದೋಮ್, ಗೊಮೋರ, ಅದ್ಮಾ, ಚೆಬೋಯಿಮ್ ಎಂಬ ಪಟ್ಟಣಗಳಂತೆ ಆ ದೇಶವೆಲ್ಲಾ ಗಂಧಕವೂ, ಉಪ್ಪೂ ಉರಿಯುತ್ತಾ, ವ್ಯವಸಾಯವಾದರೂ ಹುಲ್ಲಾದರೂ ಬೆಳೆಯದೆ ಇರುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಧರ್ಮೋಪದೇಶಕಾಂಡ 29:23
26 ತಿಳಿವುಗಳ ಹೋಲಿಕೆ  

ನನ್ನ ಜೀವದಾಣೆ, ಮೋವಾಬ್ಯರೂ ಅಮ್ಮೋನ್ಯರೂ ಸೊದೋಮ್ ಗೊಮೋರದವರಂತೆ ನಾಶವಾಗುವರು. ನಾನು ಸರ್ವಶಕ್ತನಾದ ಇಸ್ರೇಲರ ದೇವರಾಗಿರುವೆನು. ನಾನು ವಾಗ್ದಾನ ಮಾಡುವದೇನೆಂದರೆ, ಆ ರಾಜ್ಯಗಳು ಸಂಪೂರ್ಣವಾಗಿ ನಾಶವಾಗುವವು. ಅವರ ಭೂಮಿಯು ಕಳೆಗಳಿಂದ ತುಂಬಿಹೋಗುವದು. ಅದು ಮೃತ್ಯುಸಮುದ್ರದ ಉಪ್ಪಿನಿಂದ ತುಂಬಿಹೋದಂತಿರುವದು. ನನ್ನ ಜನರಲ್ಲಿ ಉಳಿದವರು ಅವರ ದೇಶವನ್ನೂ ಅಲ್ಲಿ ಉಳಿದಿರುವ ವಸ್ತುಗಳನ್ನೂ ತಮ್ಮ ವಶಮಾಡಿಕೊಳ್ಳುವರು.”


ಆ ಜನರು ನಿರ್ಜನವಾದ ಪ್ರದೇಶದಲ್ಲಿದ್ದ, ಸುಡುವ ಬರಡು ಭೂಮಿಯಲ್ಲಿದ್ದ, ಬಂಜರು ಭೂಮಿಯಲ್ಲಿ ಬೆಳೆದ, ದೇವರು ನೀಡಬಹುದಾದ ಒಳ್ಳೆಯ ವಸ್ತುಗಳ ಬಗ್ಗೆ ಏನೂ ಅರಿಯದ ಒಂದು ಪೊದೆಯಂತಿರುತ್ತಾರೆ.


ಎದೋಮಿನ ನದಿಗಳು ಕರಗಿರುವ ರಾಳದಂತಿರುವದು. ಅದರ ನೆಲವು ಸುಡುವ ಗಂಧಕದಂತಿರುವದು.


ಈ ರಾಜರುಗಳೆಲ್ಲ ಸೊದೋಮಿನ ರಾಜನಾದ ಬೆರಗನಿಗೂ ಗೊಮೋರದ ರಾಜನಾದ ಬಿರ್ಶಗನಿಗೂ ಅದ್ಮಾಹದ ರಾಜನಾದ ಶಿನಾಬನಿಗೂ ಚೆಬೋಯೀಮಿನ ರಾಜನಾದ ಶೆಮೇಬರನಿಗೂ ಚೋಗರ್ ಎಂಬ ಬೇಲಗಿನ ರಾಜನಿಗೂ ವಿರುದ್ಧವಾಗಿ ಯುದ್ಧಮಾಡಿದರು.


ಲೋಟನು ಆ ಪಟ್ಟಣವನ್ನು ಬಿಟ್ಟು ಹೊರಟ ದಿನದಲ್ಲಿಯೂ ಜನರು ಹಾಗೆಯೇ ಮಾಡುತ್ತಿದ್ದರು. ಆಗ ಆಕಾಶದಿಂದ ಬೆಂಕಿಯ ಸುರಿಮಳೆಯಾಗಿ ಅವರೆಲ್ಲರನ್ನೂ ನಾಶಮಾಡಿತು.


“ಸೊದೋಮ್ ಗೊಮೋರವನ್ನು ನಾಶಮಾಡಿದಂತೆ ನಾನು ನಿಮ್ಮನ್ನು ನಾಶಮಾಡಿದೆನು. ಆ ನಗರಗಳು ಸಂಪೂರ್ಣವಾಗಿ ನಾಶವಾದವು. ನೀವು ಬೆಂಕಿಯಿಂದ ಎಳೆದ ಕೊಳ್ಳಿಯಂತಿದ್ದೀರಿ. ಆದರೂ ನೀವು ಸಹಾಯಕ್ಕಾಗಿ ನನ್ನ ಬಳಿಗೆ ಬರಲಿಲ್ಲ.” ಇದು ಯೆಹೋವನ ನುಡಿ.


ಆದರೆ ಜವುಗು ನೆಲಗಳೂ ಸವುಳು ನೆಲಗಳೂ ಸಿಹಿಯಾಗುವದಿಲ್ಲ. ಅವು ಉಪ್ಪು ತಯಾರಿಸುವದಕ್ಕಾಗಿ ಉಪಯೋಗಿಸಲ್ಪಡುವವು.


ಯೆಹೋವನು ಕನಿಕರಪಡದೆ ಕೆಡವಿಬಿಟ್ಟ ನಗರಗಳ ಗತಿಯು ಅವನಿಗೆ ಬರಲಿ. ಬೆಳಿಗ್ಗೆ ಯುದ್ಧದ ಕೂಗಾಟವೂ, ಮಧ್ಯಾಹ್ನದಲ್ಲಿ ಯುದ್ಧದ ಕಿರುಚಾಟವೂ ಅವನ ಕಿವಿಗೆ ಬೀಳಲಿ.


ಆ ಇಡೀ ದಿವಸ ಅಬೀಮೆಲೆಕ ಮತ್ತು ಅವನ ಜನರು ಶೆಕೆಮಿನ ಜನರೊಂದಿಗೆ ಯುದ್ಧ ಮಾಡಿದರು. ಅಬೀಮೆಲೆಕ ಮತ್ತು ಅವನ ಜನರು ಶೆಕೆಮ್ ನಗರವನ್ನು ಸ್ವಾಧೀನಪಡಿಸಿಕೊಂಡರು; ಆ ನಗರದ ಜನರನ್ನು ಕೊಂದುಹಾಕಿದರು. ಅಬೀಮೆಲೆಕನು ಊರನ್ನು ಕೆಡವಿ ಹಾಕಿ ಉಪ್ಪನ್ನು ಚೆಲ್ಲಿದನು.


ಆದರೆ ಆ ಮೃಗವನ್ನೂ ಸುಳ್ಳುಪ್ರವಾದಿಯನ್ನೂ ಸೆರೆಹಿಡಿಯಲಾಯಿತು. ಈ ಸುಳ್ಳುಪ್ರವಾದಿಯೇ ಮೃಗಕ್ಕಾಗಿ ಅದ್ಭುತಗಳನ್ನು ಮಾಡಿದವನು. ಈ ಸುಳ್ಳುಪ್ರವಾದಿಯು ಮೃಗದ ಗುರುತು ಹಾಕಿಸಿಕೊಂಡಿರುವ ಮತ್ತು ಅದರ ವಿಗ್ರಹವನ್ನು ಆರಾಧಿಸಿದ ಜನರನ್ನು ಮರುಳು ಮಾಡಲು ಈ ಅದ್ಭುತಗಳನ್ನು ಬಳಸಿದ್ದನು. ಈ ಸುಳ್ಳುಪ್ರವಾದಿಯನ್ನೂ ಮೃಗವನ್ನೂ, ಬೆಂಕಿ ಮತ್ತು ಗಂಧಕಗಳಿಂದ ಉರಿಯುವ ಕೆರೆಯಲ್ಲಿ ಜೀವಂತವಾಗಿ ಎಸೆಯಲಾಯಿತು.


ಆತನು ಫಲವತ್ತಾದ ಭೂಮಿಯನ್ನು ಉಪಯೋಗವಿಲ್ಲದ ಉಪ್ಪುಭೂಮಿಯನ್ನಾಗಿ ಪರಿವರ್ತಿಸಿದನು, ಯಾಕೆಂದರೆ ಅಲ್ಲಿ ಕೆಟ್ಟಜನರು ನೆಲೆಸಿದ್ದರು.


ಅವನ ಮನೆಯಲ್ಲಿ ಅವನದೇನೂ ಉಳಿದಿರುವುದಿಲ್ಲ. ಉರಿಯುವ ಗಂಧಕವು ಅವನ ಆಸ್ತಿಯಲ್ಲೆಲ್ಲಾ ಹರಡಿಕೊಂಡಿರುತ್ತದೆ.


ಯೆಶಾಯನು ಹೇಳಿರುವುದೇನೆಂದರೆ: “ಪ್ರಭುವು ಸರ್ವಶಕ್ತನಾಗಿದ್ದಾನೆ. ಪ್ರಭುವು ತನ್ನ ಜನರಲ್ಲಿ ಕೆಲವರನ್ನು ನಮಗೋಸ್ಕರವಾಗಿ ರಕ್ಷಿಸಿದ್ದಾನೆ. ಆತನು ಹೀಗೆ ಮಾಡಿಲ್ಲದಿದ್ದರೆ, ಈಗ ನಾವು ಸೊದೋಮಿನಂತೆಯೂ ಗೊಮೋರದಂತೆಯೂ ಇರುತ್ತಿದ್ದೆವು.”


ಸೊದೋಮ್ ಮತ್ತು ಗೊಮೋರ ನಗರಗಳನ್ನೂ ಅವುಗಳ ಸುತ್ತಲಿನ ಪಟ್ಟಣಗಳನ್ನೂ ನೆನಪು ಮಾಡಿಕೊಳ್ಳಿರಿ. ಅವುಗಳೂ ಆ ದೇವದೂತರಂತಾದವು. ಆ ಪಟ್ಟಣಗಳಲ್ಲಿ ಲೈಂಗಿಕ ಪಾಪಗಳು ಮತ್ತು ಕೆಟ್ಟಕಾರ್ಯಗಳು ತುಂಬಿಕೊಂಡಿದ್ದವು. ಅವರು ನಿತ್ಯವಾದ ಬೆಂಕಿಯ ದಂಡನೆಯಿಂದ ಸಂಕಟಪಡುವರು. ಅವರಿಗೆ ನೀಡಿದ ದಂಡನೆಯು ನಮಗೊಂದು ದೃಷ್ಟಾಂತವಾಗಿದೆ.


ರಾಜನಾದ ಯೋಷೀಯನು, “ಈಗ ನಾವು ಏನು ಮಾಡಬೇಕೆಂದು ಯೆಹೋವನನ್ನು ಕೇಳಿ. ನನಗಾಗಿ, ಜನರಿಗಾಗಿ ಮತ್ತು ಎಲ್ಲಾ ಯೆಹೂದಕ್ಕಾಗಿ ಯೆಹೋವನನ್ನು ಕೇಳಿ. ಈಗ ಸಿಕ್ಕಿರುವ ಈ ಗ್ರಂಥದ ವಾಕ್ಯಗಳನ್ನು ಕುರಿತಾಗಿಯೂ ಕೇಳಿ. ಯೆಹೋವನು ನಮ್ಮ ಮೇಲೆ ಕೋಪಗೊಂಡಿದ್ದಾನೆ. ಏಕೆಂದರೆ ನಮ್ಮ ಪೂರ್ವಿಕರು ಈ ಗ್ರಂಥದ ವಾಕ್ಯಗಳಿಗೆ ಕಿವಿಗೊಡಲಿಲ್ಲ; ಅವುಗಳನ್ನು ಕೈಕೊಂಡು ನಡೆಯಲಿಲ್ಲ” ಎಂದು ಹೇಳಿದನು.


ನಿಮ್ಮ ದೇಶವು ಹಾಳಾಗಿದೆ; ನಿಮ್ಮ ನಗರಗಳು ಬೆಂಕಿಯಿಂದ ಸುಡಲ್ಪಟ್ಟಿವೆ. ನಿಮ್ಮ ಶತ್ರುಗಳು ನಿಮ್ಮ ದೇಶವನ್ನು ವಶಪಡಿಸಿಕೊಂಡಿದ್ದಾರೆ; ಅನ್ಯದೇಶವು ಶತ್ರುಸೈನ್ಯದಿಂದ ಹಾಳಾಗುವಂತೆಯೇ, ನಿಮ್ಮ ದೇಶವೂ ಹಾಳಾಗಿದೆ.


ಬಾಬಿಲೋನು ಸೊದೋಮ್ ಗೊಮೋರಗಳಂತೆ ನಾಶವಾಗುವದು. ದೇವರೇ ಇದನ್ನು ಮಾಡುವನು. ಆಗ ಅಲ್ಲಿ ಏನೂ ಉಳಿಯದು. “ಎಲ್ಲಾ ರಾಜ್ಯಗಳಿಗಿಂತ ಬಾಬಿಲೋನ್ ಬಹಳ ಸುಂದರವಾಗಿದೆ. ಬಾಬಿಲೋನಿಯರು ತಮ್ಮ ನಗರದ ಬಗ್ಗೆ ತುಂಬಾ ಹೆಚ್ಚಳಪಡುತ್ತಾರೆ.


ನಮ್ಮ ಪವಿತ್ರ ಆಲಯವು ಬೆಂಕಿಯಿಂದ ಸುಡಲ್ಪಟ್ಟಿದೆ. ಆ ದೇವಾಲಯವು ನಮಗೆ ಅತ್ಯಂತ ಅಮೂಲ್ಯವಾದದ್ದಾಗಿದೆ. ನಮ್ಮ ಪೂರ್ವಿಕರು ನಿನ್ನನ್ನು ಅಲ್ಲಿ ಆರಾಧಿಸಿದರು. ನಾವು ಹೊಂದಿದಂಥ ಎಲ್ಲಾ ಒಳ್ಳೆಯವುಗಳು ಈಗ ನಾಶವಾದವು.


ಸೊದೋಮ್ ಗೊಮೋರನಗರಗಳಂತೆಯೂ ಅವುಗಳ ಸುತ್ತಲಿನ ಪಟ್ಟಣಗಳಂತೆಯೂ ಎದೋಮ್ ನಾಶವಾಗುವುದು. ಅಲ್ಲಿ ಯಾರೂ ವಾಸಮಾಡಲಾರರು” ಯೆಹೋವನು ಹೀಗೆನ್ನುತ್ತಾನೆ:


ನಿಮ್ಮ ಭೂಮಿಯನ್ನು ಬರಿದುಮಾಡುವೆ. ಅದರಲ್ಲಿ ವಾಸಿಸಲು ಬರುವ ನಿಮ್ಮ ವೈರಿಗಳೂ ಅದನ್ನು ನೋಡಿ ಆಶ್ಚರ್ಯಪಡುವರು.


ಈ ಆಲಯವನ್ನು ನಾಶಗೊಳಿಸುತ್ತೇನೆ. ಇದನ್ನು ನೋಡುವ ಪ್ರತಿಯೊಬ್ಬರೂ ವಿಸ್ಮಿತರಾಗುವರು. ‘ಈ ದೇಶಕ್ಕೂ ಈ ಆಲಯಕ್ಕೂ ಇಂತಹ ಭೀಕರ ಕಾರ್ಯವನ್ನು ಯೆಹೋವನು ಏಕೆ ಮಾಡಿದನು?’ ಎಂದು ಜನರು ಕೇಳುತ್ತಾರೆ.


‘ಇದು ಏಕೆ ಸಂಭವಿಸಿತೆಂದರೆ, ಅವರು ತಮ್ಮ ದೇವರಾದ ಯೆಹೋವನನ್ನು ತ್ಯಜಿಸಿದರು. ಆತನು ಅವರ ಪೂರ್ವಿಕರನ್ನು ಈಜಿಪ್ಟಿನಿಂದ ಬರಮಾಡಿದನು. ಆದರೆ ಅವರು ಅನ್ಯದೇವರುಗಳನ್ನು ಅನುಸರಿಸಲು ತೀರ್ಮಾನಿಸಿದರು. ಅವರು ಆ ದೇವರುಗಳ ಪೂಜೆಯನ್ನೂ ಸೇವೆಯನ್ನೂ ಮಾಡಲಾರಂಭಿಸಿದರು. ಆದಕಾರಣವೇ ಈ ಕೆಟ್ಟಕಾರ್ಯಗಳೆಲ್ಲಾ ಅವರಿಗೆ ಸಂಭವಿಸುವಂತೆ ಯೆಹೋವನು ಮಾಡಿದನು’ ಎಂದು ಅನ್ಯಜನರು ಉತ್ತರಿಸುವರು.”


“ನಾನು (ಯೆಹೋವನು) ಜೆರುಸಲೇಮ್ ನಗರವನ್ನು ಕಸದ ರಾಶಿಯನ್ನಾಗಿ ಮಾಡುವೆನು. ಅದು ನರಿಗಳ ನಿವಾಸವಾಗುವದು. ನಾನು ಯೆಹೂದ ಪ್ರಾಂತದ ನಗರಗಳನ್ನು ನಾಶಮಾಡುವೆನು. ಅಲ್ಲಿ ಒಬ್ಬರೂ ವಾಸಮಾಡಲಾರರು.”


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು