Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಧರ್ಮೋಪದೇಶಕಾಂಡ 29:26 - ಪರಿಶುದ್ದ ಬೈಬಲ್‌

26 ಇಸ್ರೇಲ್ ಜನರು ಅನ್ಯದೇವರುಗಳನ್ನು ಪೂಜಿಸಲು ಪ್ರಾರಂಭಿಸಿದರು. ಅಂಥಾ ದೇವರುಗಳನ್ನು ಅವರು ಹಿಂದೆಂದೂ ಪೂಜಿಸಿರಲಿಲ್ಲ. ಯೆಹೋವನು ಅನ್ಯದೇವತೆಗಳನ್ನು ಪೂಜಿಸಬಾರದು ಎಂದು ಆಜ್ಞಾಪಿಸಿದ್ದರೂ ಅವರು ಅದನ್ನು ಉಲ್ಲಂಘಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

26 ಅವರು ತಮಗೆ ನೇಮಿಸಲ್ಪಡದೆಯೂ ಮತ್ತು ಗೊತ್ತಿಲ್ಲದೆಯೂ ಇದ್ದ ಇತರ ದೇವರುಗಳನ್ನು ಸೇವಿಸಿ ಪೂಜಿಸಿದ್ದರಿಂದ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

26 ತಮಗೆ ನೇಮಕವಾಗದಿದ್ದ ಹಾಗು ಗೊತ್ತಿಲ್ಲದಿದ್ದ ಇತರ ದೇವರುಗಳನ್ನು ಅವಲಂಬಿಸಿ ಪೂಜಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

26 ತಮಗೆ ನೇವಿುಸಲ್ಪಡದೆಯೂ ಗೊತ್ತಿಲ್ಲದೆಯೂ ಇದ್ದ ಇತರ ದೇವರುಗಳನ್ನು ಸೇವಿಸಿ ಪೂಜಿಸಿದದರಿಂದ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

26 ಅವರು ತಮಗೆ ನೇಮಕವಾಗದಿದ್ದ ಹಾಗು ಗೊತ್ತಿಲ್ಲದಿದ್ದ ಇತರ ದೇವರುಗಳನ್ನು ಅವಲಂಬಿಸಿ ಪೂಜಿಸಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಧರ್ಮೋಪದೇಶಕಾಂಡ 29:26
11 ತಿಳಿವುಗಳ ಹೋಲಿಕೆ  

ಅವರು ಹೊಸ ದೇವರುಗಳನ್ನು ಆರಿಸಿಕೊಂಡರು; ಅದಕ್ಕಾಗಿ ಅವರು ತಮ್ಮ ಪಟ್ಟಣ ದ್ವಾರಗಳಲ್ಲಿ ಯುದ್ಧ ಮಾಡಬೇಕಾಯಿತು. ಇಸ್ರೇಲರ ನಲವತ್ತು ಸಾವಿರ ಸೈನಿಕರಲ್ಲಿ ಒಬ್ಬನಿಗೂ ಗುರಾಣಿ ಬರ್ಜಿಗಳಿರಲಿಲ್ಲ.


ಯೆಹೋವನು ನಿಮ್ಮನ್ನು ಲೋಕದ ಎಲ್ಲಾ ದೇಶಗಳಿಗೆ ಚದರಿಸಿಬಿಡುವನು. ಆತನು ಪ್ರಪಂಚದ ಒಂದು ಕಡೆಯಿಂದ ಇನ್ನೊಂದು ಕಡೆಯ ತನಕ ನಿಮ್ಮನ್ನು ಚದರಿಸುವನು. ಅಲ್ಲಿ ನೀವು ಕಲ್ಲುಮರಗಳಿಂದ ಮಾಡಿದ ದೇವರುಗಳನ್ನು ಪೂಜಿಸುವಿರಿ. ಆ ಸುಳ್ಳುದೇವರುಗಳನ್ನು ನೀವಾಗಲಿ ನಿಮ್ಮ ಪೂರ್ವಿಕರಾಗಲಿ ಎಂದೂ ಪೂಜಿಸಿರಲಿಲ್ಲ.


ಯಾಕೆಂದರೆ ‘ಇಸ್ರೇಲರು ತಮ್ಮ ಪೂರ್ವಿಕರ ದೇವರಾದ ಯೆಹೋವನೊಂದಿಗೆ ಮಾಡಿದ ಒಡಂಬಡಿಕೆಯನ್ನು ಬಿಟ್ಟು ತೊಲಗಿದರು. ಅವರನ್ನು ಈಜಿಪ್ಟಿನಿಂದ ಹೊರತರುವಾಗ ಯೆಹೋವನೊಂದಿಗೆ ಮಾಡಿದ ಒಡಂಬಡಿಕೆಯನ್ನು ಅನುಸರಿಸಲಿಲ್ಲ.


ಈ ಕಾರಣಕ್ಕಾಗಿಯೇ ದೇವರು ಅವರ ಮೇಲೆ ಸಿಟ್ಟುಗೊಂಡು ಈ ಪುಸ್ತಕದಲ್ಲಿ ಬರೆದಿರುವ ಶಾಪವನ್ನು ಅವರಿಗೆ ಬರಮಾಡಿದನು.


ಯೆಹೂದದ ರಾಜರು ನನ್ನನ್ನು ತ್ಯಜಿಸಿದರು ಮತ್ತು ಇತರ ದೇವರುಗಳಿಗೆ ಧೂಪವನ್ನು ಸುಟ್ಟರು. ಅವರು ನನ್ನಲ್ಲಿ ಹೆಚ್ಚು ಕೋಪವನ್ನು ಉಂಟುಮಾಡಿದರು. ಅವರು ಅನೇಕ ವಿಗ್ರಹಗಳನ್ನು ನಿರ್ಮಿಸಿದರು. ಆದಕಾರಣವೇ ನಾನು ನನ್ನ ಕೋಪವನ್ನು ಈ ಸ್ಥಳದ ವಿರುದ್ಧ ತೋರ್ಪಡಿಸುತ್ತೇನೆ. ನನ್ನ ಕೋಪವು ಆರಿಹೋಗದ ಬೆಂಕಿಯಂತಿರುತ್ತದೆ!’


ನೀನು ಅವರಿಗೆ ಹೀಗೆ ಹೇಳಬೇಕು: ‘ನಿಮ್ಮ ಪೂರ್ವಿಕರು ನನ್ನ ಉಪದೇಶದಂತೆ ನಡೆಯುವದನ್ನು ಬಿಟ್ಟುಬಿಟ್ಟರು’ ಎಂದು ದೇವರು ಹೇಳುತ್ತಾನೆ. ‘ಅವರು ನನ್ನ ಅನುಸರಣೆಯನ್ನು ಬಿಟ್ಟು ಬೇರೆ ದೇವರುಗಳನ್ನು ಅನುಸರಿಸಲು ಮತ್ತು ಸೇವಿಸಲು ಪ್ರಾರಂಭಿಸಿದರು. ಅವರು ಅನ್ಯದೇವರುಗಳನ್ನು ಪೂಜಿಸಿದರು. ನಿಮ್ಮ ಪೂರ್ವಿಕರು ನನ್ನನ್ನು ತ್ಯಜಿಸಿ ನನ್ನ ಧರ್ಮವಿಧಿಗಳನ್ನು ಮೀರಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು