ಧರ್ಮೋಪದೇಶಕಾಂಡ 29:25 - ಪರಿಶುದ್ದ ಬೈಬಲ್25 ಯಾಕೆಂದರೆ ‘ಇಸ್ರೇಲರು ತಮ್ಮ ಪೂರ್ವಿಕರ ದೇವರಾದ ಯೆಹೋವನೊಂದಿಗೆ ಮಾಡಿದ ಒಡಂಬಡಿಕೆಯನ್ನು ಬಿಟ್ಟು ತೊಲಗಿದರು. ಅವರನ್ನು ಈಜಿಪ್ಟಿನಿಂದ ಹೊರತರುವಾಗ ಯೆಹೋವನೊಂದಿಗೆ ಮಾಡಿದ ಒಡಂಬಡಿಕೆಯನ್ನು ಅನುಸರಿಸಲಿಲ್ಲ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201925 ಅದಕ್ಕೆ ಜನರು, ‘ಈ ದೇಶದವರ ಪೂರ್ವಿಕರ ದೇವರಾದ ಯೆಹೋವನು ಅವರನ್ನು ಐಗುಪ್ತದೇಶದಿಂದ ಬಿಡಿಸಿದ ಮೇಲೆ ಅವರೊಡನೆ ಮಾಡಿದ ಒಡಂಬಡಿಕೆಯನ್ನು ಅವರು ಉಲ್ಲಂಘಿಸಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)25 ಅದಕ್ಕೆ ಜನರು, ‘ಈ ನಾಡಿನವರ ಪಿತೃಗಳ ದೇವರಾದ ಸರ್ವೇಶ್ವರ ಅವರನ್ನು ಈಜಿಪ್ಟ್ ದೇಶದಿಂದ ಬಿಡಿಸಿ ಅವರೊಡನೆ ಮಾಡಿದ ಒಡಂಬಡಿಕೆಯನ್ನು ಅವರು ಉಲ್ಲಂಘಿಸಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)25 ಅದಕ್ಕೆ ಜನರು - ಈ ದೇಶದವರ ಪಿತೃಗಳ ದೇವರಾದ ಯೆಹೋವನು ಅವರನ್ನು ಐಗುಪ್ತದೇಶದಿಂದ ಬಿಡಿಸಿ ಅವರೊಡನೆ ಮಾಡಿದ ನಿಬಂಧನೆಯನ್ನು ಅವರು ಉಲ್ಲಂಘಿಸಿ ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ25 ಆಗ ಜನರು, “ಇಸ್ರಾಯೇಲರು ತಮ್ಮನ್ನು ಈಜಿಪ್ಟ್ ದೇಶದೊಳಗಿಂದ ಹೊರಗೆ ತಂದ ತಮ್ಮ ಪಿತೃಗಳ ದೇವರಾದ ಯೆಹೋವ ದೇವರು ತಮ್ಮ ಸಂಗಡ ಮಾಡಿದ ಒಡಂಬಡಿಕೆಯನ್ನು ಉಲ್ಲಂಘಿಸಿದ್ದಾರೆ. ಅಧ್ಯಾಯವನ್ನು ನೋಡಿ |
‘ಇದು ಏಕೆ ಸಂಭವಿಸಿತೆಂದರೆ, ಅವರು ತಮ್ಮ ದೇವರಾದ ಯೆಹೋವನನ್ನು ತ್ಯಜಿಸಿದರು. ಆತನು ಅವರ ಪೂರ್ವಿಕರನ್ನು ಈಜಿಪ್ಟಿನಿಂದ ಬರಮಾಡಿದನು. ಆದರೆ ಅವರು ಅನ್ಯದೇವರುಗಳನ್ನು ಅನುಸರಿಸಲು ತೀರ್ಮಾನಿಸಿದರು. ಅವರು ಆ ದೇವರುಗಳ ಪೂಜೆಯನ್ನೂ ಸೇವೆಯನ್ನೂ ಮಾಡಲಾರಂಭಿಸಿದರು. ಆದಕಾರಣವೇ ಈ ಕೆಟ್ಟಕಾರ್ಯಗಳೆಲ್ಲಾ ಅವರಿಗೆ ಸಂಭವಿಸುವಂತೆ ಯೆಹೋವನು ಮಾಡಿದನು’ ಎಂದು ಅನ್ಯಜನರು ಉತ್ತರಿಸುವರು.”
ಯೆಹೋವನು ಅವರ ಪೂರ್ವಿಕರೊಂದಿಗೆ ಮಾಡಿಕೊಂಡಿದ್ದ ಒಡಂಬಡಿಕೆಯನ್ನು ಮತ್ತು ಆತನ ನಿಯಮಗಳನ್ನು ಅವರು ಒಪ್ಪಲಿಲ್ಲ. ಅವರು ಯೆಹೋವನ ಎಚ್ಚರಿಕೆಗೆ ಗಮನವನ್ನೂ ನೀಡಲಿಲ್ಲ. ಅವರು ನಿರರ್ಥಕವಾದ ವಿಗ್ರಹಗಳನ್ನು ಅನುಸರಿಸಿ ನಿಷ್ಪ್ರಯೋಜಕರಾದರು, ಅವರು ತಮ್ಮ ಸುತ್ತಮುತ್ತಲಿನ ಜನಾಂಗಗಳನ್ನು ಅನುಸರಿಸಿದರು. ಯೆಹೋವನು ಇಸ್ರೇಲಿನ ಜನರಿಗೆ ಮಾಡಬಾರದೆಂದು ಎಚ್ಚರಿಸಿ ಹೇಳಿದ್ದನ್ನು ಈ ಜನಾಂಗಗಳು ಮಾಡಿದವು.
ಚಿದ್ಕೀಯನು ನೆಬೂಕದ್ನೆಚ್ಚರನಿಗೆ ವಿರುದ್ಧವಾಗಿ ದಂಗೆ ಎದ್ದನು. ನೆಬೂಕದ್ನೆಚ್ಚರನು ತನಗೆ ವಿಧೇಯನಾಗಿರುವಂತೆ ಚಿದ್ಕೀಯನಿಂದ ಪ್ರಮಾಣ ಮಾಡಿಸಿಕೊಂಡಿದ್ದನು. ಚಿದ್ಕೀಯನು ದೇವರ ಹೆಸರಿನಲ್ಲಿ ಆಣೆಯಿಟ್ಟು ತಾನು ನೆಬೂಕದ್ನೆಚ್ಚರನಿಗೆ ನಂಬಿಗಸ್ತನಾಗಿರುವುದಾಗಿ ಪ್ರಮಾಣಮಾಡಿದ್ದನು. ಆದರೆ ಚಿದ್ಕೀಯನು ಮನಸ್ಸನ್ನು ಕಠಿಣಮಾಡಿಕೊಂಡು ಇಸ್ರೇಲಿನ ದೇವರಾದ ಯೆಹೋವನಿಗೆ ವಿಧೇಯನಾಗಲು ನಿರಾಕರಿಸಿದನು.