ಧರ್ಮೋಪದೇಶಕಾಂಡ 29:24 - ಪರಿಶುದ್ದ ಬೈಬಲ್24 “ಇತರ ದೇಶಗಳವರು, ‘ದೇವರು ಈ ದೇಶವನ್ನು ಯಾಕೆ ನಾಶಮಾಡಿದನು? ಆತನು ಯಾಕೆ ಕೋಪಗೊಂಡನು?’ ಎಂದು ವಿಚಾರಿಸುವರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201924 ‘ಯೆಹೋವನು ಈ ದೇಶಕ್ಕೆ ಹೀಗೆ ಮಾಡಿದ್ದೇಕೆ? ಇಂಥ ಕೋಪಾಗ್ನಿಗೆ ಕಾರಣವೇನಿದ್ದೀತು?’ ಎಂಬುದಾಗಿ ವಿಚಾರಿಸುವರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)24 ‘ಸರ್ವೇಶ್ವರ ಈ ನಾಡಿಗೆ ಹೀಗೆ ಮಾಡಿದ್ದೇಕೆ? ಇಂಥ ಕೋಪಾಗ್ನಿಗೆ ಕಾರಣ ಏನಿರಬಹುದು?’ ಎಂದು ವಿಚಾರಿಸುವರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)24 ಯೆಹೋವನು ಈ ದೇಶಕ್ಕೆ ಹೀಗೆ ಮಾಡಿದ್ದೇಕೆ? ಇಂಥ ಕೋಪಾಗ್ನಿಗೆ ಕಾರಣವೇನಿದ್ದೀತು? ಎಂಬದಾಗಿ ವಿಚಾರಿಸುವರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ24 ಆಗ ಎಲ್ಲಾ ದೇಶದವರೂ, “ಯೆಹೋವ ದೇವರು ಈ ದೇಶಕ್ಕೆ ಏಕೆ ಹೀಗೆ ಮಾಡಿದ್ದಾರೆ? ಈ ದೊಡ್ಡ ಕೋಪಾಗ್ನಿಗೆ ಕಾರಣವೇನು?” ಎಂದು ಕೇಳುವರು. ಅಧ್ಯಾಯವನ್ನು ನೋಡಿ |
ಯೆಹೋವನು ಅವರ ಪೂರ್ವಿಕರೊಂದಿಗೆ ಮಾಡಿಕೊಂಡಿದ್ದ ಒಡಂಬಡಿಕೆಯನ್ನು ಮತ್ತು ಆತನ ನಿಯಮಗಳನ್ನು ಅವರು ಒಪ್ಪಲಿಲ್ಲ. ಅವರು ಯೆಹೋವನ ಎಚ್ಚರಿಕೆಗೆ ಗಮನವನ್ನೂ ನೀಡಲಿಲ್ಲ. ಅವರು ನಿರರ್ಥಕವಾದ ವಿಗ್ರಹಗಳನ್ನು ಅನುಸರಿಸಿ ನಿಷ್ಪ್ರಯೋಜಕರಾದರು, ಅವರು ತಮ್ಮ ಸುತ್ತಮುತ್ತಲಿನ ಜನಾಂಗಗಳನ್ನು ಅನುಸರಿಸಿದರು. ಯೆಹೋವನು ಇಸ್ರೇಲಿನ ಜನರಿಗೆ ಮಾಡಬಾರದೆಂದು ಎಚ್ಚರಿಸಿ ಹೇಳಿದ್ದನ್ನು ಈ ಜನಾಂಗಗಳು ಮಾಡಿದವು.