ಧರ್ಮೋಪದೇಶಕಾಂಡ 29:27 - ಪರಿಶುದ್ದ ಬೈಬಲ್27 ಈ ಕಾರಣಕ್ಕಾಗಿಯೇ ದೇವರು ಅವರ ಮೇಲೆ ಸಿಟ್ಟುಗೊಂಡು ಈ ಪುಸ್ತಕದಲ್ಲಿ ಬರೆದಿರುವ ಶಾಪವನ್ನು ಅವರಿಗೆ ಬರಮಾಡಿದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201927 ಯೆಹೋವನು ಅವರ ದೇಶದ ಮೇಲೆ ಕೋಪಮಾಡಿ, ಈ ಗ್ರಂಥದಲ್ಲಿ ಬರೆದಿರುವ ಶಾಪಗಳನ್ನು ಅವರ ಮೇಲೆ ಬರಮಾಡಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)27 ಆದುದರಿಂದ ಸರ್ವೇಶ್ವರ ಅವರ ನಾಡಿನ ಮೇಲೆ ಕೋಪಗೊಂಡು ಈ ಗ್ರಂಥದಲ್ಲಿ ಬರೆದಿರುವ ಶಾಪಗಳನ್ನು ಅವರ ಮೇಲೆ ಬರಮಾಡಿದ್ದಾರೆ; ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)27 ಯೆಹೋವನು ಅವರ ದೇಶದ ಮೇಲೆ ಕೋಪಮಾಡಿ ಈ ಗ್ರಂಥದಲ್ಲಿ ಬರೆದಿರುವ ಶಾಪಗಳನ್ನು ಅವರ ಮೇಲೆ ಬರಮಾಡಿ ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ27 ಆದ್ದರಿಂದ ಯೆಹೋವ ದೇವರು ಇಸ್ರಾಯೇಲ್ ದೇಶದ ಮೇಲೆ ಕೋಪಗೊಂಡು ಈ ಗ್ರಂಥದಲ್ಲಿ ಬರೆದಿರುವ ಶಾಪಗಳನ್ನು ಅವರ ಮೇಲೆ ಬರಮಾಡಿದ್ದಾರೆ. ಅಧ್ಯಾಯವನ್ನು ನೋಡಿ |
ನಂತರ ಯೆಹೋವನು ಇಸ್ರೇಲರನ್ನು ಹೊಡೆಯುತ್ತಾನೆ. ಇಸ್ರೇಲಿನ ಜನರು ಬಹಳ ಭಯಗೊಳ್ಳುವರು. ಅವರು ನೀರಿನಲ್ಲಿ ಎತ್ತರವಾಗಿ ಬೆಳೆದಿರುವ ಹುಲ್ಲಿನಂತೆ ನಡುಗುವರು. ಯೆಹೋವನು ಇಸ್ರೇಲರನ್ನು ಈ ಶ್ರೇಷ್ಠವಾದ ದೇಶದಿಂದ ಚದರಿಸಿಬಿಡುವನು; ಆತನು ಈ ದೇಶವನ್ನು ಅವರ ಪೂರ್ವಿಕರಿಗೆ ಕೊಟ್ಟಿದ್ದನು. ಆತನು ಇಸ್ರೇಲರನ್ನು ಯೂಫ್ರೇಟೀಸ್ ನದಿಯ ಮತ್ತೊಂದು ಕಡೆಗೆ ಚದರಿಸಿಬಿಡುತ್ತಾನೆ. ಯೆಹೋವನು ಅವರ ಮೇಲೆ ಕೋಪಗೊಂಡಿರುವುದೇ ಅದಕ್ಕೆ ಕಾರಣ. ಅವರು ಅಶೇರ್ ವಿಗ್ರಹವನ್ನು ಆರಾಧಿಸಲು ವಿಶೇಷ ಸ್ತಂಭಗಳನ್ನು ಮಾಡಿಕೊಂಡಿದ್ದರಿಂದ ಆತನು ಅವರ ಮೇಲೆ ಕೋಪಗೊಂಡನು.